ಬೀದರ್ ಜಿಲ್ಲೆಯ ಕೆರೆ ಪುನಶ್ಚೇತನ, ಉದ್ಯಾನ ಅಭಿವೃದ್ಧಿಗೆ ₹110 ಕೋಟಿ : ಸಚಿವ ಈಶ್ವರ ಖಂಡ್ರೆ

Date:

Advertisements

ಬೀದರ್ ಜಿಲ್ಲೆಯಲ್ಲಿರುವ 29 ಕೆರೆಗಳ ಪುನಶ್ಚೇತನಕ್ಕೆ ₹77 ಕೋಟಿ ಹಾಗೂ 33 ಉದ್ಯಾನವನಗಳ ಅಭಿವೃದ್ಧಿಗೆ ₹23 ಕೋಟಿ ಅಮೃತ್ -2 ಅಡಿಯಲ್ಲಿ ಮಂಜೂರು ಮಾಡಲಾಗಿದ್ದು, ಇದನ್ನು ಸಮರ್ಪಕವಾಗಿ ಬಳಕೆ ಮಾಡಬೇಕೆಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಕಾಸಸೌಧದ 422ನೇ ಕೊಠಡಿಯಲ್ಲಿ ಗುರುವಾರ ಪೌರಾಡಳಿತ ಸಚಿವ ರಹೀಂ ಖಾನ್ ಅವರೊಂದಿಗೆ ಬೀದರ್ ಜಿಲ್ಲೆಯ ಕೆರೆಗಳ ಪುನಶ್ಚೇತನ ಮತ್ತು ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ತ್ವರಿತವಾಗಿ ಈ ಎಲ್ಲ ಕಾಮಗಾರಿ ಆರಂಭಿಸುವಂತೆ ತಿಳಿಸಿದರು.

ಈ ಬಾರಿಯ ವನಮಹೋತ್ಸವದ ವೇಳೆ ಬೀದರ್ ಹವಾಮಾನಕ್ಕೆ ಹೊಂದಿಕೊಳ್ಳುವಂತಹ ಸ್ಥಳೀಯ ಪ್ರಭೇದದ ಗಿಡಗಳನ್ನು ನೆಟ್ಟು ಬೆಳೆಸುವಂತೆ ಎತ್ತರದ ಸಸಿಗಳನ್ನು ನೆಟ್ಟರೆ ಅವು ಹೆಚ್ಚಿನ ಪ್ರಮಾಣದಲ್ಲಿ ಬದುಕಿ ಉಳಿಯುತ್ತವೆ ಹೀಗಾಗಿ ಈ ಬಾರಿ ಎತ್ತರದ ಸಸಿಗಳನ್ನು ನೆಡುವಂತೆ ನಿರ್ದೇಶನ ನೀಡಿದರು.

Advertisements

ಉದ್ಯಾನದಲ್ಲಿ ಪುತ್ಥಳಿಗೆ ಅವಕಾಶವಿಲ್ಲ:

‘ಯಾವುದೇ ಉದ್ಯಾನವನ ಪ್ರದೇಶದಲ್ಲಿ ಅನಧಿಕೃತವಾಗಿ ಯಾವುದೇ ಪುತ್ಥಳಿಯನ್ನು ಸ್ಥಾಪಿಸಲು ಅಥವಾ ದೇವಾಲಯ ನಿರ್ಮಾಣ ಮಾಡಲು ಅವಕಾಶ ನೀಡಬಾರದು. ಉದ್ಯಾನವನಗಳು ಉತ್ತಮ ಶ್ವಾಸ ತಾಣಗಳಾಗಿರಬೇಕು. ಇಲ್ಲಿ ಸ್ಥಳೀಯ ಪ್ರಬೇಧದ ಗಿಡಗಳನ್ನು ಬೆಳೆಸಬೇಕು’ ಎಂದು ಹೇಳಿದರು.

ಜಿಲ್ಲೆಯಲ್ಲಿರುವ 33 ಉದ್ಯಾನವನಗಳಲ್ಲಿ ಯಾವುದೂ ಒತ್ತುವರಿ ಆಗದಂತೆ ತಡೆಯಲು ಹಾಗೂ ಉದ್ಯಾನದಲ್ಲಿನ ಹೂಗಿಡಗಳನ್ನು ದರಕರುಗಳು ತಿನ್ನದಂತೆ ಕಾಪಾಡಲು ಗಟ್ಟಿಮುಟ್ಟಾದ ತಂತಿಬೇಲಿ ಹಾಕುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು.

‘ನಗರ, ಪಟ್ಟಣದ ಉದ್ಯಾನವನಗಳನ್ನು ವಿಶ್ವದರ್ಜೆಯ ಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಅಭಿವೃದ್ಧಿಪಡಿಸಬೇಕು, ಮಕ್ಕಳ ಆಟಿಕೆಗಳನ್ನು ಅಳವಡಿಸಿ, ನಿರ್ವಹಣೆ ಮಾಡಬೇಕು ಮತ್ತು ಅಲ್ಲಿರುವ ವೃಕ್ಷಗಳ ಮೇಲೆ ಅವುಗಳ ಪ್ರಭೇದ, ವೈಶಿಷ್ಟ್ಯದ ಫಲಕ ಹಾಕಿ ಮಕ್ಕಳಿಗೆ ಪ್ರಕೃತಿ, ಪರಿಸರದ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.

ಕೆರೆಗಳ ಹೂಳು ತೆಗೆಯಲು ಸೂಚನೆ : ಕೆರೆಗಳ ಸ್ವಚ್ಛತೆ ಅತಿ ಮುಖ್ಯವಾಗಿದೆ. ಕೆರೆಗಳಿಗೆ ತ್ಯಾಜ್ಯ ಜಲ ಸೇರಿದರೆ ಜನ, ಜಾನುವಾರಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜಲಚರಗಳು ಸಾವಿಗೀಡಾಗುತ್ತವೆ. ಹೀಗಾಗಿ ಜಿಲ್ಲೆಯ ಎಲ್ಲ 29 ಕೆರೆಗಳ ಹೂಳು ತೆಗೆಯುವಂತೆ ಮತ್ತು ಕೆರೆಗೆ ಸಂಸ್ಕರಣೆ ಆಗದ ತ್ಯಾಜ್ಯ ಜಲ ಹರಿಯಲು ಅವಕಾಶ ನೀಡದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಎಸ್‌ಟಿಪಿ ಸ್ಥಾಪನೆ : ನಗರ, ಪಟ್ಟಣಕ್ಕೆ ಹೊಂದಿಕೊಂಡಿರುವ ಕೆರೆಗಳ ಬಳಿ ತ್ಯಾಜ್ಯ ಜಲ ಸಂಸ್ಕರಣಾ ಘಟಕ (ಎಸ್‌ಟಿಪಿ) ಸ್ಥಾಪಿಸಿ, ಜಲ ಶುದ್ಧೀಕರಣವಾದ ಬಳಿಕವಷ್ಟೇ ಕೆರೆಗೆ ಹರಿಸಬೇಕು. ಇದಕ್ಕೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಎಂದು ಈಶ್ವರ ಖಂಡ್ರೆ ಸೂಚನೆ ನೀಡಿದರು.

ಈಗಾಗಲೇ ಸ್ಥಾಪಿಸಲಾಗಿರುವ ಎಸ್‌ಟಿಪಿಗಳು ಕಾರ್ಯ ನಿರ್ವಹಿಸುತ್ತಿದೆಯೇ ಇಲ್ಲವೇ ಎಂಬುದನ್ನು ಖಾತ್ರಿಪಡಿಸಿಕೊಳ್ಳುವಂತೆ ಸೂಚಿಸಿದ ಅವರು, ಜಲ ಮೂಲಗಳ ನಿಯಮಿತ ಪರಿಶೀಲನೆ ನಡೆಸುವಂತೆ ತಿಳಿಸಿದರು.

ಭಾಲ್ಕಿಯ ಮಾಸೂಂಪಾಶಾ ಕಾಲೋನಿಯಲ್ಲಿರುವ 8 ಎಕರೆ ಕೆರೆ ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಹಾಗೂ ಏರಿ ನಿರ್ಮಾಣ ಮಾಡಲು ಸೂಚನೆ ನೀಡಿದರು.

ಇದನ್ನೂ ಓದಿ : ಬಸವಕಲ್ಯಾಣ | ಧಾರಾಕಾರ ಮಳೆಗೆ ಕೊಚ್ಚಿ ಹೋದ ಸೇತುವೆ : ಸ್ಥಳಕ್ಕೆ ಶಾಸಕ ಶರಣು ಸಲಗರ ಭೇಟಿ

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಪೌರಾಡಳಿತ ಇಲಾಖೆ ನಿರ್ದೇಶಕ ಪ್ರಭುಲಿಂಗ್ ಕವಳಿಕಟ್ಟಿ ಮತ್ತು ಜಿಲ್ಲೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X