ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಬಿ ಆರ್ ಅಂಬೇಡ್ಕರ್ ಮೂರ್ತಿ ಹಾಗೂ ಅದರ ಮುಂಭಾಗದಲ್ಲಿರುವ ಪೋಸ್ಟರ್‌ಗೆ ಕಿಡಿಗೇಡಿಗಳು ಬಣ್ಣ ಸಿಡಿಸಿದ್ದಾರೆ ಎಂದು ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.
“ನಗರದ ಕೋರ್ಟ್ ಮುಂಭಾಗ ಇರುವ ಡಾ. ಬಿ ಆರ್ ಅಂಬೇಡ್ಕರ್ ಮೂರ್ತಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.
“ಕಿಡಿಗೇಡಿಗಳು ನಗರದಲ್ಲಿ ಕೋಮುಗಲಭೆ ಸೃಷ್ಟಿಸಲು ಹಾಗೂ ಶಾಂತಿ ಭಂಗ ತರುವುದಕ್ಕೆ ಹುನ್ನಾರ ನಡೆಸುತ್ತಿದ್ದಾರೆ. ಅವಮಾನ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕು. ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ನಿಗಾ ವಹಿಸಬೇಕು ಹಾಗೂ ಸಿಸಿ ಕ್ಯಾಮೆರಾ ಅಳವಡಿಸಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣ; ಉಪ ತಹಶೀಲ್ದಾರ್ ಅಮಾನತು
ಈ ವೇಳೆ ದಲಿತ ಸಂಘಟನೆಗಳು, ಪ್ರಗತಿಪರ ಸಂಘಟನೆಯ ಮುಖಂಡರು ಸೇರಿದಂತೆ ಇತರರು ಇದ್ದರು.