ಸ್ವಚ್ಛ ನಗರಗಳಲ್ಲಿ 27ನೇ ಸ್ಥಾನಕ್ಕೆ ಕುಸಿದ ಮೈಸೂರು

Date:

Advertisements

2016ರಲ್ಲಿ ರಾಷ್ಟ್ರಮಟ್ಟದ ಸ್ವಚ್ಛ ಸರ್ವೇಕ್ಷಣ್‌ನಲ್ಲಿ ಮೊದಲ ಸ್ಥಾನದಲ್ಲಿದ್ದ ಮೈಸೂರು ನಗರ 2023ರ ಸಮೀಕ್ಷೆಯಲ್ಲಿ 27ನೇ ಸ್ಥಾನಕ್ಕೆ ಕುಸಿದಿರುವುದು ಕಂಡುಬಂದಿದೆ.

2022ರಲ್ಲಿ ಮೈಸೂರು 14ನೇ ಸ್ಥಾನದಲ್ಲಿತ್ತು. ರ‍್ಯಾಂಕಿಂಗ್ ವ್ಯವಸ್ಥೆಯಲ್ಲಿನ ಬದಲಾವಣೆ ಮತ್ತು ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ ಸೌಲಭ್ಯದ ಕೊರತೆಯು ಕಳಪೆ ಸಾಧನೆಗೆ ಕಾರಣವಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಹೇಳುತ್ತಾರೆ.

“ಕೆಲವು ವರ್ಷಗಳ ಹಿಂದೆ ಪ್ರಸ್ತಾಪಿಸಲಾದ ಅವಶೇಷಗಳ ತ್ಯಾಜ್ಯ ಘಟಕವನ್ನು ನಿರ್ಮಿಸುವ ಯೋಜನೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಆದರೂ ಮೈಸೂರು ಕರ್ನಾಟಕದ ಮೊದಲ ಸ್ವಚ್ಛ ನಗರವಾಗಿದೆ. 3ರಿಂದ 10 ಲಕ್ಷ ಮಂದಿ ಜನಸಂಖ್ಯೆ ವಿಭಾಗದಲ್ಲಿ ಅಖಿಲ ಭಾರತ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿದೆ. ಈ ವರ್ಷದ ಥೀಮ್ ‘ತ್ಯಾಜ್ಯದಿಂದ ಸಂಪತ್ತಿಗೆ’ ಆಗಿತ್ತು. ತ್ರೈಮಾಸಿಕ ಮೌಲ್ಯಮಾಪನಗಳು, ಪ್ರಮಾಣೀಕರಣಗಳ ಅಂಕಗಳು (ಬಯಲು ಮಲವಿಸರ್ಜನೆ ಮುಕ್ತ ಮತ್ತು ಕಸ ಮುಕ್ತ ನಗರಗಳು) ಮತ್ತು ಸ್ವಚ್ಛ ಸರ್ವೇಕ್ಷಣ್ (ನೇರ ವೀಕ್ಷಣೆ, ನಾಗರಿಕರ ಪ್ರತಿಕ್ರಿಯೆ ಮತ್ತು ಸೇವಾ ಮಟ್ಟದ ಪ್ರಗತಿ) ಆಧಾರದ ಮೇಲೆ ಶ್ರೇಯಾಂಕವನ್ನು ನಿರ್ಧರಿಸಲಾಗುತ್ತದೆ” ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಸ್ವಚ್ಛ ಸರ್ವೇಕ್ಷಣ್-2023 | ಬೆಂಗಳೂರಿಗೆ ರಾಷ್ಟ್ರಮಟ್ಟದಲ್ಲಿ 125ನೇ ಸ್ಥಾನ

“ರಾಷ್ಟ್ರಮಟ್ಟದ ರ‍್ಯಾಂಕಿಂಗ್‌ನಲ್ಲಿ ಮೈಸೂರು 27ನೇ ಸ್ಥಾನಕ್ಕೆ ಕುಸಿದಿದೆ. ಈ ವರ್ಷ ಶ್ರೇಯಾಂಕ ವ್ಯವಸ್ಥೆಯ ನಿಯಮಗಳು ಬದಲಾಗಿವೆ. ಅಲ್ಲದೆ, ಮೈಸೂರು ನಗರವು ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ ಮೂಲಸೌಕರ್ಯಗಳನ್ನು ಮೈಸೂರು ನಗರವು ಇನ್ನೂ ರಚಿಸಿಲ್ಲ. ಅಂತಹ ಸೌಲಭ್ಯದ ಕೊರತೆಯು ಶ್ರೇಯಾಂಕದಲ್ಲಿ ನಗರಕ್ಕೆ ಪ್ರತಿಕೂಲವಾಗಿದೆ” ಎಂದು ಮೈಸೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಎನ್ ಪಿ ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X