ರಾಜ್ಯದಲ್ಲಿ ಶೇ.14 ರಷ್ಟು ಮಳೆ ಕೊರತೆ; ಸೆ.1ರಿಂದ ಸಾಧಾರಣ ಮಳೆ ಸಾಧ್ಯತೆ

Date:

ಈ ವರ್ಷ ಮುಂಗಾರು ವಾಡಿಕೆಯಂತೆ ರಾಜ್ಯಕ್ಕೆ ಆಗಮಿಸದ ಕಾರಣ, ಜೂನ್‌ನಲ್ಲಿ ಮಳೆಯ ಕೊರತೆ ಎದುರಾಗಿತ್ತು. ಬಳಿಕ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದು, ರಾಜ್ಯದ ಬಹುತೇಕ ಜಲಾಶಯಗಳು ತುಂಬಿ ಹರಿದಿದ್ದವು. ಇದೀಗ, ಆಗಸ್ಟ್‌ನಲ್ಲಿ ವಾಡಿಕೆಯಂತೆ ಮಳೆಯಾಗಿಲ್ಲ. ಹಾಗಾಗಿ, ಜೂನ್‌ನಿಂದ ಇಲ್ಲಿಯವರೆಗೂ ರಾಜ್ಯದಲ್ಲಿ ಶೇ.14 ರಷ್ಟು ಮಳೆ ಕೊರತೆ ಕಂಡಿದೆ.

ಜೂನ್‌ನಿಂದ ಇಲ್ಲಿಯವರೆಗೂ 57.3 ಸೆಂ.ಮೀ ಮಳೆಯಾಗಬೇಕಿತ್ತು. ಆದರೆ, 49.6 ಸೆಂ.ಮೀ ಮಳೆಯಾಗಿದೆ. ಇದರಿಂದ ಶೇ. 14ರಷ್ಟು ಮಳೆ ಕೊರತೆ ಉಂಟಾಗಿದೆ. ಸೆಪ್ಟೆಂಬರ್ 1 ರಿಂದ 7ರವರೆಗೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗಲಿದ್ದು, ರಾಜ್ಯದಲ್ಲಿ 5 ಮಿಮೀ ನಿಂದ 10 ಮಿಮೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಈ ವರ್ಷ ಡೆಂಗ್ಯೂ ಪ್ರಕರಣಗಳಲ್ಲಿ ಶೇ. 22ರಷ್ಟು ಏರಿಕೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಉತ್ತರ ಒಳನಾಡಿನಲ್ಲಿ ವಾಡಿಕೆಯಂತೆ 28.2 ಸೆಂ.ಮೀ ಮಳೆಯಾಗಿದೆ. ಕರಾವಳಿ ಕರ್ನಾಟಕದಲ್ಲಿ 249ಸೆಂ.ಮೀ ವಾಡಿಕೆ ಮಳೆಯಾಗಿದ್ದು, 216.6ಸೆಂ.ಮೀ ಮಳೆ ಬಿದ್ದಿದೆ. ಅದೇ ರೀತಿ, ದಕ್ಷಿಣ ಒಳನಾಡಿನಲ್ಲಿ 44.8 ಸೆಂ.ಮೀ ವಾಡಿಕೆ ಮಳೆಯಾಗಿದ್ದು, 34.6ಸೆಂ.ಮೀ ಮಳೆಯಾಗಿದೆ. ದಕ್ಷಿಣ ಒಳನಾಡು, ರಾಮನಗರ ಜಿಲ್ಲೆಯಲ್ಲಿ ಶೇ. 46ರಷ್ಟು ಮಳೆ ಕೊರತೆ ಎದುರಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನೀಟ್ ಅವ್ಯವಹಾರ: ನ್ಯಾಯಾಂಗ ತನಿಕೆಗೆ ಡಿವಿಪಿ ಆಗ್ರಹ

ನೀಟ್‌ ಪರೀಕ್ಷೆಯಲ್ಲಿ ನಡೆದಿರುವ ಭ್ರಷ್ಟಾಚಾರ, ಅವ್ಯವಹಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು....

ದರ್ಶನ್ ಪ್ರಕರಣ | ವಿಶೇಷ ಪ್ರಾಸಿಕ್ಯೂಟ‌ರ್ ಆಗಿ ಪಿ ಪ್ರಸನ್ನ ಕುಮಾರ್‌ ನೇಮಕ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 19 ಆರೋಪಿಗಳು...