ಕಲಬುರಗಿ | ಜಿಲ್ಲೆಯಲ್ಲಿ ಮೂರು ವರ್ಷಗಳಲ್ಲಿ 141 ಕೊಲೆ : ಗೃಹ ಸಚಿವ ಜಿ.ಪರಮೇಶ್ವರ

Date:

ಕಳೆದ ಮೂರು ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 141 ಕೊಲೆ ಪ್ರಕರಣಗಳು ನಡೆದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ.

- Advertisement -

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ವಿಧಾನಪರಿಷತ್ ಸದಸ್ಯ ಸುನಿಲ್ ವಲ್ಯಾಪುರೆ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ʼ2022ರಲ್ಲಿ 56 ಕೊಲೆ ಪ್ರಕರಣಗಳ ಪೈಕಿ 44 ಪ್ರಕರಣಗಳ ಆರೋಪಿಗಳನ್ನು ಬಂಧಿಸಲಾಗಿದೆ. 2023ರಲ್ಲಿ 55 ಪ್ರಕರಣಗಳಲ್ಲಿ 40 ಪ್ರಕರಣಗಳ ಆರೋಪಿಗಳನ್ನು ಬಂಧಿಸಲಾಗಿದೆ. 2024ರಲ್ಲಿ 30 ಕೊಲೆ ಪ್ರಕರಣಗಳು ನಡೆದಿದ್ದು, 23 ಪ್ರಕರಣಗಳ ಆರೋಪಿತರನ್ನು ಬಂಧಿಸಲಾಗಿದೆʼ ಎಂದು ತಿಳಿಸಿದರು. ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ವೈಯಕ್ತಿಕ ದ್ವೇಷ, ಆಸ್ತಿ ವ್ಯಾಜ್ಯ ಮತ್ತು ಅನೈತಿಕ ಸಂಬಂಧಗಳ ಹಿನ್ನಲೆಯಲ್ಲಿ ಕೊಲೆಗಳಾಗಿವೆ. ಕೊಲೆ ಆರೋಪಿಗಳನ್ನು ಸಕಾಲದಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಸೂಕ್ತ ಕಾನೂನಿನ ಅಡಿ ಕ್ರಮ ಜರುಗಿಸಲಾಗುತ್ತಿದೆʼ ಎಂದಿದ್ದಾರೆ.

ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ 25 ಕೊಲೆ ಪ್ರಕರಣಗಳು ನಡೆದಿವೆ. ಅತೀ ಹೆಚ್ಚು ಕೊಲೆ ಪ್ರಕರಣಗಳು ಇದೇ ತಾಲ್ಲೂಕಿನಲ್ಲಿ ನಡೆದಿವೆ. ನಂತರದ ಸ್ಥಾನದಲ್ಲಿ ಚಿಂಚೋಳಿ 24, ಆಳಂದ 19, ಚಿತ್ತಾಪುರ 16, ಸೇಡಂ 16, ಜೇವರ್ಗಿ 12, ಕಾಳಗಿ 10, ಕಮಲಾಪುರ 80, ಯಡ್ರಾಮಿ 6 ಹಾಗೂ ಶಹಾಬಾದ್ 4 ಕೊಲೆ ಪ್ರಕರಣಗಳು ನಡೆದಿವೆ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼಸೇವಂತಿಗೆʼ ಕೃಷಿಯಲ್ಲಿ ಯಶಸ್ಸು ಕಂಡ ಯುವ ರೈತ : ತಿಂಗಳಿಗೆ ಒಂದು ಲಕ್ಷ ಆದಾಯ!

ಮೂರು ವರ್ಷ ಅವಧಿಯಲ್ಲಿ‌ 416 ಮಟ್ಕಾ ಹಾಗೂ 18 ಕ್ರಿಕೆಟ್ ಬೆಟ್ಟಿಂಗ್‌ ಪ್ರಕರಣಗಳು ದಾಖಲಾಗಿವೆ. ಒಟ್ಟು 259 ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...