15 ಕೆಜಿ ಟೊಮೆಟೊ ಬರೋಬ್ಬರಿ ₹2,200ಕ್ಕೆ ಮಾರಾಟ

Date:

ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಮಂಗಳವಾರ 15 ಕೆಜಿ ಟೊಮೆಟೊ ಬಾಕ್ಸ್‌ ಬರೋಬ್ಬರಿ 2,200 ರೂ.ಗೆ ಮಾರಾಟವಾಗಿದೆ. ಈ ಮಾರುಕಟ್ಟೆಯು ದೇಶದ ಹೆಚ್ಚಿನ ಭಾಗಗಳಿಗೆ ಟೊಮೆಟೊ ರಫ್ತು ಮಾಡುವ ಕೇಂದ್ರವಾಗಿದೆ. ಜೊತೆಗೆ, ಇಲ್ಲಿಂದ ಮಾರಾಟವಾಗುವ ಟೊಮೆಟೊ ಚಿಲ್ಲರೆ ಮಾರುಕಟ್ಟೆಯಲ್ಲಿ ಮತ್ತಷ್ಟು ಹೆಚ್ಚಿನ ಬೆಲೆಗೆ ಮಾರಾಟವಾಗುತ್ತದೆ.

- Advertisement -

ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ಬೆಲೆ ಅತ್ಯಧಿಕವಾಗಿತ್ತು. ಆದರೆ ಇದು ಹಿಂದೆಂದೂ ಕಾಣದ ಗರಿಷ್ಠ ಬೆಲೆಯಾಗಿದೆ ಎಂದು ಕೆಲವರು ಹೇಳುತ್ತಿದ್ದಾರೆ. 2021ರಲ್ಲಿ ಒಂದು ಬಾಕ್ಸ್‌ ಟೊಮೆಟೊ 2,000 ರೂ.ಗೆ ಮಾರಾಟವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಇದೇ ಬೆಲೆ ಹೀಗೆ ಮುಂದುವರಿದರೆ ಅಥವಾ ಮತ್ತಷ್ಟು ಏರಿಕೆಯಾಗಿದೆ, ನಗರದಲ್ಲಿ ಒಂದು ಕೆಜಿ ಟೊಮೆಟೊ ಬೆಲೆ 200 ರೂ.ಗೆ ಹೆಚ್ಚುವ ಸಾಧ್ಯತೆ ದಟ್ಟವಾಗಿದೆ” ಎಂದು ವರ್ತಕರು ಹೇಳುತ್ತಿದ್ದಾರೆ.

ರಾಜ್ಯದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಟೊಮೆಟೊ ಬೆಳೆಯುವ ಪ್ರಮುಖ ಜಿಲ್ಲೆಗಳಾಗಿವೆ. ಇಲ್ಲಿನ ಟೊಮೆಟೊ ಮುಖ್ಯವಾಗಿ ದಕ್ಷಿಣ ಭಾರತಕ್ಕೆ ಹೆಚ್ಚು ಪೂರೈಕೆಯಾಗುತ್ತದೆ. ಮಹಾರಾಷ್ಟ್ರದ ನಾಸಿಕ್ ಪ್ರದೇಶದಲ್ಲಿ ಟೊಮೆಟೊ ಬೆಳೆ ವಿಫಲವಾದ ಕಾರಣ, ದಕ್ಷಿಣ ರಾಜ್ಯಗಳ ಜೊತೆಗೆ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಬಾಂಗ್ಲಾದೇಶಕ್ಕೂ ಕೋಲಾರ ಮಾರುಕಟ್ಟೆಯಿಂದ ಟೊಮೆಟೊ ಪೂರೈಕೆಯಾಗುತ್ತಿದೆ. ಪರಿಣಾಮವಾಗಿ ಬೆಲೆ ಏರಿಕೆಯಾಗಿದೆ. ಜೊತೆಗೆ, ಬಿಳಿ ನೊಣ ರೋಗ ಮತ್ತು ಕರ್ಲಿ ಎಲೆಗಳ ರೋಗದಿಂದಾಗಿ ಟೊಮೆಟೊಗೆ ಇಳುವರಿ ಕಡಿಮೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...