ರಾಮನಗರ | ಕಾಡಾನೆ ದಾಳಿಗೆ ಸಾವು; ಕುಟುಂಬಕ್ಕೆ ಸಚಿವರಿಂದ ಪರಿಹಾರದ ಚೆಕ್‌ ವಿತರಣೆ

Date:

ರಾಮನಗರ ಜಿಲ್ಲೆ ಕನಕಪುರ ಬಳಿಯ ಮುತ್ತುರಾಯನ ದೊಡ್ಡಿ ಗ್ರಾಮಕ್ಕೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸತ್ ಸದಸ್ಯ ಡಿ ಕೆ ಸುರೇಶ್ ಭಾನುವಾರ ಭೇಟಿ ನೀಡಿ ಇತ್ತೀಚೆಗೆ ಕಾಡಾನೆ ದಾಳಿಯಿಂದ ಮೃತಪಟ್ಟ ವೀರಭದ್ರ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸಾಂಕೇತಿಕವಾಗಿ 15 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ವಿತರಿಸಿದರು. ಮೃತರ ಪತ್ನಿ ಮತ್ತು ಕುಟುಂಬದವರಿಗೆ ಬ್ಯಾಂಕ್ ಖಾತೆ ಇಲ್ಲದ ಕಾರಣ ತಕ್ಷಣವೇ ಬ್ಯಾಂಕ್ ಖಾತೆ ತೆರೆಸಿ ಆರ್.ಟಿ.ಜಿ.ಎಸ್. ಮೂಲಕ ಹಣ ಜಮಾ ಮಾಡುವಂತೆ ಸಚಿವರು ಹಾಗೂ ಸಂಸದರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವಂತೆ ಸಹ ಪಾಲಕರಿಗೆ ಮನವಿ ಮಾಡಿದರು. ಜಿಲ್ಲೆಯಲ್ಲಿ ವನ್ಯ ಮೃಗಗಳ ದಾಳಿಯನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ವಿಧಾನ ಪರಿಷತ್ ಸದಸ್ಯ ಎಸ್ ರವಿ ಅವರು ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ಸಚಿವ ವೆಂಕಟೇಶ್ ಹೇಳಿಕೆಯಿಂದ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋಹತ್ಯೆ‌ ತಲೆ ಎತ್ತಲಿದೆ: ಮಾಜಿ ಸಿಎಂ ಬೊಮ್ಮಾಯಿ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂದಾಯ ಕರ್ಮಕಾಂಡ -3 | ಲಂಚವಿಲ್ಲದೆ ಈ ಇಲಾಖೆಯಲ್ಲಿ ಒಂದು ಕಡತವೂ ಚಲಿಸುವುದಿಲ್ಲ!

'ಇತ್ತೀಚಿನ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಉನ್ನತ ಶ್ರೇಣಿಯಿಂದ ಕೆಳಹಂತದವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ....

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ...

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...