ಹೃದಯಾಘಾತದಿಂದ 17 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಕೊರೇಶ್ ಸಿದ್ದಣ್ಣ ಮದ್ರಿ (17) ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಸ್ನೇಹಿತರ ಜತೆ ಕುಳಿತಾಗ ತೀವ್ರ ಎದೆನೋವು ಕಾಣಿಸಿಕೊಂಡಿದೆ, ಕೂಡಲೇ ಜೊತೆಗಿದ್ದ ಸ್ನೇಹಿತರು ನಾಲವಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ತೆರಳುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ ಎಂದು ಎನ್ನಲಾಗಿದೆ.
ಒಬ್ಬನೇ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳೀಯವಾಗಿ ಚಿಕಿತ್ಸೆ ಲಭ್ಯವಿದ್ದರೆ ಅನಾಹುತ ಸಂಭವಿಸುತ್ತಿರಲಿಲ್ಲ ಎಂದು ಸ್ಥಳೀಯರು ಆಡಳಿತ ವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.