ಬಾಗಲಕೋಟೆ | ಗ್ರಾಮ ಜಲಾವೃತ, ಜಮೀನು ಮುಳುಗಡೆ; ತಮ್ಮೂರು ಬಿಡಲು ಗ್ರಾಮಸ್ಥರ ನಕಾರ

Date:

ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೃಷ್ಣಾ ನದಿ ತುಂಬಿ ಹರಿಯುತ್ತಿದೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಆಲಮಟ್ಟಿ ಜಲಾಶಯವೂ ತುಂಬಿದ್ದು, ನದಿಗೆ ಹೆಚ್ಚಿನ ನೀರು ಹರಿಸಲಾಗುತ್ತಿದೆ. ಪರಿಣಾಮ,  ಕೃಷ್ಣಾ ನದಿ ತೀರದ ಹಳ್ಳಿಗಳು, ಜಮೀನುಗಳಿಗೆ ನೀರು ನುಗ್ಗಿ ಜಲಾವೃತಗೊಂಡಿವೆ.

- Advertisement -

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಕೃಷ್ಣಾ ತೀರದ ಕೆಲ ಹಳ್ಳಿಗಳ ಜಮೀನುಗಳು ನೀರಿನಲ್ಲಿ ಮುಳುಗಡೆಯಾಗಿವೆ. ತಾಲೂಕಿನ ಮುತ್ತೂರು, ನಡುಗಡ್ಡೆ ಗ್ರಾಮಗಳು ಜಲಾವೃತಗೊಂಡಿವೆ. ಹೀಗಾಗಿ, ನಡುಗಡ್ಡೆ ಗ್ರಾಮದ 40 ಕುಟುಂಬಗಳ ಪೈಕಿ ಎಂಟು ಕುಟುಂಬಗಳನ್ನು ಮಾತ್ರವೇ ಸ್ಥಳಾಂತರಿಸಲಾಗಿದೆ. ಆದರೆ, ಉಳಿದ 32 ಕುಟುಂಬಗಳ ತಮ್ಮೂರು ಬಿಟ್ಟು ಬರುಲು ನಿರಾಕರಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನಡುಗಡ್ಡೆ ಜಾಲಾವೃತಗೊಂಡಿರುವುದರಿಂದ ಬೋಟ್‌ಗಳ ಮೂಲಕ ಕೇವಲ 8 ಕುಟುಂಬಗಳು, 38 ಜನರು, 80 ಜಾನುವಾರಗಳು ಶುಕ್ರವಾರ ಸ್ಥಳಾಂತರ ಮಾಡಲಾಗಿದೆ. ಉಳಿದ 32 ಕುಟುಂಬಗಳ 180 ಜನರು, 120 ಜಾನುವಾರುಗಳು ಗ್ರಾಮದಲ್ಲಿಯೇ ಉಳಿದಿವೆ ಎಂದು ವರದಿಯಾಗಿದೆ.

krishna river1

ಸ್ಥಳಾಂತರಗೊಂಡಿರುವ ಜನರೂ ಕೂಡ ಸ್ಥಳೀಯ ಆಡಳಿತ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಮಳೆಯಾದಾಗಲೆಲ್ಲ ನಮ್ಮನ್ನು ಸ್ಥಳಾಂತರ ಮಾಡಲಾಗುತ್ತದೆ. ಜೀವ ಭಯದಿಂದ ನಾವು ಹೋಗುತ್ತೇವೆ. ಆದರೆ, ಸ್ಥಳಾಂತರಗೊಂಡು ನೀರು ಕಡಿಮೆಯಾದ ಬಳಿಕ ಮರಳು ಊರಿಗೆ ಬರಲು ಕನಿಷ್ಠ 15,000 ಖರ್ಚಾಗುತ್ತದೆ. ಈ ವೆಚ್ಚವನ್ನೂ ನಾವೇ ಭರಿಸಬೇಕು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸ್ಥಳಾಂತರಗೊಂಡಿರುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...