ಪಂಚ ಗ್ಯಾರಂಟಿಗಳಿಂದ ಉತ್ತರ ಕನ್ನಡ ಜಿಲ್ಲೆಗೆ 1922.85 ಕೋಟಿ ನೆರವು: ಸತೀಶ್ ನಾಯ್ಕ

Date:

ಉತ್ತರ ಕನ್ನಡ ಜಿಲ್ಲೆಯು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಲ್ಲಿ ರಾಜ್ಯದ ಮಾದರಿ ಜಿಲ್ಲೆಯಾಗಿದ್ದು, ಈ ಸಾಧನೆಗೆ ಜಿಲ್ಲೆಯ ಗ್ಯಾರಂಟಿ ಪ್ರಾಧಿಕಾರದ ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಇಲಾಖೆಯ ಅಧಿಕಾರಿಗಳ ಸಮನ್ವಯ ಕಾರ್ಯವೇ ಕಾರಣವಾಗಿದೆ. ಗೃಹಲಕ್ಷ್ಮೀ, ಶಕ್ತಿ, ಯುವನಿಧಿ, ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆಗಳಡಿ ಒಟ್ಟು 1922.85 ಕೋಟಿಯಷ್ಟು ಅನುದಾನ ಜಿಲ್ಲೆಗೆ ಹರಿದುಬಂದಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ಪಾಂಡುರಂಗ ನಾಯ್ಕ ಹೇಳಿದ್ದಾರೆ.

- Advertisement -

ಮಂಗಳವಾರ ಜಿಲ್ಲಾ ಪಂಚಾಯತ್‌ನ ಕೆಸ್ವಾನ್ ಸಭಾಭವನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಗಂಭೀರ ಸಮಸ್ಯೆಗಳು ಎದುರಾಗಿಲ್ಲ. ಮಧ್ಯವರ್ತಿಗಳು ಅಥವಾ ಭ್ರಷ್ಟಾಚಾರಕ್ಕೆ ಅವಕಾಶ ನೀಡದೇ, ಯೋಜನೆಗಳು ನೇರವಾಗಿ ಜನತೆಗೆ ತಲುಪುತ್ತಿದೆ. ಪ್ರತಿ ಕುಟುಂಬಕ್ಕೂ ತಿಂಗಳಿಗೆ ರೂ.5,000 ರಿಂದ ರೂ.6,000 ರ ನೆರವು ದೊರೆಯುತ್ತಿದ್ದು, ಈ ಯೋಜನೆಗಳು ಬಡವರ ಪಾಲಿಗೆ ಕಲ್ಪವೃಕ್ಷವಾಗಿವೆ,” ಎಂದರು.

ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ಆರ್ಥಿಕ ಚೈತನ್ಯ ದೊರೆತಿದ್ದರೂ, ಬಸ್‌ಗಳು ಆಗಾಗ್ಗೆ ಮಾರ್ಗ ಮಧ್ಯೆ ಕೆಟ್ಟು ನಿಲ್ಲುತ್ತಿರುವುದು ಏಕೆ,‌ ಮುಂದಿನ ದಿನಗಳಲ್ಲಿ ಸಾರಿಗೆ ಅಧಿಕಾರಿಗಳು ಗುಣಮಟ್ಟದ ಬಿಡಿಭಾಗಗಳನ್ನು ಬಳಸಿ ವಾಹನ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಹಾಗೂ ಗ್ರಾಮೀಣ ಭಾಗದಲ್ಲಿ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ನಿಗಾವಹಿಸಿಲು ಅಧಿಕಾರಿಗಳಿಗೆ ತಿಳಿಸಿದರು. ಜೊತೆಗೆ ಬಸ್ ನಿಲ್ದಾಣಗಳಲ್ಲಿನ ಶೌಚಾಲಯ ಹಾಗೂ ಮೂಲಭೂತ ಸೌಕರ್ಯಗಳ ಸುಧಾರಣೆಗೂ ಒತ್ತು ನೀಡುವಂತೆ ಹೇಳಿದರು. ಯುವನಿಧಿ ಯೋಜನೆಯಡಿ ಈಗಾಗಲೇ ನೆರವು ಪಡೆದಿರುವವರಿಗೆ ಕಡ್ಡಾಯವಾಗಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ, ತರಬೇತಿಯ ನಂತರ ಉದ್ಯೋಗಾವಕಾಶ ಒದಗಿಸುವತ್ತ ಇಲಾಖೆಗಳು ಕ್ರಮ ವಹಿಸಬೇಕೆಂದು ಅವರು ಸಲಹೆ ನೀಡಿದರು.

ಗೃಹಲಕ್ಷ್ಮಿ ಯೋಜನೆಯಡಿ ಬಿಡುಗಡೆಯಾದ ಜುಲೈ ತಿಂಗಳ ಮೊತ್ತವನ್ನು ಎರಡು ದಿನಗಳೊಳಗೆ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಸೂಚಿಸಿದ ಅವರು, “ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಶೇ.99.96 ರಷ್ಟು ಸಾಧನೆ ಮಾಡಿದೆ. ಉಳಿದ ಫಲಾನುಭವಿಗಳನ್ನು ಯೋಜನೆಯ ವ್ಯಾಪ್ತಿಗೆ ತರಲು ತಾಲ್ಲೂಕು ಮಟ್ಟದಲ್ಲಿ ಅದಾಲತ್‌ಗಳನ್ನು ಆಯೋಜಿಸಬೇಕು. ಜಿಲ್ಲೆಯ ಯಾವುದೇ ಅರ್ಹ ಮಹಿಳೆ ಯೋಜನೆಯಿಂದ ವಂಚಿತರಾಗಬಾರದು,” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ

ಅನ್ನಭಾಗ್ಯ ಯೋಜನೆ: ರೂ.152.51 ಕೋಟಿ, ಶಕ್ತಿ ಯೋಜನೆ: 13.72 ಕೋಟಿ ಮಹಿಳೆಯರಿಗೆ ರೂ.404.49 ಕೋಟಿ, ಗೃಹಲಕ್ಷ್ಮಿ ಯೋಜನೆ: 32,823 ಮಹಿಳೆಯರಿಗೆ ರೂ.1299.20 ಕೋಟಿ, ಯುವನಿಧಿ ಯೋಜನೆ: ರೂ.15.30 ಕೋಟಿ, ಗೃಹಜ್ಯೋತಿ ಯೋಜನೆ: 455.84 ಕೋಟಿ ಸೇರಿ ಪಂಚ ಗ್ಯಾರಂಟಿ ಯೋಜನೆಗಳಡಿ ಇದುವರೆಗೆ ಉತ್ತರ ಕನ್ನಡ ಜಿಲ್ಲೆಗೆ ಸಾಕಷ್ಟು ನೆರವು ಒದಗಿಸಲಾಗಿದೆ.

ಸಭೆಯಲ್ಲಿ ಉಪಾಧ್ಯಕ್ಷ ಜನಾರ್ಧನ ಕುಪ್ಪ ದೇವಾಡಿಗ, ಸದಸ್ಯರು ಪಾಂಡುರಂಗ ಗೌಡ ಅಂಕೋಲಾ, ರಾಜೇಂದ್ರ ರಾಣೆ ಕಾರವಾರ, ದೇವಿದಾಸ ಶಾನುಭಾಗ ಯಲ್ಲಾಪುರ, ಅಣ್ಣಪ್ಪ ನಾಯ್ಕ ಮಂಕಿ, ರಾಜು ನಾಯ್ಕ ಭಟ್ಕಳ, ಅಶೋಕ್ ಗೌಡ ಕುಮಟಾ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಆನಂದ್‌ಸಾ ಹಬೀಬ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ, ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣಕರ, ಜಿಲ್ಲಾ ಉದ್ಯೋಗಾಧಿಕಾರಿ ವಿನೋದ ನಾಯ್ಕ, ಕೌಶಲ್ಯಾಭಿವೃದ್ಧಿ ಸಹಾಯಕ ನಿರ್ದೇಶಕ ರಜತ್ ಕುಮಾರ್ ಹಬ್ಬು, ಸಾರಿಗೆ ನಿಗಮ ಮತ್ತು ಹೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...