ಸಚಿವರ ವಿರುದ್ಧ ಶಾಸಕರೇ ದೂರಿದರೆ, ಜನರ ಪರಿಸ್ಥಿತಿ ಹೇಗಿರಬಹದು: ಬಿಜೆಪಿ ಎಂಎಲ್​ಸಿ ಎನ್​. ರವಿಕುಮಾರ್​ ಪ್ರಶ್ನೆ​

Date:

  • ‘ಶಾಸಕರಾದ ಕೃಷ್ಣಪ್ಪ, ರಾಯರೆಡ್ಡಿ ಅವರಿಂದ ಪತ್ರ’
  • ‘ಜನಸಾಮಾನ್ಯರು ಎಷ್ಟು ಬೇಸರಗೊಂಡಿರಬಹುದು?’

ಸರ್ಕಾರ ಬಂದು ಎರಡು ತಿಂಗಳಾಗುವಷ್ಟರಲ್ಲೇ ಶಾಸಕರು, ಸಚಿವರ ವಿರುದ್ಧ ದೂರು ಕೊಟ್ಟಿದ್ದಾರೆ. ನಮ್ಮ ಪರಿಸ್ಥಿತಿ ಹೀಗಾದರೆ ಜನರ ಸ್ಥಿತಿ ಹೇಗೆ? ಹಿರಿಯ ಶಾಸಕರಾದ ಕೃಷ್ಣಪ್ಪ, ರಾಯರೆಡ್ಡಿ ಅಂತಹವರೇ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಎಂಎಲ್​ಸಿ ಎನ್​. ರವಿಕುಮಾರ್​​ ಹೇಳಿದ್ದಾರೆ.

- Advertisement -

ಬೆಂಗಳೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಸಚಿವರ ಭೇಟಿಗೆ ಸಾಧ್ಯವಾಗುತ್ತಿಲ್ಲ ಎಂದು 20ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಇದರ ಅರ್ಥ ಸಚಿವರು ಶಾಸಕರಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಈ ಬಗ್ಗೆ ಶಾಸಕರೇ ಬೇಸರ ಮಾಡಿಕೊಂಡರೆ, ಜನಸಾಮಾನ್ಯರು ಎಷ್ಟು ಬೇಸರಗೊಂಡಿರಬಹುದು” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

“ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ರಾಜ್ಯ ಕಾಂಗ್ರೆಸ್​​ ಸರ್ಕಾರ ಗ್ಯಾರಂಟಿಯೊಳಗೆ ಮುಳುಗಿ ಹೋಗಿದೆ‌. ನಿಮ್ಮ ಗ್ಯಾರಂಟಿ ಯೋಜನೆ ಹೊರತುಪಡಿಸಿ ರೈತ ಸಮಸ್ಯೆ, ಅಂಗನವಾಡಿ ಕಾರ್ಯಕರ್ತರ ಸಮಸ್ಯೆ ಬಗೆಹರಿಸುವುದು ಯಾವಾಗ? ಎಂದು ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಯಿಸ್ಟ್ ಬೊಮ್ಮಾಯಿ, ಬೊಂಬೆ ಬೊಮ್ಮಾಯಿ ಮತ್ತು ಬಿಜೆಪಿ

ಮಾಜಿ ಸಿಎಂ ಎಚ್​ ಡಿ ಕುಮಾರಸ್ವಾಮಿ ಅವರು ಸಿಂಗಾಪುರದಲ್ಲಿದ್ದುಕೊಂಡು ಸರ್ಕಾರದ ವಿರುದ್ಧ ತಂತ್ರ ಹೆಣೆಯುತ್ತಿದ್ದಾರೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, “ಬಿಜೆಪಿ‌ ಇದರ ಯಾವುದೇ ಗೋಜಿಗೆ ಹೋಗುತ್ತಿಲ್ಲ. ರಾಜ್ಯದಲ್ಲಿ ಮಳೆ ಇದೆ, ಅನೇಕ ಸಮಸ್ಯೆ ಇದೆ. ಇದರ ಬಗ್ಗೆ ನಮ್ಮ ಗಮನ ಹರಿಸಲಿದೆ” ಎಂದರು.

ತನಿಖೆ ಆಗಲಿ

“ಉಡುಪಿಯಲ್ಲಿ ವಿದ್ಯಾರ್ಥಿನಿಯರ ಶೌಚಾಲಯದೊಳಗೆ ಮೊಬೈಲ್ ಇರಿಸಿದ್ದ ಪ್ರಕರಣದಲ್ಲಿ ಕೂಲಂಕಷ ತನಿಖೆ ಆಗಬೇಕು. ವೈದ್ಯಕೀಯ ಶಿಕ್ಷಣ ಸಚಿವರು ಈ‌ ಬಗ್ಗೆ ತನಿಖೆ ಮಾಡಿಸಲಿ. ಯಾರು ವಿಡಿಯೋ ಮಾಡಿದರು, ಅದನ್ನು ಯಾತಕ್ಕೆ ಬಳಸಿಕೊಳ್ಳಬಹುದು ಗೊತ್ತಿಲ್ಲ. ಆದರೆ ವೀಡಿಯೋ ಮಾಡಿದ ಆರೋಪಿಗಳ ವಿರುದ್ಧ ಕ್ರಮ ಆಗಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...