24ರಂದು 200 ಕೋಟಿ ರೂಪಾಯಿ ವೆಚ್ಚದ ಹೈಟೆಕ್ ರೇಷ್ಮೆಗೋಡು ಮಾರುಕಟ್ಟೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

Date:

ಚಿಕ್ಕಬಳ್ಳಾಪುರ: ಜಿಲ್ಲೆಯ ರೇಷ್ಮೆ ನಗರಿ ಶಿಡ್ಲಘಟ್ಟದಲ್ಲಿ ಈ ತಿಂಗಳ 24ರಂದು 200 ಕೋಟಿ ರೂಪಾಯಿ ವೆಚ್ಚದ ಹೈಟೆಕ್ ರೇಷ್ಮೆ ಗೋಡು ಮಾರುಕಟ್ಟೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಲವು ಸಚಿವರು ಆಗಮಿಸಿ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮವನ್ನು ಶಿಸ್ತುಬದ್ಧವಾಗಿ,ಅಚ್ಚುಕಟ್ಟಾಗಿ ನಡೆಸಲು ಎಲ್ಲಾ ರೀತಿಯ ತಯಾರಿ ಮತ್ತು ವ್ಯವಸ್ಥೆಗಳು ಕಾರ್ಯಕ್ರಮ ಸ್ಥಳದಲ್ಲಿ ಜೋರಾಗಿ ನಡೆಯುತ್ತಿವೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್, ಶಿಡ್ಲಘಟ್ಟ ಶಾಸಕ ಮೇಲೂರು ರವಿಕುಮಾರ್, ಜಿಲ್ಲಾಧಿಕಾರಿ ರವೀಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಈ ಸಂಬಂಧ ಶಾಸಕ ಮೇಲೂರು ರವಿಕುಮಾರ್ ಅವರು ತಮ್ಮ ಗ್ರಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಇದನ್ನು ಓದಿದ್ದೀರಾ..?ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರ ರಾತ್ರಿ ಭೇಟಿ

ಶಿಡ್ಲಘಟ್ಟ ತಾಲ್ಲೂಕಿನಲ್ಲಿ 680 ಕೋಟಿ ಹಾಗೂ ಜಿಲ್ಲೆಯಲ್ಲಿ ಸುಮಾರು1,800 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ,ಹೈಟೆಕ್ ರೇಷ್ಮೆ ಗೋಡು ಮಾರುಕಟ್ಟೆ,ಸಾದಲಿ ಬಳಿಯ ರಾಮಸಮುದ್ರ ಕೆರೆಯಿಂದ ನಗರದ 1200ಕ್ಕೊ ಹೆಚ್ಚು ಮನೆಗಳಿಗೆ ನೀರಿನ ಪೊರೈಕೆ ಯೋಜನೆ,ಅಮರಾವತಿಯ ಬೆಂಗಳೂರು ಉತ್ತರ ವಿವಿ ಎರಡನೇ ಹಂತದ ಕಾಮಗಾರಿ,ಶಿಡ್ಲಘಟ್ಟದ ಎರಡನೇ ಹಂತದ ಒಳ ಚರಂಡಿ ಕಾಮಗಾರಿ ಹಾಗೂ ಇನ್ನೂ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ ಅವರು ಕಾರ್ಯಕ್ರಮದಲ್ಲಿ ಸುಮಾರು 50 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇರುವುದು.ಜನಸಂದಣಿಯನ್ನು ಗಮನದಲ್ಲಿಟ್ಟುಕೊಂಡು ಕುಳಿತುಕೊಳ್ಳುವ ವ್ಯವಸ್ಥೆ, ಊಟ,ಪಾರ್ಕಿಂಗ್ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲಾಗಿದೆ. ಶಿಡ್ಲಘಟ್ಟದ ಅಭಿವೃದ್ಧಿಗಾಗಿ ಅಗತ್ಯವಿರುವ ಮೂಲ ಸೌಕರ್ಯಗಳಿಗೆ ವಿಶೇಷ ಅನುದಾನ ನೀಡುವಂತೆ ಇದೇ ವೇದಿಕೆಯಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗುವದಾಗಿ ಶಾಸಕ ರವಿಕುಮಾರ್ ತಿಳಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...