ಬೀದರ್‌ | ಅಪ್ರಾಪ್ತ ಮಕ್ಕಳ ಕೈಗೆ ವಾಹನ ನೀಡಿದವರಿಗೆ 25 ಸಾವಿರ ರೂ. ದಂಡ

Date:

  • ಬಸ್ಸಗಳಲ್ಲಿ ಪ್ರಯಾಣಿಸಿ ಅಪಘಾತ ಅವಗಢಗಳನ್ನು ತಪ್ಪಿಸಲು ಸಹಕರಿಸಲು ಮನವಿ
  • ರಸ್ತೆ ಅಪಘಾತದಲ್ಲಿ 2022ನೇ ಸಾಲಿನಲ್ಲಿ 332 ಜನ ಮೃತಪಟ್ಟಿದ್ದಾರೆ

ಸಾರ್ವಜನಿಕರ ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬೀದರ ವಿಭಾಗದಿಂದ ಈಗಾಗಲೇ ಜಿಲ್ಲೆಯಲ್ಲಿ ಬೀದರ ನಗರ ಹಾಗೂ ಗ್ರಾಮೀಣ ಪ್ರದೇಶದ ಎಲ್ಲ ಗ್ರಾಮಗಳಿಗೆ ಸಮಯಕ್ಕೆ ಸರಿಯಾಗಿ ಸಾರಿಗೆ ಸೇವೆಯನ್ನು ಕಲ್ಪಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಸಾರಿಗೆ ಸೇವೆಯ ಬೇಡಿಕೆಗಳು ಬಂದಲ್ಲಿ ನಿಗಮದಿಂದ ಸಾರಿಗೆ ಸೇವೆಯನ್ನು ಒದಗಿಸಿಕೊಡಲಾಗುವುದು ಎಂದು ಬೀದರ್ ವಿಭಾಗದ ಕಕರಸಾ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

“ಅಪ್ತಾಪ್ತ ಮಕ್ಕಳಿಗೆ ಪಾಲಕರಾಗಲಿ ಅಥವಾ ವಾಹನದ ಮಾಲೀಕರಾಗಲಿ ದ್ವಿಚಕ್ರ ವಾಹನಗಳನ್ನು ನೀಡಿದಲ್ಲಿ ಅಂತಹ ಪಾಲಕರಿಗೆ ಮತ್ತು ವಾಹನದ ಮಾಲೀಕರಿಗೆ ಮೋಟಾರ ಕಾಯ್ದೆಯಡಿಯಲ್ಲಿ 25,000 ರೂ. ದಂಡ ಅಥವಾ 3 ತಿಂಗಳು ಸಾಧಾರಣ ಜೈಲು ಶಿಕ್ಷೆಗೆ ಗುರಿಪಡಿಸಲಾಗುತ್ತದೆ. ಆದ್ದರಿಂದ ಸಾರಿಗೆ ನಿಗಮದ ಸೇವೆಯು ಸದುಪಯೋಗವನ್ನು ಪಡೆದುಕೊಂಡು ಅಪಘಾತ ಹಾಗೂ ಅವಗಢಗಳನ್ನು ತಪ್ಪಿಸಲು ಸಾರ್ವಜನಿಕರಲ್ಲಿ ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸಹಕರಿಸಬೇಕೆಂದು” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳು ಪಾಲಿಸಿ:

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಅಭಿಯಾನ ಜುಲೈ 2023 ರಿಂದ ಪ್ರಾರಂಭ ಮಾಡಿದ್ದು, ಆಗಸ್ಟ್ 30 ರವರೆಗೆ ರಸ್ತೆ ಅಪಘಾತದಲ್ಲಿ 214 ಜನರು ಮೃತಪಟ್ಟಿದ್ದು, 522 ಜನರು ಗಾಯಗೊಂಡಿದ್ದಾರೆ. ರಸ್ತೆ ಸುರಕ್ಷತಾ ಅಭಿಯಾನ ಜುಲೈ 2023 ರಿಂದ ಪ್ರಾರಂಭ ಮಾಡಿದ್ದರಿಂದ ರಸ್ತೆ ಅಪಘಾತದಲ್ಲಿ ಮರಣ ಮತ್ತು ಗಾಯಗೊಂಡವರ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಕಡಿಮೆಯಾಗಿರುವುದು ಕಂಡುಬಂದಿದೆ ಎಂದು ಬೀದರ್ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

“2022ನೇ ಸಾಲಿನಲ್ಲಿ 332 ಜನ ಮೃತಪಟ್ಟಿದ್ದು, 525 ಜನರು ಗಾಯಗೊಂಡಿದ್ದಾರೆ ಹಾಗೂ ಆಗಸ್ಟ್ 2023 ರವರೆಗೆ 214 ಜನರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುತ್ತಾರೆ. ಜುಲೈ 2023 ರಿಂದ ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಅಭಿಯಾನ ಅರಿವು ಕಾರ್ಯಕ್ರಮಗಳ ಮೂಲಕ ಪೊಲೀಸ್ ಇಲಾಖೆಯಿಂದ ಜಿಲ್ಲೆಯಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಮೇಲೆ, ರಾಜ್ಯ ಹೆದ್ದಾರಿಗಳ ಮೇಲೆ, ಶಾಲಾ ಕಾಲೇಜುಗಳಲ್ಲಿ ಹಾಗೂ ಇತರೆ ಸ್ಥಳಗಳಲ್ಲಿ ಸಾರ್ವಜನಿಕರಿಗೆ ರಸ್ತೆ ಸುರಕ್ಷತಾ ಬಗ್ಗೆ ಅಭಿಯಾನಗಳು ನಡೆಸಿ ವಾಹನ ಸವಾರರು ದ್ವಿಚಕ್ರ ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ನಾಲ್ಕು ಚಕ್ರಗಳ ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು” ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಸರ್ಕಾರಿ ಕೆಲಸ ಮಾಡಿಕೊಡಲು ಲಂಚಕ್ಕೆ ಬೇಡಿಕೆ; ಭೂಮಾಪಕನಿಗೆ ಮೂರು ವರ್ಷ ಜೈಲು ಶಿಕ್ಷೆ

“ವಾಹನ ಚಲಾಯಿಸುವಾಗ ಮೊಬೈಲ್ ಬಳಕೆ ಮಾಡಬಾರದು. ಪೋಷಕರು ಅಪ್ತಾಪ್ತ ಮಕ್ಕಳಿಗೆ ವಾಹನ ಚಲಾಯಿಸಲು ಅವಕಾಶ ಕೊಡಬಾರದು ಮತ್ತು ಹೆಲ್ಮೆಟ್ ಧರಿಸದವರನ್ನು ಕರೆಸಿ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತಗಳ ಸಿಸಿ ಟಿವಿ ಫುಟೇಜ್ ತೆಗೆದು ಅವುಗಳ ತುಣುಕು ವಿಡಿಯೋ ತೋರಿಸುವುದರ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗಿದೆ.
ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳು ಕಡ್ಡಾಯವಾಗಿ ಪಾಲನೆ ಮಾಡಿದರೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ರಸ್ತೆ ಅಪಘಾತದಲ್ಲಿ ಮೃತರ ಹಾಗೂ ಗಾಯಗೊಳ್ಳುವವರ ಸಂಖ್ಯೆ ಕಡಿಮೆಯಾಗಬಹುದು” ಎಂದು ಮನವಿ ಮಾಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...

ರಾಯಚೂರು | ಎಸ್‌ಯುಸಿಐ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಕೆ

ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ...