ಕಲಬುರಗಿ | ಭೀಮಾನದಿಗೆ 3.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ : ಪ್ರವಾಹ ಪರಿಸ್ಥಿತಿ ವೀಕ್ಷಿಸಿದ ಸಚಿವ ಪ್ರಿಯಾಂಕ್‌ ಖರ್ಗೆ

Date:

Advertisements

ಮಹಾರಾಷ್ಟ್ರದಿಂದ ಈವರೆಗೂ ಸುಮಾರು 3.20 ಲಕ್ಷ ಕ್ಯೂಸೆಕ್ ನೀರನ್ನು ಭೀಮಾನದಿಗೆ ಹರಿಬಿಡಲಾಗಿದೆ. ಮಹಾರಾಷ್ಟ್ರದ ವೀರ್, ಉಜನಿ, ಸಿನಾ ಜಲಾಶಯ ಮತ್ತು ಬೋರಿ ನದಿಯಿಂದ ಅಪಾರ ಪ್ರಮಾಣದ ನೀರನ್ನು ಭೀಮ ನದಿಗೆ ಹರಿಬಿಟ್ಟ ಕಾರಣ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಶುಕ್ರವಾರ ಅಫಜಲಪುರ ತಾಲ್ಲೂಕಿನ ಗಾಣಗಾಪುರ, ಸೊನ್ನ ಬ್ರಿಡ್ಜ್ ಕಂ ಬ್ಯಾರೇಜ್ ವೀಕ್ಷಣೆ ಮಾಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಜನರ ಓಡಾಟಕ್ಕೆ ಅನುಕೂಲವಾಗುವಂತೆ ಸೂಕ್ತ ವ್ಯವಸ್ಥೆ ಮಾಡಲು ಸೂಚಿಸಿದರು.

ʼಭೀಮ ನದಿ ನೀರಿನ ಮಟ್ಟ ಏರಿಕೆಯಿಂದ ನೆರೆ ಸೃಷ್ಟಿಯಾಗಿದ್ದು, ನದಿ ತೀರದಲ್ಲಿರುವ ನಿವಾಸಿಗಳಿಗೆ ಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಹಾಗೆಯೇ ಅಗತ್ಯ ಇರುವ ಕಡೆಗಳಲ್ಲಿ ಕಾಳಜಿ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸೆಪ್ಟೆಂಬರ್ 26ರ ವೇಳೆಗೆ ಸರಾಸರಿ 619 ಮಿಮೀ ವಾಡಿಕೆ ಮಳೆ ಸುರಿಯುತ್ತಿತ್ತು. ಆದರೆ ಈ ವರ್ಷ 915 ಮಿ.ಮೀಗಿಂತಲೂ ಅಧಿಕ ಮಳೆ ಸುರಿದಿರುವುದರಿಂದ ವ್ಯಾಪಕ ಅನಾಹುತವಾಗಿದೆ. ಪ್ರವಾಹ ಪರಿಸ್ಥಿತಿ ತಗ್ಗಿದ ನಂತರ ಮತ್ತೊಮ್ಮೆ ಭೇಟಿ ನೀಡಿ, ಸೂಕ್ತ ಪರಿಹಾರ ಒದಗಿಸಲು ಕ್ರಮವಹಿಸಲಾಗುವುದುʼ ಎಂದು ತಿಳಿಸಿದರು.

WhatsApp Image 2025 09 26 at 7.03.27 PM
ಅಫಜಲಪುರ ತಾಲ್ಲೂಕಿನ ಗಾಣಗಾಪುರ, ಸೊನ್ನ ಬ್ರಿಡ್ಜ್ ಕಂ ಬ್ಯಾರೇಜ್ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ಪ್ರಿಯಾಂಕ್‌ ಖರ್ಗೆ

ವಾಡಿಕೆಗಿಂತ ಹೆಚ್ಚು ಮಳೆ ಸುರಿಯುತ್ತಿದ್ದ ಹಿನ್ನೆಲೆ ನೆರೆಯಿಂದ ಹಾನಿಗೊಳಗಾದ ಜಿಲ್ಲೆಯ ಅಫಜಲ್ಪುರ ತಾಲೂಕಿನ ದೇವಲ ಗಾಣಗಾಪುರ ಬಳಿಯ ಭೀಮಾ ತೀರದ ಪ್ರದೇಶಕ್ಕೆ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿಯ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಇದನ್ನೂ ಓದಿ : ಕಲಬುರಗಿ | ಗ್ರಾಮೀಣ ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ʼಅರಿವು ಕೇಂದ್ರʼಗಳು

ದೇವಲ ಗಾಣಗಾಪುರ ಗ್ರಾಮದ ಬಳಿ ತಾತ್ಕಾಲಿಕವಾಗಿ ಕಾಳಜಿ ಕೇಂದ್ರವನ್ನು ಸ್ಥಾಪಿಸಿದ್ದು, ಪ್ರವಾಹ ತಗ್ಗಿದ ನಂತರ ಅವರ ಪುನರ್ವಸತಿಗೆ ಸೂಕ್ತ ವ್ಯವಸ್ಥೆ ಮಾಡುವುದಾಗಿ ಅಲ್ಲಿನ ನಿವಾಸಿಗಳೊಂದಿಗೆ ಭರವಸೆ ನೀಡಿದರು. ಸತತ ಮಳೆಯಿಂದ ತೊಗರಿ ಸೇರಿದಂತೆ ಇತರೆ ಬೆಳೆಗಳು ತೀವ್ರ ಹಾನಿಗೀಡಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ, ಬೆಳೆ ನಷ್ಟದ ಕುರಿತು ಆದಷ್ಟು ಶೀಘ್ರವೇ ಸಮರ್ಪಕ ಹಾಗೂ ಸಮಗ್ರ ವರದಿ ಸಲ್ಲಿಸುವಂತೆ ಸಚಿವರು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

Download Eedina App Android / iOS

X