ಬೀದರ್‌ | ಮಳೆಗೆ ಒಡೆದಿದ್ದ ಕೋಹಿನೂರ್‌, ಅಟ್ಟೂರ್ ಕೆರೆಗಳ ಪುನರುಜ್ಜೀವನಕ್ಕೆ 3.85 ಕೋಟಿ ಮಂಜೂರು

Date:

ಕಳೆದ ತಿಂಗಳು ಸುರಿದ ಭಾರಿ ಮಳೆಯಿಂದಾಗಿ ಒಡೆದು ಹೋಗಿದ್ದ ಬಸವಕಲ್ಯಾಣ ತಾಲೂಕಿನ ಕೋಹಿನೂರ್, ಅಟ್ಟೂರ್ ಗ್ರಾಮಗಳ ಹಳೆ ಕೆರೆಗಳ ಪುನರುಜ್ಜೀವನಕ್ಕೆ ರಾಜ್ಯ ಸರ್ಕಾರ 3.85 ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಎಂದು ಬೀದರ್‌ ಸಂಸದ ಸಾಗರ್‌ ಖಂಡ್ರೆ ಹೇಳಿದ್ದಾರೆ.

- Advertisement -

ಕೆರೆ ಒಡೆದ ಪರಿಣಾಮ ಸುತ್ತಲಿನ ನೂರಾರು ಎಕರೆ ಜಮೀನಿಗೆ ನೀರು ನುಗ್ಗಿ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋದ ಕಾರಣ ರೈತರು ಸಂಕಷ್ಟಕ್ಕೆ ಸಿಲುಕಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಕುರಿತು ತಮ್ಮ ʼಎಕ್ಸ್‌ʼ ಖಾತೆಯಲ್ಲಿ ʼಕಳೆದ ತಿಂಗಳು ಸುರಿದ ಭಾರಿ ಮಳೆಯಿಂದಾಗಿ ಬಸವಕಲ್ಯಾಣ ತಾಲೂಕಿನ ಕೊಹಿನೂರ, ಅಟ್ಟೂರ್ ಗ್ರಾಮಗಳ ಹಳೆ ಕೆರೆಗಳು ಒಡೆದು ಹೋಗಿದ್ದವು. ಅಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಕೆರೆಗಳ ಪುನರುಜ್ಜೀವನಕ್ಕೆ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದ್ದೆ. ಕೊಟ್ಟ ಭರವಸೆ ಅಂತೆ ಕೊಹಿನೂರ, ಅಟ್ಟೂರ್ ಕೆರೆಗಳ ಪುನರುಜ್ಜೀವನಕ್ಕೆ ಕರ್ನಾಟಕ ಸರ್ಕಾರ 3.85 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆʼ ಎಂದು ಹಂಚಿಕೊಂಡಿದ್ದಾರೆ.

ಕೆರೆಗಳ ಪುನರುಜ್ಜೀವನಕ್ಕೆ ಅನುದಾನ ಬಿಡುಗಡೆ ಮಾಡಲು ಸಹಕರಿಸಿದ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಅನುದಾನ ಒದಗಿಸಿದ ಸಣ್ಣ ನೀರಾವರಿ ಸಚಿವ ಎನ್.ಬೋಸರಾಜು ಅವರಿಗೆ ಸಂಸದ ಸಾಗರ್‌ ಖಂಡ್ರೆ ಅವರು ಧನ್ಯವಾದ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...