ಸಿಎಂ ಆಯ್ಕೆ | ಮೂವರು ವೀಕ್ಷಕರ ನೇಮಿಸಿದ ಎಐಸಿಸಿ

Date:

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಕೊಂಡಿದೆ. ಆದರೆ, ಈಗ ಸಿಎಂ ಕುರ್ಚಿಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ನಡುವೆ ಕುದರೆ ರೇಸ್‌ ನಂತೆ ಪೈಪೋಟಿ ಹೆಚ್ಚಾಗಿರುವ ಕಾರಣ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಎಐಸಿಸಿ) ಮೂವರು ವೀಕ್ಷಕರನ್ನು ನೇಮಿಸಿದೆ.

- Advertisement -

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣು ಗೋಪಾಲ್‌ ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಮೇ 14ರಂದು ಖಾಸಗಿ ಹೋಟೆಲ್​ನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮೂವರು ವೀಕ್ಷಕರು ಸಹ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ವೀಕ್ಷಕರಾಗಿ ಆಯ್ಕೆಯಾಗಿರುವ ಸುಶೀಲ್​ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್​ ಹಾಗೂ ದೀಪಕ್ ಬಬಾರಿಯಾ ಆಯ್ಕೆಯಾಗಿದ್ದಾರೆ. ಸಂಜೆ ನಡೆಯಲಿರುವ ಸಭೆಯಲ್ಲಿ, ಇವರ ಸಮ್ಮುಖದಲ್ಲೇ ಕಾಂಗ್ರೆಸ್ ಶಾಸಕಾಂಗ ನಾಯಕನ ಆಯ್ಕೆ ನಡೆಯಲಿದೆ

ಮುಖ್ಯಮಂತ್ರಿ ಸೀಟ್‌ಗಾಗಿ ಇಬ್ಬರು ಘಟಾನುಘಟಿಗಳ ನಡುವೆ ಜಾಟಾಪಟಿ ನಡೆಯುತ್ತಿರುವ ಕಾರಣ ಮುಂದಿನ ಐದು ವರ್ಷಗಳ ಕಾಲ ಕರ್ನಾಟಕದ ಮುಖ್ಯಮಂತ್ರಿಯಾರಾಗಬೇಕು ಎಂದು ತೀರ್ಮಾನಿಸುವುದೇ ಹೈಕಮಾಂಡ್‌ಗೆ ಸವಾಲಾಗಿ ಪರಿಣಮಿಸಿದೆ.

ಈಗಾಗಲೇ ಸಿದ್ದರಾಮಯ್ಯ ಅವರ ಬೆಂಬಲಿಗರು ಸಭೆ ನಡೆಸಿ, ಅವರೇ ಮುಂದಿನ ಮುಖ್ಯಮಂತ್ರಿಯಾಗಲು ಪ್ರೇರೆಪಿಸುತ್ತಾ ಪಟ್ಟು ಹಿಡಿದಿದ್ದರೆ. ಇನ್ನೊಂದೆಡೆ ಡಿ ಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವಂತೆ ಒಕ್ಕಲಿಗ ನಾಯಕರು ಮನವಿ ಮಾಡಿಕೊಂಡಿದ್ದಾರೆ. ಈ ಮಧ್ಯೆ ಇವರಿಬ್ಬರ ಮಧ್ಯೆ ಡಾ. ಜಿ ಪರಮೇಶ್ವರ್ ಅವರ ಹೆಸರು ತೇಲಿ ಬಂದಿದೆ. ಪರಮೇಶ್ವರ್ ಪರವಾಗಿ ದಲಿತ ನಾಯಕರು ಸಹ ಸಭೆ  ಮಾಡುವ ಮೂಲಕ ಸಂದೇಶ ರವಾನಿಸಿದ್ದಾರೆ.

ಒಟ್ಟಿನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಕಾಂಗ್ರೆಸ್‌ನಲ್ಲಿ ಭಾರಿ ಪೈಪೋಟಿ ಹೆಚ್ಚಾಗಿದೆ.  ಮುಂದಿನ ಐದು ವರ್ಷಗಳ ಕಾಲ ಯಾರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಕುತೂಹಲ ಜನ ಸಾಮನ್ಯರಲ್ಲಿ ಮತ್ತು ರಾಜಕೀಯ ನಾಯಕರಲ್ಲಿ ಮನೆ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿಗೆ ಬರುವಂತೆ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಬುಲಾವ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...