ಪುತ್ತೂರು ವ್ಯಾಪ್ತಿಯಲ್ಲಿ 3 ಸರ್ಕಾರಿ ಜಿಮ್ ಸೆಂಟರ್; ಶಾಸಕ ಅಶೋಕ್‌ ರೈ ಭರವಸೆ

Date:

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3 ಕಡೆಗಳಲ್ಲಿ ಯುವಕ ಯುವತಿಯರಿಗಾಗಿ ಸರ್ಕಾರಿ ಜಿಮ್ ಸೆಂಟರ್ ಆರಂಭಿಸುವಂತೆ ಶಾಸಕ ಅಶೋಕ್ ರೈ ಈ ಹಿಂದೆ ಕ್ರೀಡಾ ಸಚಿವರಿಗೆ ಮನವಿ ಮಾಡಿದ್ದು, ಈ ವರ್ಷ ಜಿಮ್‌ ಸೆಂಟರ್‌ ಸ್ಥಾಪಿಸುವ ಭರವಸೆ ನೀಡಿದ್ದಾರೆ.

- Advertisement -

ಕ್ರೀಡಾ ಇಲಾಖೆ ಕಮಿಷನರ್ ಮತ್ತು ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸರಕಾರದ ಕಾರ್ಯದರ್ಶಿ ಜೊತೆ ಸಭೆ ನಡೆಸಿದ್ದು ಶೀಘ್ರವೇ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ರಾಮೀಣ ಭಾಗದಲ್ಲಿ ಜಿಮ್ ಕೇಂದ್ರ ಪ್ರಾರಂಭ ಮಾಡುವಂತೆ ಯುವಕರು, ಯುವ ಸಂಘಟನೆಗಳಿಂದ ಈ ಹಿಂದೆಯೇ ಶಾಸಕರಿಗೆ ಹಲವಾರು ಮನವಿಗಳು ಬಂದಿದ್ದವು. ಈ ವಿಚಾರವನ್ನು ಕಳೆದ ಕೆಲವು ತಿಂಗಳ ಹಿಂದೆ ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವರ ಜೊತೆ ಮಾತುಕತೆ ನಡೆಸಿದ ವೇಳೆ ಸಚಿವರು ಅಸ್ತು ಎಂದಿದ್ದರು. ಕ್ರೀಡಾ ಇಲಾಖೆಯ ಮೂಲಕ ಜಿಮ್ ಕೇಂದ್ರ ತೆರೆಯಲು ಅವಕಾಶವಿರುವ ಬಗ್ಗೆ ಶಾಸಕರು ಸಚಿವರ ಗಮನಕ್ಕೆ ತಂದಿದ್ದರು. ಈ ಬಗ್ಗೆ ಶಾಸಕರು ಮೂರು ಜಿಮ್ ಕೇಂದ್ರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರು. ಪ್ರಸ್ತಾವನೆ ಸಚಿವಾಲಯದಿಂದ ಕಮಿಷನರ್ ಅವರಿಗೆ ಬಂದಿದ್ದು ಈ ಬಗ್ಗೆ ಬುಧವಾರ ಕಮಿಷನರ್ ಜೊತೆ ಸಭೆ ನಡೆಸಿ ಬೇಡಿಕೆಗಳ ಬಗ್ಗೆ ಸಮಗ್ರ ಚರ್ಚೆ ನಡೆಸಿದ್ದಾರೆ.

ಪ್ರಸ್ತುತ ಪುತ್ತೂರು ನಗರದಲ್ಲಿ ಮಾತ್ರ ಜಿಮ್ ಕೇಂದ್ರ ಇದ್ದು, ಗ್ರಾಮಾಂತರ ಭಾಗದ ಯುವಕರಿಗೆ ಸಮಯಕ್ಕೆ ಸರಿಯಾಗಿ ಜಿಮ್ ಕೇಂದ್ರಕ್ಕ ಬರಲು ಸಾಧ್ಯವಾಗುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಜಿಮ್ ಕೇಂದ್ರ ಪ್ರಾರಂಭ ಮಾಡಿಲ್ಲಿ ಯುವಕರಿಗೆ ಅನುಕೂಲವಾಗಲಿದೆ. ಮುಂಡೂರು ಗ್ರಾಮದಲ್ಲಿ ನಿರ್ಮಾಣವಾಗಲಿರುವ ತಾಲೂಕು ಕ್ರೀಂಡಾಂಗಣ ಸಮತಟ್ಟು ಮಾಡಲು 8 ಕೋಟಿ ಅನುದಾನ ಅಗತ್ಯವಿದ್ದು, ಈ ಅನುದಾನವನ್ನು ಬಿಡುಗಡೆ ಮಾಡುವಂತೆ ಯುವಜನ ಕ್ರೀಡೆ ಮತ್ತು ಯುವ ಸಬಲೀಕರಣ ಇಲಾಖೆ ಸರ್ಕಾರಿ ಕಾರ್ಯದರ್ಶಿ ರಣದೀಪ್ ಮತ್ತು ಇಲಾಖೆಯ ಆಯುಕ್ತ ಚೇತನ್ ಅವರಿಗೆ ಶಾಸಕರು ಮನವಿ ಮಾಡಿದ್ದಾರೆ. ಮುಂಡೂರು ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ಕ್ರೀಡಾಂಗಣ ಈಗಾಗಲೇ ಒಂದು ಹಂತದ ಕಾಮಗಾರಿ ಮುಗಿಸಿದೆ. ಎರಡನೇ ಹಂತ ಸಮತಟ್ಟು ಕಾಮಗಾರಿಗೆ ಶೀಘ್ರವೇ ಅನುದಾನ ಬಿಡುಗಡೆಯಾಗಲಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ | ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಸಮಾವೇಶದ ಬ್ಯಾನರ್‌ಗಳನ್ನು ಹರಿದ ಕಿಡಿಗೇಡಿಗಳು

ಮೂರು ಜಿಮ್‌ ಕೇಂದ್ರದಲ್ಲಿ ಎಲ್ಲಾ ಅಗತ್ಯ ಪರಿಕರಗಳು ಇರಲಿದೆ. ಗ್ರಾಮೀಣ ಯುವಕರನ್ನು ಲಕ್ಷ್ಯವಾಗಿಟ್ಟುಕೊಂಡು ಈ ಕೇಂದ್ರವನ್ನು ತೆರೆಯಲಾಗುತ್ತದೆ. ಫಿಟ್‌ನೆಸ್ ಕಡೆ ಯುವಕರು ಹೆಚ್ಚಿನ ಒಲವು ತೋರುತ್ತಿದ್ದು, ಅವರಿಗೆ ವ್ಯವಸ್ಥೆ ಮಾಡಿಕೊಡಬೇಕಾಗಿದ್ದು ಸರ್ಕಾರದ ಒಂದು ಭಾಗ ಎಂದು ಯುವಕರ ಮನವಿಗೆ ಸ್ಪಂದನೆ ನೀಡುವ ಕೆಲಸವನ್ನು ಮಾಡಲಿದ್ದೇವೆ ಎಂದು ಶಾಸಕ ಅಶೋಕ್‌ ರೈ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...