ಗೌರಿಬಿದನೂರು | ಮೂವರು ಮನೆಗಳ್ಳರ ಬಂಧನ

Date:

Advertisements

ಮನೆಗಳ್ಳತನ ಮಾಡುತ್ತಿದ್ದ ಮೂವರು ಖತರ್ನಾಕ್‌ ಕಳ್ಳರನ್ನು ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ನಗರ ಠಾಣೆ ಪೊಲೀಸರ ವಿಶೇಷ ತಂಡ ಬಂಧಿಸಿದ್ದು, ಕಳ್ಳರಿಂದ ಸುಮಾರು 35 ಲಕ್ಷ ಮೌಲ್ಯದ ಚಿನ್ನಾಭರಣ, ನಗದನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ತಾಲೂಕಿನ ಜಿಗಣಿ ಬಳಿಯ ಹಾರೋಗದ್ದೆ ಗ್ರಾಮದ ನಿವಾಸಿ ಶಂ ನೂರುಲ್ಲಾ ಬಿನ್‌ ಫಕ್ರುದ್ದಿನ್‌(50), ವಿನೋದ್‌ ಮಾರ್ಕಕರ್‌ ಬಿನ್‌ ವೀರಭದ್ರಪ್ಪ ಮತ್ತು ಸಾಗರ್‌ ಬಂಧಿತ ಕಳ್ಳರು.

ಈ ಮೂವರು ಸೇರಿ ಗೌರಿಬಿದನೂರು ನಗರದ ತ್ಯಾಗರಾಜ ಕಾಲೋನಿಯ ನಿವಾಸಿ ಅಶ್ವತ್ಥನಾರಾಯಣ ಶೆಟ್ಟಿ ಬಿನ್‌ ಲೇ.ಸತ್ಯನಾರಾಯಣಶೆಟ್ಟಿ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಬೀಗ ಮುರಿದು ಜ.14ರಂದು ಮನೆಯಲ್ಲಿದ್ದ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದರು. ಈ ಕುರಿತು ಸಂತ್ರಸ್ತರು ಗೌರಿಬಿದನೂರು ಠಾಣೆಯಲ್ಲಿ ಮರುದಿನ ದೂರು ನೀಡಿದ್ದರು.

Advertisements

ಎಸ್ಪಿ ಕುಶಾಲ್‌ ಚೌಕ್ಸೆ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದ ಚಿಕ್ಕಬಳ್ಳಾಪುರ ಪೊಲೀಸರು ಕಳ್ಳರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳರಿಂದ ಒಟ್ಟು 412 ಗ್ರಾಂ ಬಂಗಾರ, 2.5ಕೆಜಿ ಬೆಳ್ಳಿ, 2 ವಾಚ್‌ ಮತ್ತು 420ರೂಪಾಯಿ ರೂ. ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ವಿಶೇಷ ತಂಡದಲ್ಲಿ ಗೌರಿಬಿದನೂರು ವೃತ್ತದ ಸಿಪಿಐ ಕೆ. ಪಿ ಸತ್ಯನಾರಾಯಣ, ಎಸ್‌ಐಗಳಾದ ಚಂದ್ರಕಲಾ, ಗೋಪಾಲ, ರಮೇಶ್‌ ಗುಗ್ಗುರಿ, ಪ್ರಭಾಕರ್‌, ಸಿಬ್ಬಂದಿಗಳಾದ ಶ್ರೀರಾಮಯ್ಯ, ರಿಜ್ವಾನ್‌, ಶ್ರೀನಿವಾಸ್‌ರೆಡ್ಡಿ, ಅಶ್ವತ್ಥ, ಮಹಂತೇಶ್‌, ಮರಳುಸಿದ್ದೇಶ್ವರ, ಶಿವಶೇಖರ್‌, ರವಿಕುಮಾರ್‌, ಮುನಿಕೃಷ್ಣ ಅವರಿದ್ದರು. ಕಳ್ಳರನ್ನು ಬಂಧಿಸಿದ ವಿಶೇಷ ತಂಡಕ್ಕೆ ಎಸ್ಪಿ ಕುಶಾಲ್‌ ಚೌಕ್ಸೆ ನಗದು ಬಹುಮಾನವನ್ನು ಘೋಷಣೆ ಮಾಡಿದ್ದು, ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X