ಮೈಸೂರು | ಜಿಲ್ಲೆಯಲ್ಲಿ 9 ತಿಂಗಳಲ್ಲಿ 35 ರೈತರು ಆತ್ಮಹತ್ಯೆ

Date:

Advertisements

ಈ ವರ್ಷ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಮೈಸೂರು ಜಿಲ್ಲೆಯಲ್ಲಿ 2023ರ ಏಪ್ರಿಲ್‌ನಿಂದ ಈವರೆಗೆ 35 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆಘಾತಕಾರಿ ಸಂಗತಿ ವರದಿಯಾಗಿದೆ. ಮೃತ ರೈತರಲ್ಲಿ 18 ಮಂದಿ ಹೆಚ್ಚಾಗಿ ವಾಣಿಜ್ಯ ಬೆಳೆ ತಂಬಾಕು ಬೆಳೆಯುವ ಪರಿಯಾಪಟ್ಟಣ ತಾಲೂಕಿನವರಾಗಿದ್ದಾರೆ.

ಈ 35 ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರಕ್ಕೆ 27 ಸಂತ್ರಸ್ತ ಕುಟುಂಬದ ಅರ್ಜಿಯನ್ನು ಸರ್ಕಾರ ಅನುಮೋದಿಸಿದೆ. ಐದು ಪ್ರಕರಣಗಳನ್ನು ತಿರಸ್ಕರಿಸಿದೆ. ಉಳಿದ ಮೂರು ಪ್ರಕರಣಗಳಲ್ಲಿ ಪರಿಹಾರಕ್ಕಾಗಿ ಸಹಾಯಕ ಆಯುಕ್ತರ ನೃತೃತ್ವದ ಸಮಿತಿಯ ಮುಂದೆ ದಾಖಲೆಗಳನ್ನು ಸಲ್ಲಿಸಬೇಕಿದೆ ಎಂದು ತಿಳಿದುಬಂದಿದೆ.

“ರೈತರು ಕೂಲಿ ಕಾರ್ಮಿಕರನ್ನು ಸಂಪೂರ್ಣವಾಗಿ ಅವಲಂಬಿಸಿದ್ದರೆ, ಕೃಷಿಯಲ್ಲಿ ಲಾಭ ದೊರೆಯುವುದಿಲ್ಲ. ರೈತರು ಆಧುನಿಕ ವಿಧಾನಗಳನ್ನು ಅಳವಡಿಸಿಕೊಳ್ಳುವಲ್ಲಿ ಮತ್ತು ಇಲಾಖೆಯ ಸಲಹೆಗಳನ್ನು ಅನುಸರಿಸುವಲ್ಲಿ ವಿಫಲರಾಗಿದ್ದಾರೆ. ರೈತರು ಬ್ಯಾಂಕ್‌ಗಳಲ್ಲಿ ಹೆಚ್ಚು ಸಾಲ ಪಡೆದು ಮರುಪಾವತಿ ಮಾಡದೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ” ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್ ಹೇಳಿರುವುದಾಗಿ ಟಿಎನ್‌ಐಇ ವರದಿ ಮಾಡಿದೆ.

Advertisements

ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯು ಬರಕ್ಕೆ ತುತ್ತಾಗಿತ್ತು. ಆದರೂ, ಅಕ್ಟೋಬರ್‌ನಲ್ಲಿ ಉತ್ತಮ ಮಳೆಯಾಗಿದ್ದು, ಹಿಂಗಾರಿನಲ್ಲಿ ದ್ವಿದಳ ಧಾನ್ಯಗಳು ಮತ್ತು ಮೆಕ್ಕೆಜೋಳವನ್ನು ಶೇ.103 ರಷ್ಟು ಬಿತ್ತನೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಹೇಳಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಆದಾಗ್ಯೂ, ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X