ಬೀದರ್‌ | 371(ಜೆ) ವಿರುದ್ಧ ಅಪಸ್ವರ ಖಂಡಿಸಿ ಜೂ.29ರಂದು ಜನಾಂದೋಲನ

Date:

ಸಂವಿಧಾನದ 371 (ಜೆ ) ಜಾರಿಯಿಂದ ರಾಜ್ಯದ ಇತರೆ ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ ಎಂದು ಜನರಿಗೆ ತಪ್ಪು ಸಂದೇಶ ನೀಡಲು ಬೆಂಗಳೂರಿನ ಹಸಿರು ಪ್ರತಿಷ್ಠಾನ ಪ್ರತಿಭಟನೆ ನಡೆಸಿ, ಈ ಭಾಗದ ಅಸ್ಮಿತೆಗೆ ಧಕ್ಕೆ ತರುವ ಹುನ್ನಾರ ನಡೆಯುತ್ತಿದ್ದು, ಅದಕ್ಕೆ ಪ್ರತಿಯಾಗಿ ಜೂ.29ರಂದು ಬೀದರ್‌ನಲ್ಲಿ ಬೃಹತ್ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ.

- Advertisement -

ನಗರದ ಬಿ.ವಿ.ಭೂಮರೆಡ್ಡಿ ಕಾಲೇಜಿನಲ್ಲಿ ಶನಿವಾರ ನಡೆದ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಲ್ಯಾಣ ಕಲ್ಯಾಣ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಮಾತನಾಡಿ, “ಇದು ಭಾವನಾತ್ಮಕ ಹೋರಾಟ. ನಮ್ಮ ಭಾಗದ ಜನರಿಗೆ 371(ಜೆ) ವರದಾನವಾಗಿದೆ. ಇನ್ನೂ ಅನೇಕ ತಾಂತ್ರಿಕ ಸಮಸ್ಯೆಗಳಿವೆ.ಅದನ್ನು ಸರಿಪಡಿಸಿ ಅನುಷ್ಠಾನಗೊಳಿಸಬೇಕಿದೆ. ಆದರೆ ಕಲ್ಯಾಣಕ ರ್ನಾಟಕ ಜಿಲ್ಲೆಗಳ ಜನರು ಶಿಕ್ಷಣ ಮತ್ತುಉದ್ಯೋಗಾವಶಕಾಶ ಮತ್ತು ಅಭಿವೃದ್ಧಿಯಿಂದ ವಂಚಿತರಾದಾಗ ಕ್ಯಾರೆ ಎನ್ನದ ಸಂವಿಧಾನ ವಿರೋಧಿ ಶಕ್ತಿಗಳು ಬೆಂಗಳೂರಿನಲ್ಲಿ ಹೊಸ ಸಂಘಟನೆ ಹುಟ್ಟು ಹಾಕಿ ನಮ್ಮ ಜನರ ಭಾವನೆ ಕೆದಕುವ ಕೆಲಸ ಮಾಡಲಾಗುತ್ತಿದೆ. ಇದನ್ನು ಬಲವಾಗಿ ಖಂಡಿಸಿ, ನಾವೆಲ್ಲರೂ ಒಂದಾಗಬೇಕಿದೆ” ಎಂದರು.

ಪ್ರಗತಿಪರ ಚಿಂತಕ ಆರ್.ಕೆ.ಹುಡುಗಿ ಮಾತನಾಡಿ. “ಈ ಹೋರಾಟ ನಾವೆಲ್ಲರೂ ಸವಾಲಾಗೆ ಸ್ವೀಕರಿಸಬೇಕಾಗಿದೆ. ನಮ್ಮ ಹಕ್ಕಿಗಾಗಿ ಈ ಹೋರಾಟ ನ್ಯಾಯ ಸಮ್ಮತವಾಗಿದೆ. ಜಾತಿ, ಮತ, ಪಂಥ, ಭೇದವಿಲ್ಲದೆ ಎಲ್ಲ ಪ್ರಗತಿಪರ ವಿಚಾರಧಾರೆ ಹಾಗೂ ಶಿಕ್ಷಣ ಸಂಸ್ಥೆಗಳು, ವಿವಿಧ ಸಂಘ ಸಂಸ್ಥೆಗಳು ಒಟ್ಟಾಗಿ ಸೇರಿ ಪ್ರತಿಭಟಿಸೋಣ” ಎಂದರು.

ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ಈ ಹೋರಾಟ ನ್ಯಾಯ ಸಮ್ಮತವಾಗಿದೆ. ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ನಾವೆಲ್ಲರೂ ಸೇರಿ ಜೂನ್ 29ರಂದು ನಗರದಲ್ಲಿ ನಮ್ಮ ಸ್ವಾಭಿಮಾನಕ್ಕಾಗಿ ಪ್ರತಿಭಟಿಸೋಣ” ಎಂದು ಕರೆ ನೀಡಿದರು.

ಸಭೆಯಲ್ಲಿ ಹೋರಾಟ ಸಮಿತಿ ಗೌರಾಧ್ಯಕ್ಷ ಬಸವರಾಜ್ ದೇಶಮುಖ, ಭಾಲ್ಕಿ ಹಿರೇಮಠದ ಗುರುಬಸವ ಪಟ್ಟದೇವರು, ಶಿವಶರಣಪ್ಪ ವಾಲಿ, ಬಸವರಾಜ ಜಾಬಶೆಟ್ಟಿ, ಬಿ.ಜಿ.ಶೆಟಕಾರ ಹಾಗೂ ಇತರರು ಮಾತನಾಡಿದರು.

ಬಾಬು ವಾಲಿ, ಡಾ ರಜನೀಶ್ ವಾಲಿ, ದೀಪಕ ವಾಲಿ, ಆನಂದ ದೇವಪ್ಪ, ಸೋಮಶೇಖರ ಪಾಟಿಲ ಗಾದಗಿ, ಶ್ರೀಕಾಂತ ಸ್ವಾಮಿ, ಸಿದ್ದರಾಮಪ್ಪ ಮಾಸಿಮಾಡೆ, ಮಾರುತಿ ಬೌದ್ದೆ, ಶರಣಪ್ಪ ಕರ್ನಲ್, ಜಗದೀಶ ಬಿರಾದಾರ, ಸಂತೋಷ್ ಜೋಳದಾಬಕೆ, ಬಸವರಾಜ ಧನ್ನೂರ, ಮಾಳಪ್ಪ ಅಡಸಾರೆ, ಆನಂದ ಘಂಟೆ, ಭಾರತಿ ವಸ್ತ್ರದ, ಜಯದೇವಿ ಯದಲಾಪುರ, ಪಾರ್ವತಿ ಸೋನಾರೆ, ಸಿ.ಆನಂದರಾವ್‌, ಎಸ್.ಎಮ್‌.ಜನವಾಡಕರ್, ನಿಜಾಮುದ್ದೀನ್, ಆಸೀಫೊದ್ದೀನ್, ವಿಜಯಕುಮಾರ ಸೋನಾರೆ, ರಮೇಶ ಬಿರಾದಾರ, ರೇವಣಸಿದ್ದಪ್ಪ ಜಲಾದೆ, ಶಶಿ ಹೊಸಳ್ಳಿ , ಚಂದ್ರಶೇಖರ ಪಾಟೀಲ ಸೇರಿದಂತೆ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಸಾಮಾಜಿಕ ಚಿಂತಕರು ಭಾಗವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ದೇವದಾರಿಯಲ್ಲಿ ಗಣಿಗಾರಿಕೆಗಿಲ್ಲ ದಾರಿ; ಅನುಮತಿ ನಿರಾಕರಿಸಲು ಅರಣ್ಯ ಸಚಿವ ಖಂಡ್ರೆ ಸೂಚನೆ

ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಸ್ವಾಗತಿಸಿದರು , ಶಿವಶಂಕರ ಟೋಕರೆ ನಿರೂಪಿಸಿದರು, ಟೀಂ ಯುವಾ ಸಂಯೋಜಕ ವಿನಯ ಮಾಳಗೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...