ಹಾಸನ | ಮೀಸಲು ಅರಣ್ಯ ಒತ್ತುವರಿ; 38 ಎಕರೆ ಕಾಫಿ ತೋಟ ತೆರವು

Date:

  • ಅರಣ್ಯ ಇಲಾಖೆ ಕಾರ್ಯಾಚರಣೆಯಿಂದ ಗ್ರಾಮಸ್ಥರಲ್ಲಿ ಆತಂಕ
  • 40 ವರ್ಷಗಳಿಂದ 38 ಎಕರೆ ಒತ್ತುವರಿ ಮಾಡಿಕೊಂಡಿದ್ದ ಒಬ್ಬನೇ ವ್ಯಕ್ತಿ

ರಕ್ಷಿತ ಅರಣ್ಯವನ್ನು ಒತ್ತುವರಿ ಮಾಡಿ, ಬೆಳೆಸಲಾಗಿದ್ದ 28 ಎಕರೆ ಕಾಫಿ ತೋಟವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿದ್ದಾರೆ.

- Advertisement -

ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಹಾನುಬಾಳು ಹೋಬಳಿಯ ಮರಗಡಿ, ಅಚ್ಚನಹಳ್ಳಿ ವ್ಯಾಪ್ತಿಯಲ್ಲಿ ತೆರವು ಕಾರ್ಯಾಚರಣೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ರಾಮಗಳ ಸರ್ವೆ ನಂಬರ್ 54ರಲ್ಲಿ ಸುಮಾರು 72.2 ಎಕರೆ ಪ್ರದೇಶವನ್ನು ಅರಣ್ಯ ರಕ್ಷಣಾ ಕಾಯ್ದೆ ಸೆಕ್ಷನ್ 04 ಮತ್ತು 17 ಅಡಿ ಮೀಸಲು ಅರಣ್ಯವೆಂದು ಘೋಷಿಸಲಾಗಿತ್ತು. ಆದರೆ, 72.2 ಎಕರೆ ಮೀಸಲು ಅರಣ್ಯ ಪ್ರದೇಶದ ಪೈಕಿ, 38.20 ಎಕರೆಯನ್ನು ಸನತ್ ಬಿನ್ ರಘುಪತಿ ಎಂಬುವರು ಒತ್ತುವರಿ ಮಾಡಿಕೊಂಡು ಸುಮಾರು 40 ವರ್ಷಗಳಿಂದ ಕಾಫಿ ತೋಟ ನಿರ್ಮಿಸಿದ್ದರು.

ಗುರುವಾರ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಜೆಸಿಬಿ ಯಂತ್ರದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ಒತ್ತುವರಿಯಾಗಿದ್ದ ಅರಣ್ಯ ಪ್ರದೇಶವನ್ನು ತೆರವುಗೊಳಿಸಿದ್ದಾರೆ. ಕಾಫಿ ತೋಟ ತೆರವು ಕಾರ್ಯಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಕಲೇಶಪುರ ಗ್ರಾಮಾಂತರ ಠಾಣಾ ಪೋಲೀಸರು ಬಿಗಿ ಬಂದೋಬಸ್ ಏರ್ಪಡಿಸಿದ್ದರು.

ಕಾರ್ಯಾಚರಣೆ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್, ವಲಯ ಅರಣ್ಯ ಅಧಿಕಾರಿ ಶಿಲ್ಪಾ, ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಐ ಬಸವರಾಜ್ ಹಾಗೂ ಇತರರು ಇದ್ದರು.

ಚುನಾವಣೆ ನೀತಿ ಜಾರಿಯಲ್ಲಿರುವ ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆ ಅಕ್ರಮ ಒತ್ತುವರಿದಾರರ ನಿದ್ದೆಗೆಡಿಸಿದೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಲವು ದಶಕಗಳಿಂದ ಮನೆ ನಿರ್ಮಿಸಿಕೊಂಡು ಸಾಗುಳಿ ಮಾಡುತ್ತಿದ್ದವರಲ್ಲಿ ಆತಂಕ ಉಂಟು ಮಾಡಿದೆ.

ಈ ಸುದ್ದಿ ಓದಿದ್ದೀರಾ? ಕೊಡಗು | ವಿಶ್ವ ಹಿಂದೂ ಪರಿಷತ್‌ ಜಿಲ್ಲಾಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ

ಕಾರ್ಯಾಚರಣೆ ಮುಂದುವರಿಯಲಿದೆ

ಈ ಕುರಿತು ಸಕಲೇಶಪುರ ವಲಯ ಅರಣ್ಯ ಸಂರಕ್ಷಣಾಧಿಕಾರಿ ಶಿಲ್ಪಾ ಅವರು ಈದಿನ.ಕಾಮ್‌ ಜೊತೆಗೆ ಮಾತನಾಡಿ, “ಹಾನುಬಾಳು ಭಾಗದಲ್ಲಿ ಇನ್ನೂ ಕೆಲವರು ಮೀಸಲು ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಎಲ್ಲವನ್ನೂ ಶೀಘ್ರವೇ ತೆರವು ಮಾಡಲಾಗುವುದು. ಇಂದು ಸನತ್ ಬಿನ್ ರಘುಪತಿ ಎಂಬುವರು ಒತ್ತುವರಿ ಮಾಡಿಕೊಂಡಿದ್ದ 38.20 ಎಕರೆ ಮೀಸಲು ಅರಣ್ಯ ಪ್ರದೇಶವನ್ನು ತೆರವು ಮಾಡಲಾಗಿದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...