ಬೆಳಗಾವಿ | ಪಿಡಿಒ ನಿರ್ಲಕ್ಷ್ಯ: ಕಲುಷಿತ ನೀರು ಕುಡಿದು 41 ಜನ ಅಸ್ವಸ್ಥ

Date:

Advertisements

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಪರಿಣಾಮ ಒಂದೇ ದಿನ 41 ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ.

ಬೋರ್ ವೆಲ್ ಪೈಪಿನಲ್ಲಿ ಕಲುಷಿತ ನೀರು ಸೇರಿಕೊಂಡಿದ್ದರಿಂದ ವಾಂತಿ–ಭೇದಿ ಕಾಣಿಸಿಕೊಂಡಿದ್ದು, ಗ್ರಾಮದ 41 ಮಂದಿ ಅಸ್ವಸ್ಥರಾಗಿದ್ದು, ಮೂವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ, ಮೂವರನ್ನು ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಚಚಡಿ ಗ್ರಾಮದಲ್ಲಿ ಪಿಡಿಒ ನಿರ್ಲಕ್ಷ್ಯ ವಹಿಸಿದ್ದರಿಂದ ಈ ಸಮಸ್ಯೆ ಉಂಟಾಗಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮದಲ್ಲಿ ನೀರು ಶುದ್ಧೀಕರಣ ಘಟಕಗಳು ಇದ್ದರೂ ಸಹ ಅವುಗಳನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ. ವಾಂತಿ ಭೇದಿ ಸಮಸ್ಯೆ ಕಂಡು ಬಂದಾಗ ಸಮಸ್ಯೆಗೆ ಸ್ಪಂದಿಸಿರಲಿಲ್ಲ. ಗ್ರಾಮ ಪಂಚಾಯತ್ ನ ನಿರ್ಲಕ್ಷ್ಯದಿಂದಾಗಿ ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿದ್ದಾರೆ ಎಂದು ದೂರಿದ್ದಾರೆ.

Advertisements

ಈ ಘಟನೆಯಲ್ಲಿ ತೀವ್ರವಾಗಿ ಅಸ್ವಸ್ಥರಾಗಿದ್ದ ಈರವ್ವ ಗಾಳಿಮಠ (63) ಅವರನ್ನು ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸಲಾಗಿದೆ. ಇನ್ನಿಬ್ಬರು ಒಳರೋಗಿಗಳಾಗಿ ದಾಖಲಾಗಿದ್ದಾರೆ. ಉಳಿದವರು ಚಚಡಿ ಹಾಗೂ ಇಂಚಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಷಯ ತಿಳಿದು ಗ್ರಾಮಕ್ಕೆ ಧಾವಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಕೋಣಿ ತುರ್ತು ಚಿಕಿತ್ಸೆಯ ವ್ಯವಸ್ಥೆ ಮಾಡಿದರು.

ಸವದತ್ತಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಯಶವಂತಕುಮಾರ್‌ ಮಾತನಾಡಿ, ‘ಸಮಸ್ಯೆ ಉಲ್ಬಣವಾಗುತ್ತಿದ್ದಂತೆ ಎಚ್ಚರಿಕೆ ಕ್ರಮ ವಹಿಸಲಾಗಿದೆ. ಗ್ರಾಮದ ಬೋರ್‌ವೆಲ್‌ಗಳ ನೀರನ್ನು ತಪಾಸಣೆಗೆ ಕಳಿಸಲಾಗಿದೆ. ಸೋಮವಾರ ಗ್ರಾಮಕ್ಕೆ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಪೂರೈಸಲಾಗಿದೆ. ಓವರ್‌ಹೆಡ್‌ ಟ್ಯಾಂಕಿನಿಂದ ನೀರು ಸ್ಥಗಿತ ಮಾಡಲಾಗಿದೆ’ ಎಂದರು.

ನೀರಿನ ಟ್ಯಾಂಕನ್ನು ಸಂಪೂರ್ಣ ಖಾಲಿ ಮಾಡಿ, ಒಣಗಿಸಿ ಮತ್ತೆ ನೀರು ಭರ್ತಿ ಮಾಡಲಾಗುವುದು. ಆ ನೀರನ್ನು ಕೂಡ ನಳಗಳ ಮೂಲಕ ಹರಿಬಿಟ್ಟು ಮತ್ತೆ ಟ್ಯಾಂಕ್‌ ಖಾಲಿ ಮಾಡಲಾಗುವುದು. ಇದರಿಂದ ಟ್ಯಾಂಕ್ ಅಥವಾ ನಳಗಳಲ್ಲಿ ಮಲಿನ ನೀರು ಸೇರಿಕೊಂಡಿದ್ದರೆ ಸ್ವಚ್ಛವಾಗುತ್ತದೆ. ಮತ್ತೊಮ್ಮೆ ತಪಾಸಣೆ ಮಾಡಿದ ಬಳಿಕ ನೀರು ಪೂರೈಸಲಾಗುವುದು ಎಂದು ತಿಳಿಸಿದ್ದಾರೆ.

ಪೈಪ್‌ಲೈನ್‌ಗೆ ಸೇರಿದ ಚರಂಡಿ ನೀರು ಗ್ರಾಮದ ಬೋರ್‌ವೆಲ್‌ಗಳ ಮೂಲಕ ಓವರ್‌ಹೆಡ್‌ ಟ್ಯಾಂಕಿಗೆ ನೀರು ತುಂಬಿಸಲಾಗುತ್ತದೆ. ಅಲ್ಲಿಂದ ಮನೆಮನೆಗೆ ನಳಗಳ ಮೂಲಕ ಹರಿಸಲಾಗುತ್ತದೆ. ಮನೆಗಳಿಗೆ ನೀರು ಸರಬರಾಜು ಮಾಡುವ ಪೈಪ್‌ಲೈನಿನಲ್ಲಿ ಚರಂಡಿ ನೀರು ಸೇರಿಕೊಂಡಿದ್ದರಿಂದ ಈಗ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಸದ್ಯ ವೀರಭದ್ರೇಶ್ವರ ದೇವಸ್ಥಾನದ ಸುತ್ತಲಿನ ಪ್ರದೇಶದಲ್ಲಿ ಸಮಸ್ಯೆ ಉಲ್ಬಣವಾಗಿದೆ. ಇಡೀ ಊರಿಗೆ ಹಬ್ಬುವ ಮುನ್ನವೇ ಕ್ರಮ ವಹಿಸಬೇಕು ಎಂದೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X