ಬೀದರ್‌ | ಆಧುನಿಕ ಅನುಭವ ಮಂಟಪಕ್ಕೆ 50 ಕೋಟಿ ರೂ. ಬಿಡುಗಡೆ : ಸಚಿವ ಈಶ್ವರ ಖಂಡ್ರೆ

Date:

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಗಳ ಬಿಲ್ ಪಾವತಿ ಮಾಡಲು 50 ಕೋಟಿ ರೂ. ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯಯವರು ಬಿಡುಗಡೆ ಮಾಡಿದ್ದು, ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಆಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.

- Advertisement -

“ಆಧುನಿಕ ಅನುಭವ ಮಂಟಪ ಕಾಮಗಾರಿಗೆ ಕಾಂಗ್ರೆಸ್ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ ಎಂದು ವಿರೋಧ ಪಕ್ಷದ ಕೆಲವರು ವೃಥಾ ಆರೋಪ ಮಾಡುತ್ತಿರುವುದರಲ್ಲಿ ಹುರುಳಿಲ್ಲ. ಸರ್ಕಾರ ಬಸವಕಲ್ಯಾಣದ ಅಭಿವೃದ್ಧಿಗೆ ಮತ್ತು ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ಬದ್ಧವಾಗಿದೆ” ಎಂದು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

“ಮಾರ್ಚ್ ತಿಂಗಳವರೆಗಿನ ಬಿಲ್ ಪಾವತಿ ಮಾಡಲು ಕೂಡಲೇ 50 ಕೋಟಿ ರೂ. ನೀಡಬೇಕು ಎಂದು ನಾನು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಕೂಡಲೇ ಅವರು ಹಣ ಮಂಜೂರು ಮಾಡಿದರು. ಆ ಹಣ ಜಿಲ್ಲಾಧಿಕಾರಿ ಖಾತೆಗೂ ಜಮಾ ಆಗಿದೆ. ಆದರೂ ಕೆಲವರು ಸುಳ್ಳು ಪ್ರಚಾರ ಮಾಡಿ ಜನರಲ್ಲಿ ಗೊಂದಲ ಉಂಟು ಮಾಡುವ ಕಾರ್ಯ ಮಾಡುತ್ತಿದ್ದಾರೆ. ಇದು ಅಕ್ಷಮ್ಯ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ನ್ಯಾಯಾಲಯಗಳಲ್ಲಿ ಪೂಜೆ-ಪುನಸ್ಕಾರ ನಿಲ್ಲಿಸಿ; ಸಂವಿಧಾನಕ್ಕೆ ತಲೆಬಾಗಿ: ನ್ಯಾಯಮೂರ್ತಿ ಅಭಯ್ ಓಕಾ

“ಮುಂದಿನ ದಿನಗಳಲ್ಲಿ ಬಸವಕಲ್ಯಾಣದ ಆಧುನಿಕ ಅನುಭವ ಮಂಪಟಕ್ಕೆ ಹೆಚ್ಚಿನ ಅನುದಾನ ತಂದು, ಕಾಮಗಾರಿಗೆ ವೇಗ ನೀಡಿ, ಬಸವ ಭಕ್ತರ ಮತ್ತು ಕಲ್ಯಾಣ ಕರ್ನಾಟಕದ ಜನರ, ಜಗತ್ತಿನಲ್ಲಿ ಇರುವ ಶರಣರ ಕನಸು ನನಸು ಮಾಡಲು ಸರ್ವ ಪ್ರಯತ್ನ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಸ್ಪಷ್ಟಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | 101.9 ಎಫ್‌ಎಂ ಸೇವೆಗೆ ಚಾಲನೆ; ಕರಾವಳಿಯಲ್ಲಿ ಆಕಾಶವಾಣಿ ಪ್ರಸಾರ ವ್ಯವಸ್ಥೆ ಬಲವರ್ಧನೆ : ಸಚಿವ ಅಶ್ವಿನಿ ವೈಷ್ಣವ್

ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ ಪ್ರಸಾರ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಆರಂಭಗೊಂಡಿರುವ...

ಬಾಗಲಕೋಟೆ |ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ

ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ...

ಕೋಲಾರ | ಕೋಳಿ ಸಾಕಾಣಿಕೆ ರೈತರ ಬೇಡಿಕೆ ಈಡೇರಿಕೆಗೆ ನ.25ರಂದು ವಿಧಾನಸೌಧ ಚಲೋ

ಕೋಳಿ ಸಾಕಾಣಿಕೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ...