ರಾಜ್ಯದಲ್ಲಿ 5,000 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ: ಈಶ್ವರ ಖಂಡ್ರೆ

Date:

Advertisements

ರಾಜ್ಯದಲ್ಲಿ ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ ಸುಮಾರು 5,000 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ. ಅದರಲ್ಲಿ ಹೆಚ್ಚಿನ ಭೂಮಿ ಕೊಡಗು ಜಿಲ್ಲೆಯದ್ದಾಗಿದೆ ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

“ಅರಣ್ಯ ಇಲಾಖೆಯ ಲೆಕ್ಕ ಪರಿಶೋಧನಾ ವರದಿಯ ಪ್ರಕಾರ, ಒತ್ತುವರಿಯು ಭೋಗ್ಯಕ್ಕೆ ಪಡೆದ ಜಮೀನುಗಳಲ್ಲಾಗಿವೆ. ಆಸ್ತಿ ಮಾಲೀಕರು ಅವುಗಳನ್ನು ಹಿಂದಿರುಗಿಸಲು ಬಯಸದೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅತಿಕ್ರಮಣಕಾರರಲ್ಲಿ ಒಬ್ಬರು ‘ಟಾಟಾ ಕಾಫಿ‘ ಮಾಲೀಕರಾಗಿದ್ದಾರೆ. ವಿರಾಜಪೇಟೆಯಲ್ಲಿ ಬ್ರಿಟಿಷರು 99 ವರ್ಷಗಳ ಗುತ್ತಿಗೆಗೆ ಅರಣ್ಯ ಭೂಮಿಯನ್ನು ಖಾಸಗಿ ಕಂಪನಿಗಳಿಗೆ ಹಸ್ತಾಂತರಿಸಿದ್ದರು. ಆದರೆ, ಟಾಟಾ ಕಂಪನಿಯು ಈಗ ಭೂಮಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಲು ನಿರಾಕರಿಸಿ ಒಡೆತನದ ಹಕ್ಕು ಪಡೆದಿದೆ. ಥಾಮ್ಸನ್ ರಬ್ಬರ್ ಕಂಪನಿಯು ತನ್ನ ಜಮೀನನ್ನು ಬ್ಯಾಂಕ್ ಸಾಲಕ್ಕೆ ಒತ್ತೆ ಇಟ್ಟಿದ್ದು, ಬ್ಯಾಂಕ್ ಅದನ್ನು ಹರಾಜು ಹಾಕಿದೆ,” ಎಂದು ಹೇಳಿದ್ದಾರೆ.

“ಕೊಡಗು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಇಲಾಖೆಯು ಮಾರ್ಕರ್ ರಬ್ಬರ್ ಲಿಮಿಟೆಡ್‌ನಿಂದ 454 ಕೋಟಿ ರೂ. ಮೌಲ್ಯದ 1,074 ಎಕರೆ, ಥಾಮ್ಸನ್ ರಬ್ಬರ್‌ನಿಂದ 91.29 ಕೋಟಿ ರೂ. ಮೌಲ್ಯದ 625 ಎಕರೆ, ನಿಲಂಬೂರ್ ರಬ್ಬರ್‌ನಿಂದ 130.22 ಕೋಟಿ ರೂ. ಮೌಲ್ಯದ 713 ಎಕರೆ, ಪೋರ್ಟ್‌ಲ್ಯಾಂಡ್ ರಬ್ಬರ್ ಎಸ್ಟೇಟ್‌ನಿಂದ 6 ಕೋಟಿ ರೂ. ಮೌಲ್ಯದ 286 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಬೇಕಾಗಿದೆ. ಗ್ಲೆನ್ ಲಾರೆನ್ ಪ್ಲಾಂಟೇಶನ್‌ ಮತ್ತು ಟಾಟಾ ಕಾಫಿ ಕಂಪನಿಯಿಂದ 524 ಕೋಟಿ ರೂ. ಮೌಲ್ಯದ 943 ಎಕರೆ ಹಾಗೂ ಹೊನ್ನಮಟ್ಟಿ ನೀಲಗಿರಿ ಪ್ಲಾಂಟೇಶನ್‌ನಿಂದ 25.36 ಕೋಟಿ ರೂ. ಮೌಲ್ಯದ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ” ಎಂದು ಅವರು ವಿವರಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ?: ಕೆಆರ್‌ಎಸ್‌ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ: ಹೈಕೋರ್ಟ್‌

“ಲೆಕ್ಕಪರಿಶೋಧನಾ ವರದಿ ಪ್ರಕಾರ ವಿರಾಜಪೇಟೆಯೊಂದರಲ್ಲೇ ಒತ್ತುವರಿದಾರರಿಂದ 1,601 ಕೋಟಿ ರೂ.ಗಳನ್ನು ದಂಡವಾಗಿ ಇಲಾಖೆ ಪಡೆಯಬೇಕಿದೆ. ಭೂಮಿ ಮತ್ತು ದಂಡ ವಸೂಲಿಗಾಗಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಪರಿಸರ ಇಲಾಖೆ ಕಾರ್ಯದರ್ಶಿ ಬಿ.ಪಿ.ರವಿ ಅವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದೆ. ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಆರು ತಿಂಗಳಿಂದ ಒಂದು ವರ್ಷದೊಳಗೆ ಇತ್ಯರ್ಥಪಡಿಸಲು ಹಿರಿಯ ವಕೀಲರನ್ನು ನೇಮಿಸಿಕೊಳ್ಳಲಾಗುತ್ತಿದೆ,” ಎಂದು ಖಂಡ್ರೆ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X