ಬೀದರ್‌ | ಆದಾಯಕ್ಕಿಂತ 6.43 ಲಕ್ಷ ರೂ. ಅಧಿಕ ಆಸ್ತಿ; ಎಂಜಿನಿಯರ್‌ಗೆ 4 ವರ್ಷ ಜೈಲು, 25 ಲಕ್ಷ ದಂಡ

Date:

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಕಾರಂಜಾ ಕಾಲುವೆ ನಿರ್ಮಾಣ ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಫಿರೋಜುದ್ದಿನ್ ಖಮ್ರೋದ್ದಿನ್ ಖಾನ್ ಅವರಿಗೆ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಧೀಶರ ನ್ಯಾಯಾಲವು 4 ವರ್ಷ ಜೈಲು ಹಾಗೂ 25 ಲಕ್ಷ ರೂ. ದಂಡ ವಿಧಿಸಿದೆ.

- Advertisement -

ಆರೋಪಿಯು ಅದಾಯಕ್ಕಿಂತ 6.43 ಲಕ್ಷ ರೂ. ಹೆಚ್ಚಿನ ಅಕ್ರಮ ಆಸ್ತಿ ಹೊಂದಿರುವುದು ಸಾಬೀತು ಆಗಿರುವುದರಿಂದ ಆರೋಪಿ ವಿರುದ್ಧ ಮಂಗಳವಾರ ನ್ಯಾಯಾಧೀಶ ವಿಜಯಕುಮಾರ ಎಮ್. ಆನಂದಶೆಟ್ಟಿ ಅವರು ತೀರ್ಪು ನೀಡಿದ್ದಾರೆ. ಲಂಚ ನಿಷೇಧ ಕಾಯ್ದೆಯ ಕಲಂ 13(2) ಪ್ರಕಾರ ಶಿಕ್ಷೆ ವಿಧಿಸಲಾಗಿದೆ. ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ವೇಳೆ ದೊರೆತ ಚಿನ್ನಾಭರಣ ಹಾಗೂ ನಗದು ಹಣ ಜಪ್ತಿ ಮಾಡಲು ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಬೀದರ್‌ ನಗರದ ಗುರುನಗರ ಕಾಲೋನಿಯ ನಿವಾಸಿಯಾದ ಫಿರೋಜುದ್ದಿನ್ ಖಾನ್‌ 1982ರಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್‌ ಆಗಿ ಸೇವೆಗೆ ಸೇರಿದ್ದರು. ನಂತರ ಬೀದರ, ಹುಮನಾಬಾದನಲ್ಲಿ  ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ, ಕಾರಂಜಾ ಕಾಲುವೆ ನಿರ್ಮಾಣ ಯೋಜನೆ, ಕಾರಂಜಾ ಏತ ನೀರಾವರಿ, ಜಲ ಸಂಪನ್ಮೂಲ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ಬೀದರ ಜಿಲ್ಲೆಯ ಕಾರಂಜಾ ಕಾಲುವೆ ನಿರ್ಮಾಣ ಯೋಜನೆಯ ಹುಮನಾಬಾದ ಕ್ಯಾಂಪ್‌ನಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಆಗಿ ಕರ್ತವ್ಯದಲ್ಲಿದಾಗ 2008ರ ಫೆ.2ರಂದು ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ನಗರದ‌ ಗುರುನಾನಕ ಕಾಲೋನಿಯ ಅವರ ಮನೆ, ನೆಹರು ಕ್ರೀಡಾಂಗಣ ಹತ್ತಿರದ ಅವರ ಮಾವ ಲೈಕೊದ್ದೀನ್ ಮನೆ ಮತ್ತು ಗೋಲೆಖಾನಾದಲ್ಲಿನ ಅಣ್ಣ ಎಮ್.ಝಡ್.ಬಾಬರ್ ಅವರ ಮನೆಗಳ ಮೇಲೆ ದಾಳಿ ನಡೆಸಿದರು. ಹುಮನಾಬಾದ ಕಛೇರಿಯಲ್ಲಿ ಸಹ ಶೋಧನೆ ನಡೆಸಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಾಗತಿಕ ಮಟ್ಟದಲ್ಲಿ ಬಸವ ಚಿಂತನೆ ತಲುಪಿಸುವುದು ಇಂದಿನ ತುರ್ತು : ಆರ್.ಕೆ.ಹುಡುಗಿ

ಆರೋಪಿಯ ಆದಾಯ, ಸ್ಥಿರಾಸ್ತಿ, ಚರಾಸ್ತಿ ಮತ್ತು ಖರ್ಚು ವೆಚ್ಚ ಲೆಕ್ಕ ಮಾಡಿದಾಗ ಅದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವುದು ಕಂಡು ಬಂದಿರುವುದರಿಂದ ಲೋಕಾಯುಕ್ತ ಡಿವೈಎಸ್‌ಪಿ ಟಿ.ಜಿ. ರಾಯ್ಕರ್ ತನಿಖೆ ನಡೆಸಿ,  ದೋಷರೋಪಣಾ ಪತ್ರ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿತ್ತು. ಲೋಕಾಯುಕ್ತ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಕೇಶವರಾವ ಶ್ರೀಮಾಳೆ ಅವರು ವಾದ ಮಂಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಬೀದರ್‌ | ಒತ್ತಡ ನಿವಾರಣೆಗೆ ಸಾಂಸ್ಕೃತಿಕ ಚಟುವಟಿಕೆ ಅಗತ್ಯ: ಡಿಸಿ ಶಿಲ್ಪಾ ಶರ್ಮಾ

ಯುವಜನರಲ್ಲಿರುವ ಪ್ರತಿಭೆಯನ್ನು ಹೊರತರುವುದರ ಜೊತೆಗೆ, ದೈನಂದಿನ ಜೀವನದ ಮಾನಸಿಕ ಒತ್ತಡ ನಿವಾರಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...