ಬೆಂಗಳೂರು | ಶೇ.60ರಷ್ಟು ಪತ್ರಕರ್ತೆಯರು ಆನ್‌ಲೈನ್‌ ದಾಳಿಗೊಳಗಾಗುತ್ತಿದ್ದಾರೆ: ಕೆ ಪಿ ಅಶ್ವಿನಿ

Date:

Advertisements

ಪತ್ರಕರ್ತೆಯರ ಮೇಲೆ ನಿರಂತರವಾಗಿ ಆನ್‌ಲೈನ್‌ನಲ್ಲಿ ದಾಳಿ ನಡೆಸಲಾಗುತ್ತಿದೆ. ಈ ಬಗ್ಗೆ ನಾನು ನಡೆಸಿದ ಅಧ್ಯಯನದಲ್ಲಿ ಶೇ.60ರಿಂದ 70ರಷ್ಟು ಪತ್ರಕರ್ತೆಯರು ತಮ್ಮ ವರದಿ, ಲೇಖನಗಳ ಕಾರಣಕ್ಕಾಗಿ ಆನ್‌ಲೈನ್‌ನಲ್ಲಿ ದಾಳಿಗೊಳಗಾಗಿರುವ ಅಂಶ ಬಹಿರಂಗವಾಗಿದೆ ಎಂದು ವಿಶ್ವಸಂಸ್ಥೆಯ ವರ್ಣಭೇದ ನೀತಿ ಸದಸ್ಯೆ ಹಾಗೂ ಮಾನವ ಹಕ್ಕುಗಳ ತಜ್ಞೆ ಕೆ ಪಿ ಅಶ್ವಿನಿ ಹೇಳಿದರು.

ಬೆಂಗಳೂರು ನಗರದಲ್ಲಿ ಕರ್ನಾಟಕ ಪತ್ರಕರ್ತೆಯರ ಸಂಘ ಗುರುವಾರ ಆಯೋಜಿಸಿದ್ದ ನಾಗಮಣಿ ಎಸ್. ರಾವ್ ದತ್ತಿ ಉಪನ್ಯಾಸ ಹಾಗೂ ಪ್ರಶಸ್ತಿ ಪುರಸ್ಕೃತ ಪತ್ರಕರ್ತೆಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ‘ಮಾಧ್ಯಮದಲ್ಲಿ ಮಹಿಳಾ ಪ್ರಾಮುಖ್ಯತೆ ಮತ್ತು ಜವಾಬ್ದಾರಿ’ ವಿಷಯ ಕುರಿತು ಮಾತನಾಡಿದರು.

ಇದನ್ನೂ ಓದಿ : ಬೆಂಗಳೂರು | ಭ್ರಷ್ಟ ಅಧಿಕಾರಿಯ ಮನೆಯಲ್ಲಿ ಚಿನ್ನ, ಬೆಳ್ಳಿಗಳ ರಾಶಿ: ಬೆಚ್ಚಿಬಿದ್ದ ಲೋಕಾಯುಕ್ತ ಅಧಿಕಾರಿಗಳು!

Advertisements

“ಇತ್ತೀಚೆಗಷ್ಟೇ ಡೇಟಿಂಗ್ ಆ್ಯಪ್ ಬಗ್ಗೆ ಬರೆದ ತಳಸಮುದಾಯದ ಪತ್ರಕರ್ತೆಯೊಬ್ಬರ ಮೇಲೂ ನಿರಂತರ ದಾಳಿ ನಡೆಸಲಾಗಿತ್ತು. ಆದರೆ, ಆಕೆ ಕಾರ್ಯನಿರ್ವಹಿಸುವ ಮಾಧ್ಯಮ ಸಂಸ್ಥೆ ಟ್ರೋಲ್ ಮಾಡುವವರಿಗೆ ಕಾನೂನು ಸಮರದ ಎಚ್ಚರಿಕೆ ನೀಡಿದ ಮೇಲಷ್ಟೇ ಅದು ನಿಂತಿತು. ಈ ರೀತಿಯ ಬೆಂಬಲದ ವಾತಾವರಣ ಎಲ್ಲ ಮಾಧ್ಯಮ ಸಂಸ್ಥೆಗಳಲ್ಲೂ ಇರಬೇಕು” ಎಂದು ಆಶಿಸಿದರು.

“ಕಳೆದ ಮೂರು ದಶಕಗಳಲ್ಲಿ ಮಾಧ್ಯಮರಂಗ ವೇಗವಾಗಿ ಬೆಳೆದಿದೆ. ಆದರೆ, ಜಾಗತಿಕ ಮಟ್ಟಕ್ಕೆ ಹೋಲಿಸಿದರೆ ಭಾರತೀಯ ಮಾಧ್ಯಮಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ತೃಪ್ತಿಕರವಾಗಿಲ್ಲ. ಅದರಲ್ಲೂ ಕೋವಿಡ್ ನಂತರದ ದಿನಗಳಲ್ಲಿ ಪತ್ರಕರ್ತೆಯರು ತಮ್ಮ ವೈಯಕ್ತಿಕ ಬದುಕು ಹಾಗೂ ವೃತ್ತಿ ಎರಡನ್ನೂ ನಿಭಾಯಿಸಲಾಗದೇ ಹೆಚ್ಚಿನ ಸಂಖ್ಯೆಯಲ್ಲಿ ವೃತ್ತಿಯನ್ನು ತೊರೆದಿರುವುದು ವಿಷಾದನೀಯ” ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ನಬಾರ್ಡ್ ಸಾಲ ಖೋತಾ ಮಾಡಿದ ಮೋದಿ ಸರ್ಕಾರ ರೈತಪರವೇ?

ಕಾರ್ಯಕ್ರಮದಲ್ಲಿ ವಿವಿಧ ಪ್ರಶಸ್ತಿ ಪುರಸ್ಕೃತ ಪತ್ರಕರ್ತೆಯರಾದ ಆರ್ ಪೂರ್ಣಿಮಾ, ಎಚ್ ಎಲ್ ಸೀತಾದೇವಿ, ಎಚ್ ಎನ್ ಆರತಿ, ಶಾಂತಕುಮಾರಿ ಕೆ, ಭಾರತಿ ಹೆಗಡೆ, ರಶ್ಮಿ ಎಸ್, ಮಂಜುಳಾ ಕಿರುಗಾವಲು, ಮಂಜುಳಾ ಹುಲಿಕುಂಟೆ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪತ್ರಕರ್ತ ವಿ ಟಿ ರಾಜಶೇಖರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ದತ್ತಿನಿಧಿ ಸ್ಥಾಪಕಿ ನಾಗಮಣಿ ಎಸ್ ರಾವ್, ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X