ಲಂಚ ಪಡೆಯದೇ 600 ಕೋಟಿ ರೂ. ಬಿಲ್‌ ಬಿಡುಗಡೆ: ಕೆಂಪಣ್ಣ

Date:

ಲೋಕೋಪಯೋಗಿ ಇಲಾಖೆಯಡಿ ರಾಜ್ಯದಲ್ಲಿ ಒಂದು ಕೋಟಿ ರೂ.ಗಿಂತ ಕಡಿಮೆ ಬಿಲ್‌ ಇದ್ದ 1054 ಸಣ್ಣ ಗುತ್ತಿಗೆದಾರರ ಒಟ್ಟು 600 ಕೋಟಿ ರೂ. ಬಾಕಿ ಬಿಲ್‌ಅನ್ನು ಲಂಚ ಪಡೆಯದೆ ಇಲಾಖೆ ಬಿಡುಗಡೆ ಮಾಡಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಲೋಕೋಪಯೋಗಿ ಇಲಾಖೆಯು ಯಾವುದೇ ಲಂಚ ಪಡೆಯದೆ, 600 ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿದೆ. ಇದೇ ರೀತಿ ಎಲ್ಲ ಇಲಾಖೆಗಳೂ ಬಿಲ್ ಬಿಡುಗಡೆ ಮಾಡಲಿ” ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

“ಗುತ್ತಿಗೆದಾರರ ಬಾಕಿ ಬಿಲ್‌ ಬಿಡುಗಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಹಕಾರ ನೀಡುತ್ತಿದ್ದಾರೆ. ಬಿಬಿಎಂಪಿಯಲ್ಲಿ ಬಾಕಿ ಉಳಿದಿರುವ ಬಿಲ್‌ಗಳ ಬಿಡುಗಡೆ ಮಾಡುವುದಾಗಿ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್‌ ಪಡೆದು ಬಿಲ್‌ ಪಾವತಿ ಮಾಡಲಾಗುತ್ತಿದೆ. ಸಚಿವರು ಕಮಿಷನ್ ಪಡೆದು, ಬಿಲ್‌ ಬಿಡುಗಡೆ ಮಾಡುತ್ತಿದ್ದಾರೆ ಎಂದು ಕೆಂಪಣ್ಣ ಆರೋಪಿಸಿದ್ದರು. ಮಾತ್ರವಲ್ಲದೆ, ಇತ್ತೀಚೆಗೆ ಕಮಿಷನ್‌ ಬಗ್ಗೆ ಮಾತನಾಡಿದ್ದ ಕೆಂಪಣ್ಣ, ಇಂದಿನ ಕಾಂಗ್ರೆಸ್‌ ಸರ್ಕಾರದಲ್ಲಿಯೂ ಕಮಿಷನ್ ಇದೆ. ಬಿಜೆಪಿ ಸರ್ಕಾರದಲ್ಲಿ ಶಾಸಕರು, ಸಚಿವರು ಕಮಿಷನ್ ಕೇಳುತ್ತಿದ್ದರು. ಈಗ, ಅಧಿಕಾರಿಗಳು ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದೀಗ, ಕಮಿಷನ್ ಪಡೆಯದೆ ಲೋಕೋಪಯೋಗಿ ಇಲಾಖೆ ಬಿಲ್‌ ಪಾವತಿ ಮಾಡಿದೆ ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...