ಬೆಂಗಳೂರು | DRDO-CABSನಲ್ಲಿ ಮಹಿಳಾ‌ ಕಾರ್ಮಿಕರ ವಜಾ: ಪ್ರತಿಭಟನಾ ಸ್ಥಳಕ್ಕೆ ಸಫಾಯಿ ಕರ್ಮಚಾರಿ ಆಯೋಗ ಭೇಟಿ

Date:

Advertisements

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗವು ಇಂದು ಡಿಆರ್‌ಡಿಒ-ಸಿಎಬಿಎಸ್‌ಗೆ ಭೇಟಿ ನೀಡಿದ್ದು, ಕೆಲಸ ನಿರಾಕರಣೆಗೊಳಪಟ್ಟಿರುವ 61 ಮಹಿಳಾ ಸಫಾಯಿ ಕರ್ಮಚಾರಿಗಳನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಿತು.

ಒಕ್ಕೂಟ ಸರ್ಕಾರದ ರಕ್ಷಣಾ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ಡಿಆರ್‌ಡಿಒ-ಸಿಎಬಿಎಸ್‌ನಲ್ಲಿ ಕಳೆದ 2-3 ದಶಕಗಳಿಂದ ಸಫಾಯಿ ಕರ್ಮಚಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದ 61 ಜನ ಸಫಾಯಿ ಕರ್ಮಚಾರಿಗಳು ತಮಗೆ ಕಾನೂನುಬದ್ದವಾಗಿ ಸಿಗಬೇಕಾಗಿರುವ ಸೇವಾ ಸೌಲಭ್ಯಗಳನ್ನು ಕೇಳಿದ್ದಕ್ಕಾಗಿ ಮತ್ತು ಕಾರ್ಮಿಕ ವಿರೋಧಿನೀತಿಗಳ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಕೆಲಸದಿಂದ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ 61 ಜನ ಸಫಾಯಿ ಕರ್ಮಚಾರಿಗಳು ಪ್ರತಿಭಟನೆ ನಡೆಸುತ್ತಿದ್ದರು.

ಕೆಲಸ ನಿರಾಕರಣೆಗೊಳಪಟ್ಟಿರುವ ಸಫಾಯಿ ಕರ್ಮಚಾರಿಗಳು, ತಮ್ಮನ್ನು ಸಮಾಜ ಕಲ್ಯಾಣ ಸಚಿವರು ನೀಡಿರುವ ನಿರ್ದೇಶನದ ಮೇರೆಗೆ ಕೆಲಸಕ್ಕೆ ವಾಪಸ್ಸು ತೆಗೆದುಕೊಳ್ಳುವಂತೆ ಒತ್ತಾಯಿಸಿ ಸಿಎಬಿಎಸ್ ಡಿಆರ್‌ಡಿಒ ಕಛೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗವು ಇಂದು(ಸೆ.3) ಭೇಟಿ ನೀಡಿ 61 ಕಾರ್ಮಿಕರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಿತು. ಈ ಹಿಂದೆ ನೀಡಿದ್ದ ಆದೇಶವನ್ನು ಪಾಲಿಸುವಂತೆ ನಿರ್ದೇಶಿಸಿದ್ದಾರೆ.

Advertisements

ಪ್ರತಿಭಟನಾ ಸ್ಥಳದಲ್ಲಿ ಕಾರ್ಮಿಕರೊಂದಿಗೆ ಮಾತನಾಡಿದ ಆಯೋಗವು ಆದೇಶದ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಸಿಎಬಿಎಸ್ ಡಿಆರ್‌ಡಿಒ ನಿರ್ದೇಶಕರೊಂದಿಗೆ ಮುಂದಿನ ವಾರ ಸಭೆ ಕರೆಯಲಾಗುವುದು ಎಂದು ಹೇಳಿದರು. ಕಾರ್ಮಿಕರು ತಮ್ಮ ಬೇಡಿಕೆ ಈಡೇರಿಕೆಗಾಗಿ ಹೋರಾಟ ಮುಂದುವರಿಸಲಿದ್ದಾರೆ.

ಇದನ್ನು ಓದಿದ್ದೀರಾ? ಸಮಗ್ರ ಕೊಳಗೇರಿ ಅಭಿವೃದ್ಧಿ ನೀತಿ ಅನುಷ್ಠಾನಕ್ಕೆ ತ್ವರಿತ ನಿಯಮಾವಳಿ: ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ

ಕಾರ್ಮಿಕರ ಈ ಹೋರಾಟ ಮತ್ತೊಮ್ಮೆ ಗುತ್ತಿಗೆ ಪದ್ದತಿಯಲ್ಲಿರುವ ಕಾರ್ಮಿಕರ ದುಸ್ಥಿತಿಯನ್ನು ಎತ್ತಿ ತೋರಿಸುತ್ತದೆ. 61 ಕಾರ್ಮಿಕರನ್ನು ಮರು ಉದ್ಯೋಗ ನೀಡಲು ಮತ್ತು ಕಾರ್ಮಿಕರಿಗೆ ನ್ಯಾಯಯುತ ಮತ್ತು ಗೌರವಾನ್ವಿತ ಕೆಲಸದ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಒಕ್ಕೂಟ ಸರ್ಕಾರದ ರಕ್ಷಣಾ ಸಚಿವರು ತಕ್ಷಣವೇ ಸಿಎಬಿಎಸ್ ಡಿಆರ್‌ಡಿಒಗೆ ನಿರ್ದೇಶನ ನೀಡುವುದು ಅತ್ಯಾವಶ್ಯಕವಾಗಿದೆ ಎಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ.

WhatsApp Image 2024 09 03 at 5.14.18 PM 1
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X