ಆಲಮಟ್ಟಿ ಜಲಾಶಯದಲ್ಲಿ 7.556ಟಿಎಂಸಿ ಅಡಿ ಹೂಳು: ನೀರು ಸಂಗ್ರಹ ಸಾಮರ್ಥ್ಯ ಕುಸಿತ

Date:

123.081 ಟಿಎಂಸಿ ಅಡಿ ನೀರು ಸಂಗ್ರಹ ಸಮರ್ಥದ ಆಲಮಟ್ಟಿ ಜಲಾಶಯದಲ್ಲಿ ಸದ್ಯ 7.556ಟಿಎಂಸಿ ಅಡಿ ಹೂಳು ಇದೆ. ಜಲಾಶಯದ ನೀರು ಸಂಗ್ರಹ ಸಾಮರ್ಥ್ಯ 115.552 ಟಿಎಂಸಿ ಅಡಿಗೆ ಕುಸಿದಿದೆ.

- Advertisement -

2023ರಲ್ಲಿ ಕರ್ನಾಟಕ ಎಂಜಿನಿಯರಿಂಗ್ ಸಂಶೋಧನಾ ಕೇಂದ್ರ(ಕೆಇಆರ್‌ಎಸ್‌) ನಡೆಸಿದ ಆಲಮಟ್ಟಿ ಜಲಾಶಯ ಸೇರಿ ರಾಜ್ಯದ ವಿವಿಧ ಜಲಾಶಯಗಳ ಹಿನ್ನೀರಿನ ಹೂಳು ಅಧ್ಯಯನದ ವರದಿ ಸರ್ಕಾರಕ್ಕೆ ಸಲ್ಲಿಸಿದ್ದು, ಅದರಲ್ಲಿ ಈ ಅಂಶ ಬಹಿರಂಗವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಅಧ್ಯಯನದ ಸಂಪೂರ್ಣ ವರದಿಯನ್ನು ಆಯಾ ಜಲಾಶಯದ ಮುಖ್ಯ ಎಂಜಿನಿಯರ್‌ಗಳಿಗೂ ಸಲ್ಲಿಸಲಾಗಿದೆ. ಆಲಮಟ್ಟಿ ಜಲಾಶಯದಲ್ಲಿ ಶೆ.6.1ನೀರಿನ ಕುಸಿತವಾಗಿದೆ.

ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಹಿಪ್ಪರಗಿ ಜಲಾಶಯದವರೆಗೆ 487 ಚದರ ಕಿ.ಮೀವರೆಗೆ ಮೂರು ತಿಂಗಳ ಅಧ್ಯಯನ ನಡೆಸಲಾಗಿತ್ತು ಎಂದು ಕೆಇಆರ್‌ಎಸ್ ನಿರ್ದೇಶಕ ಕೆ ಜಿ ಮಹೇಶ ತಿಳಿಸಿದರು.

“ಬೋಟ್‌ನಲ್ಲಿ ಅಳವಡಿಸಲಾಗಿರುವ ಎಕೋ ಸೌಂಡ್ ಸಿಸ್ಟಂ ಮೂಲಕ ಹೊರಬರುವ ಧ್ವನಿ ತರಂಗಗಳನ್ನು ನೀರಿನ ಆಳದೊಳಗೆ ಬಿಟ್ಟು, ಅದರಿಂದ ಬರುವ ಪ್ರತಿಧ್ವನಿಯ ಆಧಾರದ ಮೇಲೆ ಉಪಕಾರಣದಲ್ಲಿ ಅಳವಡಿಸಿರುವ ನೂತನ ಸಾಫ್ಟ್‌ವೇರ್ ಮೂಲಕ ಎಷ್ಟು ಪ್ರಮಾಣದಲ್ಲಿ ನೀರಿದೆ, ಎಷ್ಟು ಪ್ರಮಾಣದಲ್ಲಿ ಹೂಳಿನ ಅಂಶವಿದೆ ಎಂಬುದನ್ನು ಅಧ್ಯಯನ ನಡೆಸಲಾಗಿತ್ತು. ಅಧ್ಯಯನ ಅಂಕಿ ಅಂಶಗಳ ಸಂಪೂರ್ಣ ವೈಜ್ಞಾನಿಕವಾಗಿ ವಿಶ್ಲೇಷಣೆಗೊಳಿಸಿ, ಅಂತಿಮ ವರದಿ ಸರ್ಕಾರಕ್ಕೆ ಸಲ್ಲಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಆಲಮೇಲ | ಭೀಮಾನದಿ ತೀರದಲ್ಲಿ ಪ್ರವಾಹ ಹೆಚ್ಚಳ; ಮೂರು ಗ್ರಾಮಗಳಲ್ಲಿ ಕಾಳಜಿ ಕೇಂದ್ರ ಆರಂಭ

ಆಲಮಟ್ಟಿ ಜಲಾಶಯದಲ್ಲಿ ನೀರಿನ ಸಂಗ್ರಹಣೆ ಆರಂಭಗೊಂಡ 22ವರ್ಷಗಳಲ್ಲಿ ಅಂದರೆ 2023ವರೆಗೆ ಜಲಾಶಯದಲ್ಲಿ 7.556 ಟಿಎಂಸಿ ಅಡಿ ಹೂಳಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

“ಜಲಾಶಯದ ಗರಿಷ್ಠ ಸಂಗ್ರಹ ಸಾಮರ್ಥ್ಯ 123.081 ಟಿಎಂಸಿ ಅಡಿ, ಹೂಳಿನ ಕಾರಣ ಜಲಾಶಯದ ಸಂಗ್ರಹ ಸಾಮರ್ಥ್ಯ 115.552 ಟಿಎಂಸಿ ಅಡಿಗೆ ಕುಸಿತಗೊಂಡಿದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

“ಹೂಳಿನಿಂದ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 115.552 ಟಿಎಂಸಿ ಅಡಿಗೆ ಕುಸಿದರೊ ನೀರಾವರಿ ಸೇರಿದಂತೆ ಮತ್ತಿತರರ ಬಳಕೆಗೆ ಯಾವುದೇ ನೀರಿನ ಕೊರೆತೆ ಉಂಟಾಗುವುದಿಲ್ಲ” ಎಂದು ಕೆಬಿಜೆಎನ್‌ಎಲ್ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...