ಪಕ್ಷಾತೀತವಾಗಿ 73ನೇ ರಾಷ್ಟ್ರೀಯ ಪುರುಷರ ಕಬಡ್ಡಿ ಚಾಂಪಿಯನ್‌ಶಿಪ್ ಯಶಸ್ವಿಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ ಕರೆ

Date:

“ನಾನು ಕ್ರೀಡಾಭಿಮಾನಿಯೇ ಹೊರತು ಕ್ರೀಡಾಪಟುವಲ್ಲ. ಆದರೆ, ನಮ್ಮ ಜಿಲ್ಲೆಯ ಕೀರ್ತಿಗಾಗಿ ಸಹಕಾರ ನೀಡಲು ನಾನು ಸದಾ ಸಿದ್ಧನಿದ್ದೇನೆ. ಮಂಡ್ಯ ಜಿಲ್ಲೆಯಲ್ಲಿ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಬೇಕು ಅದಕ್ಕಾಗಿ ನಾವೆಲ್ಲರೂ ಶ್ರಮಿಸೋಣ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

- Advertisement -

ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗುತ್ತಿರುವ 73ನೇ ರಾಷ್ಟ್ರೀಯ ಪುರುಷರ ಕಬಡ್ಡಿ ಚಾಂಪಿಯನ್‌ಶಿಪ್ (ಸಿಆರ್‌ಎಸ್ ಕಪ್-2027) ಪಂದ್ಯಾವಳಿಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ, ಬೆದರಿಕೆ, ವಂಚನೆ ಅಥವಾ ಆಮಿಷದ ಮೂಲಕ ಧಾರ್ಮಿಕ ನಂಬಿಕೆಯನ್ನು ಬದಲಾಯಿಸುವುದು ಕಾನೂನು ಮತ್ತು ನೈತಿಕತೆಯ ದೃಷ್ಟಿಯಿಂದ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ....

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಷ್ಟ್ರ ಮಟ್ಟದ ಪಂದ್ಯಾವಳಿಯು ಇಡೀ ಜಿಲ್ಲೆಯ ಕ್ರೀಡಾಪಟುಗಳಿಗೆ ಸಿಗುತ್ತಿರುವ ದೊಡ್ಡ ಗೌರವವಾಗಿದೆ. ಪಂದ್ಯಾವಳಿಯ ಯಶಸ್ಸು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಯಾವುದೇ ಗೊಂದಲಗಳಿಗೆ ಅವಕಾಶ ನೀಡದೆ, ಪಕ್ಷಾತೀತವಾಗಿ ಕೆಲಸ ಮಾಡಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದು ಅಭಿಪ್ರಾಯಪಟ್ಟರು.

ಹಿರಿಯರ ಮಾರ್ಗದರ್ಶನ ಅಗತ್ಯ

ಕ್ರೀಡಾಕೂಟದ ಆಯೋಜನೆಗೆ ಈಗಾಗಲೇ ವಿವಿಧ ಕಮಿಟಿಗಳನ್ನು ರಚಿಸಲಾಗಿದೆ. ಎಲ್ಲರೂ ಹಿರಿಯರ ಮಾರ್ಗದರ್ಶನ ಪಡೆದು, ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸರ್ಕಾರದ ಕಡೆಯಿಂದ ಹಾಗೂ ವೈಯಕ್ತಿಕವಾಗಿ ನನ್ನ ಸಂಪೂರ್ಣ ಸಹಕಾರ ಈ ಕೂಟಕ್ಕಿರಲಿದೆ ಎಂದು ಭರವಸೆ ನೀಡಿದರು.

ಪಂದ್ಯಾವಳಿಯ ವಿವರ
ಈ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್‌ಶಿಪ್ ಪಂದ್ಯಾವಳಿಯು ಮಂಡ್ಯ ನಗರದ ಸರ್. ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮುಂಬರುವ ಜನವರಿ 7 ರಿಂದ 10 ರವರೆಗೆ ಅದ್ದೂರಿಯಾಗಿ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

ಶಿವಮೊಗ್ಗ | 113 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: 59 ಕ್ಷೇತ್ರಗಳು ಮಹಿಳೆಯರಿಗೆ

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

ರಾಯಚೂರು | ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಇಲ್ಲಿಯ ಅಶೋಕ ನಗರ ಪ್ರದೇಶದಲ್ಲಿ ಸಿಎಚ್ ಪೌಡರ್‌ ಮಿಶ್ರಿತ ಸೇಂದಿ ಮಾರಾಟ...

ಲಂಡನ್ ವಿಮಾನ ಏರದಂತೆ ಸಿಜೆಪಿ ನಾಯಕ ಸೌರವ್ ದಾಸ್ ತಡೆದ ವಲಸೆ ಅಧಿಕಾರಿಗಳು!

ಬ್ರಿಟನ್‌ನ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಉಪನ್ಯಾಸ ನೀಡಲು ತೆರಳುತ್ತಿದ್ದ 'ಕಾಕ್ರೋಚ್ ಜನತಾ ಪಾರ್ಟಿ'...