ತಿಪಟೂರಿನಲ್ಲಿ ಸೆ.2 ಕ್ಕೆ ಪತ್ರಕರ್ತರ 78ನೇ ರಾಷ್ಟ್ರೀಯ ಮಂಡಳಿ ಸಮಾವೇಶ : ತೆಂಗು ಉತ್ಪನ್ನಗಳ ಪ್ರದರ್ಶನ

Date:

Advertisements

ಕಲಾಕೃತಿ ಸಂಸ್ಥೆ ಅದರ ಪ್ರಧಾನ ಪ್ರಾಯೋಜಕತ್ವದಲ್ಲಿ ಸೆ.2 ಸೋಮವಾರ ತಿಪಟೂರಿನ ಎಸ್.ಎನ್.ಎಸ್. ಕನ್ವೆನ್ಷನ್ ಹಾಲ್‌ನಲ್ಲಿ ನವದೆಹಲಿಯ ಭಾರತೀಯ ಕಾರ್ಯನಿರತ ಪತ್ರಕರ್ತರ 78ನೇ ರಾಷ್ಟ್ರೀಯ ಮಂಡಳಿ ಸಮಾವೇಶ, ವಿಚಾರ ಸಂಕಿರಣ ಹಾಗೂ ತೆಂಗು ಉತ್ಪನ್ನಗಳ ಪ್ರದರ್ಶನ ಮತ್ತು ಗೋಷ್ಠಿ ಏರ್ಪಡಿಸಲಾಗಿದೆ ಎಂದು ಕಲಾಕೃತಿ ಸಂಸ್ಥೆಯ ಅಧ್ಯಕ್ಷ ಡಾ.ಶ್ರೀಧರ್ ತಿಳಿಸಿದರು.

ತಿಪಟೂರು ನಗರದ ಕೌಸ್ತುಭ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯನಿರತ ಪತ್ರಕರ್ತರ ಒಂದು ದಿನದ ವಿಚಾರ ಸಂಕಿರಣ, ಭಾರತ ಸ್ವಾತಂತ್ರೋತ್ಸವದ 75ನೇ ವರ್ಷದ ನೆನಪಿನಲ್ಲಿ ಬೃಹತ್ ಅಂಚೆಚೀಟಿ, ಲಕೋಟೆ ಮತ್ತು ಭಾರತದ ಸ್ವಾತಂತ್ರ್ಯ ನಂತರದ ಅಮೂಲ್ಯ ನಾಣ್ಯಗಳ ಪ್ರದರ್ಶನ ಹಾಗೂ ವಿಶ್ವ ತೆಂಗು ದಿನದ ಅಂಗವಾಗಿ ತೆಂಗು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಪತ್ರಕರ್ತರ ಒಂದು ರಾಷ್ಟ್ರೀಯ ಸಮ್ಮೇಳನ ತಿಪಟೂರಿನಲ್ಲಿ ನಡೆಯುತ್ತಿರುವುದು ಒಂದು ಸುದೈವ. ವಸ್ತು ಪ್ರದರ್ಶನದಲ್ಲಿ ತೆಂಗಿನಕಾಯಿ, ಒಣಕೊಬ್ಬರಿ, ತೆಂಗಿನ ಸಂಸ್ಕರಿಸಿದ ಒಣಪುಡಿ, ತೆಂಗಿನ ಗಾಣದ ಎಣ್ಣೆ, ನೀರಾ, ಕೊಬ್ಬರಿ ಮಿಠಾಯಿ ಸ್ಭೆರಿದಂತೆ ತೆಂಗಿನಿಂದ ಉತ್ಪಾದಿಸಬಹುದಾದ ನಾನಾ ಉತ್ಪನ್ನಗಳ ಪ್ರದರ್ಶನ, ತೆಂಗಿನ ಸಸಿಗಳು, ಅಡಿಕೆ ಸಸಿಗಳು ಹಾಗೂ ಇತರೆ ಸಾವಯವ ವಸ್ತುಗಳ ಪ್ರದರ್ಶನ ಇರುತ್ತದೆ ಎಂದರು.

ಬೆಳಿಗ್ಗೆ 10ಗಂಟೆಗೆ ಗೃಹ ಸಚಿವ ಜಿ.ಪರಮೇಶ್ವರ್ ಪತ್ರಕರ್ತರ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಲಿದ್ದು, ಶಾಸಕ ಕೆ.ಷಡಕ್ಷರಿ ವಸ್ತುಪ್ರದರ್ಶನ ಮತ್ತು ಅಂಚೆಚೀಟಿ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕಲ್ಪಶ್ರೀ ಸ್ಪರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.

Advertisements

ಮಧ್ಯಾಹ್ನ 12 ಗಂಟೆಗೆ ಪತ್ರಕರ್ತರ ರಾಷ್ಟ್ರೀಯ ಮಂಡಳಿ ಸಮಾವೇಶ ನಂತರ ಮಧ್ಯಾಹ್ನ 2.30ಕ್ಕೆ ಪತ್ರಿಕೆಗಳ ಮೇಲೆ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಪರಿಣಾಮ ವಿಷಯದ ಬಗ್ಗೆ ಗೋಷ್ಠಿ ನಂತರ 3.30ಕ್ಕೆ ‘ತಿಪಟೂರು ಉಂಡೆ ಕೊಬ್ಬರಿ ಮಾರುಕಟ್ಟೆ ಸಮಸ್ಯೆ ಮತ್ತು ಪರಿಹಾರ ಮಾರ್ಗಗಳು’ ಎಂಬ ವಿಷಯದ ಬಗ್ಗೆ ಗೋಷ್ಠಿ ಏರ್ಪಡಿಸಲಾಗಿದ್ದು ದೇಶದಾದ್ಯಂತ ಎಲ್ಲ ರಾಜ್ಯಗಳಿಂದ ಪತ್ರಕರ್ತರು ಮತ್ತು ರೈತ ಮುಖಂಡರು, ಬೆಳೆಗಾರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಲಾಕೃತಿ ಸಂಸ್ಥೆಯ ಜ್ಯೋತಿ ಗಣೇಶ್, ಎ.ಟಿ.ಪ್ರಸಾದ್, ಕೆ.ಎಂ.ರಾಜಣ್ಣ, ಕಸಾಪ ಅಧ್ಯಕ್ಷ ಬಸವರಾಜಪ್ಪ, ಹಾಜರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X