ಯಾದಗಿರಿ | ಬೆಂಕಿ ಅವಘಡ; ನಾಲ್ಕು ಅಂಗಡಿಗಳು ಭಸ್ಮ

Date:

ಪ್ಲೈವುಡ್ ವರ್ಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿ ಸುಮಾರು ನಾಲ್ಕು ಅಂಗಡಿಗಳು ಬೆಂಕಿಗಾಹುತಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ನಡೆದಿದೆ.

- Advertisement -

ನಗರದ ಗ್ಯಾರೇಜ್ ಲೈನ್‌ನ ಪ್ಲೈವುಡ್ ವರ್ಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಕಿ ನಂದಿಸಲು ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಸಿಬಂದಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿ ಅಗ್ನಿಯನ್ನು ನಿಯಂತ್ರಿಸುವಷ್ಟರಲ್ಲಿ ನಾಲ್ಕು ಅಂಗಡಿಗಳ ಅಪಾರ ಸಾಮಗ್ರಿಗಳು ಸುಟ್ಟು ಭಸ್ಮವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಪ್ಲೈವುಡ್ ಅಂಗಡಿಯ ಸಹಿತ ಪೂರ್ಣಿಮಾ ಹೊಟೇಲ್, ಬೈಕ್ ದುರಸ್ತಿ ಗ್ಯಾರೇಜ್ ಮತ್ತು ರೇಡಿಯಂ ವರ್ಕ್ಸ್ ಅಂಗಡಿಗಳಿಗೆ ಬೆಂಕಿ ತಾಗಿದ್ದು, ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ.

ಪೊಲೀಸ್ ಸಿಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿ ಶಾಮಕ ದಳದವರಿಗೆ ಅನುವು ಮಾಡಿಕೊಟ್ಟರು. ಬೆಂಕಿಯ ಕೆನ್ನಾಲಿಗೆಯನ್ನು ಕಂಡ ನಗರದ ಜನತೆ ಗಾಬರಿಯೊಳಗಾಗಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಕಳೆದ ವರ್ಷವೂ ಇವೇ ಅಂಗಡಿಗಳಿಗೆ ಬೆಂಕಿ ತಾಗಿತ್ತು ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಗದಗ | ಮನರೇಗಾ ಯೋಜನೆ ಅನುಷ್ಠಾನ; ಗದಗ ಜಿಲ್ಲಾ ಪಂಚಾಯತಿಗೆ ಎರಡನೇ ಸ್ಥಾನ

“ಗ್ಯಾರೇಜ್‌ನಲ್ಲಿ ಒಂದು ಬುಲೆಟ್ ಹಾಗೂ ನಾಲ್ಕು ಇತರೆ ಬೈಕ್‌ಗಳು ಸುಟ್ಟು ಕರಕಲಾಗಿವೆ. ಹಾಗೆಯೇ ಇತರೆ ಅಂಗಡಿಗಳಲ್ಲಿರುವ ಸಾಮಾಗ್ರಿಗಳು ಸುಟ್ಟು ಅಪಾರ ನಷ್ಟವಾಗಿದೆ” ಎಂದು ಅಂಗಡಿ ಮಾಲೀಕರು ಅಲವತ್ತುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ...

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...