ಚಾಮರಾಜನಗರ | ತಾಲ್ಲೂಕು ಆಡಳಿತದಿಂದ 79ನೇ ಸ್ವಾತಂತ್ರ್ಯೋತ್ಸವ

Date:

Advertisements

ಚಾಮರಾಜನಗರ ಜಿಲ್ಲೆ, ಹನೂರು ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರಿಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಹಶೀಲ್ದಾರ್ ಕೆ ಎನ್ ಚೈತ್ರ ಧ್ವಜಾರೋಹಣ ನೆರವೇರಿಸಿದರು.

ಶಾಸಕ ಎಂ ಆರ್ ಮಂಜುನಾಥ್ ಮಾತನಾಡಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಅದ್ದೂರಿಯಾಗಿ ಆಚರಣೆ ಮಾಡಿರುವದು ಬಹಳ ಸಂತೋಷವಾಗಿದೆ, ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹನೀಯರ ನೆನಪು ಮಾಡಿಕೊಳ್ಳುವ ದಿನವಾಗಿದೆ, ಅವರ ತ್ಯಾಗ, ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಹೋರಾಟಕ್ಕಾಗಿ ತಮ್ಮ ಬದುಕನ್ನು ಮುಡಿಪಾಗಿಟ್ಟರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತಿನಂತೆ ಶಿಕ್ಷಣವನ್ನು ತಮ್ಮ ಲಾಭಕ್ಕೆ ಬಳಸಿ ಕೊಳ್ಳದೆ, ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಿ. ದೇಶದ ಜನರ ಬದುಕಿಗೆ ಸರ್ಕಾರ ಮುಂದಾಗ ಬೇಕಾಗಿದೆ. ಯುವಕರು ದೇಶದ ಸಂಪತ್ತು, ಈ ನಿಟ್ಟಿನಲ್ಲಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದೆ ಎಂದರು.

ಹನೂರು ಗುಡ್ಡ ಗಾಡು ಪ್ರದೇಶವಾಗಿದೆ. ಸಾಕಷ್ಟು ಬೌಗೊಳಿಕವಾಗಿ ದೊಡ್ಡ ಕ್ಷೇತ್ರ. ಆದ್ದರಿಂದ, ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆ ಹರಿಸಬೇಕಿದೆ. ಮಹನೀಯರ ತತ್ವ, ಆದರ್ಶಗಳನ್ನು ಮೈಗೂಡಿಸಿ ಕೊಳ್ಳಬೇಕಾಗಿದೆ. ಕ್ಷೇತ್ರದ ಜನರು ನನಗೆ ಶಾಸಕನಾಗಲು ಅವಕಾಶ ನೀಡಿದ್ದೀರಿ ಅದರಂತೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮ ವಹಿಸುತ್ತೇನೆ ಎಂದರು.

Advertisements

ಹನೂರು ತಾಲೂಕಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಅಂಜಲಿ ವಿ. ಎಲ್ಲೆಮಾಳ, ಚೆನ್ನಾಲಿಂಗನಹಳ್ಳಿ ಪ್ರಿಯ ದರ್ಶಿನಿ. ಸುಸೈನ ಮಾರಹಳ್ಳಿ ಮೂರು ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಿದರು. 13 ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವೀಲ್ ಚೇರ್ ವಿತರಣೆ ಮಾಡಲಾಯಿತು ಜೊತೆಗೆ ಸ್ವಚ್ಛತಾ ಕಾರ್ಮಿಕ ಮಹಿಳೆ ರಾಮಿ ಅವರಿಗೆ ಸನ್ಮಾನ ಮಾಡಲಾಯಿತು. ಅಗ್ನಿ ಶಾಮಕ ಸಿಬ್ಬಂದಿಯ ಅತುತ್ಯಮ ಸೇವೆ ಗುರುತಿಸಿ ಪೆರಿಯಾ ನಾಯಗಮ್ ರವರನ್ನು ಸನ್ಮಾನ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಸಂಭ್ರಮದ ಜನಸ್ವಾತಂತ್ರ್ಯೋತ್ಸವ; ಸಂವಿಧಾನ ಸಂರಕ್ಷಣಾ ಪಡೆಗೆ ಚಾಲನೆ

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕೆ. ಎನ್ ಚೈತ್ರ, ಪ.ಪಂ ಅಧ್ಯಕ್ಷೆ ಮುಮ್ತಾಜ್ ಬಾನು, ಉಪಾಧ್ಯಕ್ಷ ಆನಂದ್ ಕುಮಾರ್, ತಾ. ಗ್ಯಾರಂಟಿ ಯೋಜನೆಯ ಅಧ್ಯಕ್ಷ ರಾಚಪ್ಪ, ಪ.ಪಂ ಸದಸ್ಯೆ ಪವಿತ್ರ ಪ್ರಸನ್ನ, ಇ ಓ ಉಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಎ ಇ ಇ ರಂಗಸ್ವಾಮಿ, ಪೊಲೀಸ್ ಇನ್ಸ್ಪೆಕ್ಟರ್ ಆನಂದ್ ಮೂರ್ತಿ, ಅರೋಗ್ಯ ಇಲಾಕಾಧಿಕಾರಿ ಡಾ. ಪ್ರಕಾಶ್, ಪ.ಪಂ ಸದಸ್ಯರಾದ ಮಂಜುಳಾ, ರೂಪ, ಮಹೇಶ್, ಸಂಪತ್ ಕುಮಾರ್, ಆರ್ ಐ ಶೇಷಣ್ಣ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X