ಬಳ್ಳಾರಿ | 8 ಇಂದಿರಾ ಕ್ಯಾಂಟೀನ್‌ಗಳು ಬಂದ್‌

Date:

ಇಂದಿರಾ ಕ್ಯಾಂಟೀನ್ ನಡೆಸುತ್ತಿರುವ ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿ ಮಾಡಿಲ್ಲವೆಂಬ ಕಾರಣಕ್ಕೆ ಬಳ್ಳಾರಿ ಜಿಲ್ಲೆಯ 8 ಇಂದಿರಾ ಕ್ಯಾಟೀನ್‌ಗಳು ಸ್ಥಗಿತಗೊಂಡಿವೆ. ಈ ಎಲ್ಲ ಇಂದಿರಾ ಕ್ಯಾಟೀನ್‌ಗಳ ಸುಮಾರು 3.38 ಕೋಟಿ ರೂ. ಬಿಲ್‌ ಬಾಕಿ ಉಳಿದಿದೆ ಎಂದು ಹೇಳಲಾಗಿದೆ.

- Advertisement -

ಬಳ್ಳಾರಿ ಜಿಲ್ಲಾಸ್ಪತ್ರೆ, ವಿಮ್ಸ್, ಮೋತಿ ವೃತ್ತ, ಎಪಿಎಂಸಿ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳು ಹಾಗೂ ಸಿರಗುಪ್ಪ, ಕೂಡ್ಲಿಗಿ, ಸಂಡೂರಿನಲ್ಲಿದ್ದ ತಲಾ ಒಂದು ಇಂದಿರಾ ಕ್ಯಾಂಟೀನ್‌ಗಳು ಜನವರಿ 20ರಿಂದ ಮುಚ್ಚಿವೆ. ಇವುಗಳಿಗೆ 2021ರಿಂದಲೂ ಬಿಲ್ ಪಾವತಿ ಮಾಡಿಲ್ಲವೆಂದು ಕ್ಯಾಂಟೀನ್ ನಡೆಸುತ್ತಿರುವ ಏಜೆನ್ಸಿಗಳು ಆರೋಪಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಿಲ್ ಪಾವತಿಯಾಗದ ಕಾರಣ, ತರಕಾರಿ, ಆಹಾರ ಧಾನ್ಯಗಳು, ಅಡುಗ ಅನಿಲ, ಸಿಬ್ಬಂದಿಗಳ ಸಂಬಳಕ್ಕೆ ಹಣ ಇಲ್ಲದಂತಾಗಿದೆ ಎಂದು ಏಜೆನ್ಸಿಗಳು ಹೇಳಿವೆ. ಇಂದಿರಾ ಕ್ಯಾಂಟಿನ್‌ಗಳು ಮುಚ್ಚಿರುವ ಕಾರಣ, ಕಡಿಮೆ ದರದಲ್ಲಿ ಹಸಿವು ನೀಗಿಸಿಕೊಳ್ಳುತ್ತಿದ್ದ ಬಡವರು, ಕಾರ್ಮಿಕರು ಆಹಾರಕ್ಕಾಗಿ ಹೋಟೆಲ್‌ಗಳಿಗೆ ದುಪ್ಪಟ್ಟು ಹಣ ಕೊಡುವ ಪರಿಸ್ಥಿತಿ ಎದುರಾಗಿದೆ.

ಸ್ಥಗಿತಗೊಂಡಿರುವ ಇಂದಿರಾ ಕ್ಯಾಂಟೀನ್‌ಗಳನ್ನು ಕುಡುಕರು, ಜೂಜು ಕೋರರು ತಮ್ಮ ಅಡ್ಡೆ ಮಾಡಿಕೊಂಡಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...