ಆಳಂದ | ಕಲುಷಿತ ನೀರು ಸೇವಿಸಿ 80 ಜನ ಅಸ್ವಸ್ಥ ಪ್ರಕರಣ; ಪಿಡಿಒ ಅಮಾನತು

Date:

ಕಲುಷಿತ ನೀರು ಸೇವಿಸಿ 80ಕ್ಕೂ ಅಧಿಕ ಜನ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮ ಪಂಚಾಯಿತಿ ಪಿಡಿಒ ಸುಕನ್ಯಾ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

- Advertisement -

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯಿಂದ ಪೂರೈಕೆಯಾದ ಕಲುಷಿತ ನೀರು ಸೇವಿಸಿ ಸೋಮವಾರ 80ಕ್ಕೂ ಅಧಿಕ ಜನ ವಾಂತಿ-ಭೇದಿಯಿಂದ ಬಳಲಿ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ನಿಂಬರ್ಗಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗ್ರಾಮಸ್ಥರನ್ನು ಮಂಗಳವಾರ ಮುಖ್ಯಮಂತ್ರಿ ಸಲಹೆಗಾರ, ಆಳಂದ ಶಾಸಕ ಬಿ.ಆರ್.ಪಾಟೀಲ್‌, ತಹಸೀಲ್ದಾರ್‌ ಅಣ್ಣಾರಾವ್‌ ಪಾಟೀಲ್‌, ತಾಲೂಕು ವೈದ್ಯಾಧಿಕಾರಿ ಡಾ.ಸುಶೀಲಕುಮಾರ್‌ ಅಂಬೂರೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ʼಗ್ರಾಮದಲ್ಲಿ ಇಂತಹ ಅವಘಡ ಸಂಭವಿಸಲು ಗ್ರಾಪಂ ಪಂಚಾಯಿತಿ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳೇ ಕಾರಣ. ಟ್ಯಾಂಕ್ ಸ್ವಚ್ಛಗೊಳಿಸುವಂತೆ ಅನೇಕ ಬಾರಿ ಹೇಳಿದರೂ ಯಾರು ಕೂಡ ಗಮನಹರಿಸದ ಕಾರಣಕ್ಕೆ ದುರ್ಘಟನೆ ಸಂಭವಿಸಿದೆʼ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ಗಾಂಧೀ ಪರಿಕಲ್ಪನೆಗಳು

ಶಾಸಕರ ಸೂಚನೆ ಮೇರೆಗೆ ನಿಂಬರ್ಗಾ ಪಿಡಿಒ ಸುಕನ್ಯಾ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆ ಜಾಗಕ್ಕೆ ಸುಂಟನೂರ ಗ್ರಾಪಂ‌ ಪಿಡಿಒ ಪ್ರವೀಣ ಅವರನ್ನು ನಿಯೋಜಿಸಲಾಗಿದೆ ಎಂದು ಆಳಂದ ತಾ.ಪಂ. ಇಓ ಮಾಣಪ್ಪ ಕಟ್ಟಿಮನಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...