ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ: ಫೋಟೋ ಆಲ್ಬಮ್

Date:

Advertisements

ಮಂಡ್ಯದಲ್ಲಿ ಡಿಸೆಂಬರ್‌ 20ರಿಂದ ಆರಂಭಗೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಇಂದು(ಡಿ.22) ಸಮಾರೋಪಗೊಂಡಿದೆ. ಸಕ್ಕರೆ ನಾಡು ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜನಸಾಗರವೇ ಹರಿದು ಬಂದಿದೆ. ರಾಜ್ಯದ ಮೂಲೆ ಮೂಲೆಗಳಿಂದ ನೂರಾರು ಅತಿಥಿಗಳು, ಸಾವಿರಾರು ಕನ್ನಡಾಭಿಮಾನಿಗಳು ಬಂದಿದ್ದರು. ಇದು ನಮ್ಮ ಕನ್ನಡ ನಾಡು, ನುಡಿಯ ಬಗ್ಗೆ ಜನರಿಗಿರುವ ಪ್ರೀತಿ, ಅಭಿಮಾನಕ್ಕೆ ಸಾಕ್ಷಿಯಾಗಿದೆ.

ಪುಸ್ತಕ ಪ್ರದರ್ಶನ, ವಾಣಿಜ್ಯ ಮಳಿಗೆಗಳು ಜನರಿಂದ ತುಂಬಿ ತುಳುಕಿತ್ತು. ಊಟೋಪಚಾರವೂ ನಿರಂತರವಾಗಿ ನಡೆಯುತ್ತಿತ್ತು. ಇದಕ್ಕಾಗಿ ಸುಮಾರು 1000 ಸಾವಿರದಷ್ಟು ಜನರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಜೊತೆಗೆ, ಮಂಡ್ಯದ ಬಾಡೂಟವನ್ನು ಸಾಹಿತ್ಯ ಸಮ್ಮೇಳನದಲ್ಲಿ ನೀಡದಿದ್ದಕ್ಕೆ ಪ್ರತಿರೋಧವಾಗಿ ಜನಪರ ಸಂಘಟನೆಗಳ ಮುಖಂಡರು, ಚಿಕನ್ ಸಾರು, ಮೊಟ್ಟೆ, ರಾಗಿ ಮುದ್ದೆ ಇರುವ ಬಾಡೂಟವನ್ನು ಕೂಡ ಹಂಚುವ ಮೂಲಕ ಹೊಸ ಕ್ರಾಂತಿಗೆ ನಾಂದಿ ಹಾಡಿದರು. ಹೋರಾಟಕ್ಕೆ ಕೊನೆಗೂ ಮಣಿದ ಕಸಾಪ, ಸಮಾರೋಪ ಸಮಾರಂಭದ ಬಳಿಕ ಹಂಚಿದ ರಾತ್ರಿಯ ಊಟದೊಂದಿಗೆ ಸಾರ್ವಜನಿಕರಿಗೆ ಮೊಟ್ಟೆ ವಿತರಣೆ ಮಾಡಿತು.

20 2

ಪ್ರತಿದಿನ ಸಂಜೆ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮಂಡ್ಯ ಮಾತ್ರವಲ್ಲದೇ ಸುತ್ತಮುತ್ತಲಿನ ಜನರೆಲ್ಲರೂ ಪ್ರವಾಹದಂತೆ ಹರಿದುಬಂದಿದ್ದರು. ಬೀದಿ ವ್ಯಾಪಾರ, ತಿಂಡಿ-ತಿನಿಸು, ಜ್ಯೂಸ್‌ ಅಂಗಡಿಗಳು ಸಮ್ಮೇಳನದ ಮುಖ್ಯದ್ವಾರದಿಂದಲೇ ಬಂದವರನ್ನು ಸ್ವಾಗತಿಸುತ್ತಿತ್ತು.

Advertisements

ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮೂರು ವೇದಿಕೆಗಳ ಹೊರಭಾಗದ ವಿಶಾಲ ಅಂಗಣದಲ್ಲಿ ವಿವಿಧ ವಸ್ತುಗಳನ್ನು ಮಾರುವವರು ಮತ್ತು ಮಳಿಗೆಗಳಲ್ಲಿ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡುತ್ತಿರುವವರ ದಂಡೇ ನೆರೆದಿತ್ತು.

ವೇದಿಕೆಯ ಹಿಂಭಾಗದಲ್ಲಿ ಮಾಡಲಾಗಿದ್ದ ‘ಮಾಧ್ಯಮ ಕೇಂದ್ರ’ದಲ್ಲಿ ಪತ್ರಿಕೆ, ವಿದ್ಯುನ್ಮಾನ, ಡಿಜಿಟಲ್ ಮೀಡಿಯಾ, ಫೋಟೋಗ್ರಾಫರ್ಸ್‌ ಸೇರಿದಂತೆ ಎಲ್ಲ ಪತ್ರಕರ್ತರು ತಮ್ಮ ತಮ್ಮ ಕೆಲಸಗಳಲ್ಲಿ ‘ಬ್ಯುಝಿ’ಯಾಗಿದ್ದರು.

WhatsApp Image 2024 12 22 at 7.14.30 PM 1

ಈ ಸಮ್ಮೇಳನದ ಸರ್ವಾಧ್ಯಕ್ಷ್ಯತೆಯನ್ನು ಹಿರಿಯ ಸಾಹಿತಿ ಗೊಂಡೇದಹಳ್ಳಿ ರುದ್ರಪ್ಪ ಚನ್ನಬಸಪ್ಪ(ಗೊರುಚ) ವಹಿಸಿದ್ದರು. ಮುಂದಿನ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಗಣಿ ನಾಡು ಬಳ್ಳಾರಿಯಲ್ಲಿ ನಡೆಯಲಿದೆ ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸಮಾರೋಪ ಸಮಾರಂಭದಲ್ಲಿ ಘೋಷಿಸಿದರು.

ಪುಸ್ತಕ ಮಳಿಗೆಗಳ ಪೈಕಿ ಈ ದಿನ ಡಾಟ್ ಕಾಮ್ ಕೂಡ ಬ್ಲಾಕ್ ‘ಸಿ’ಯಲ್ಲಿನ ಮಳಿಗೆಯ 166ನೇ ಸ್ಟಾಲ್‌ನಲ್ಲಿ ತನ್ನ ಸ್ಟಾಲ್ ತೆರೆದು, ಹೊಸ ಓದುಗರಿಗೆ ನಮ್ಮ ಸಂಸ್ಥೆಯನ್ನು ಪರಿಚಯಿಸಿತ್ತು.

ಈ ಮೂರು ದಿನಗಳ ಎಲ್ಲ ಫೋಟೋಗಳ ಸಂಗ್ರಹ ಈ ಆಲ್ಬಮ್‌ನಲ್ಲಿದೆ. ಬಲಬದಿಯಲ್ಲಿನ ಬಾಣದ ಗುರುತನ್ನು ಕ್ಲಿಕ್ ಮಾಡಿ, ಎಲ್ಲ ಫೋಟೋಗಳನ್ನು ವೀಕ್ಷಿಸಬಹುದು.

(ಫೋಟೋ ಕೃಪೆ: ಕಸಾಪ, ಮಂಡ್ಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರ ಹಾಗೂ ಮಾಧ್ಯಮ ಸಮಿತಿ , ಕೆಲವು ಫೇಸ್‌ಬುಕ್ ಸ್ನೇಹಿತರು, ಬಾಡೂಟ ಬಳಗ, ಜಾಗೃತ ಕರ್ನಾಟಕ & ಈ ದಿನ ಡಾಟ್ ಕಾಮ್ ಬಳಗ)

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

Download Eedina App Android / iOS

X