ಕೊಪ್ಪಳ | ಎರಡೇ ಬಲ್ಬ್ ಇರುವ ತಗಡಿನ ಮನೆಗೆ 1 ಲಕ್ಷ ರೂ. ವಿದ್ಯುತ್‌ ಬಿಲ್; ವೃದ್ಧೆ ಕಣ್ಣೀರು

Date:

ರಾಜ್ಯ ಸರ್ಕಾರ ಗೃಹಜ್ಯೋತಿ ಯೋಜನೆ ಅಡಿ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿದೆ. ಮತ್ತೊಂದೆಡೆ ದುಪ್ಪಟ್ಟು ವಿದ್ಯುತ್ ದರ ಏರಿಕೆ ನೋಡಿ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೇ ಹೊತ್ತಿನಲ್ಲಿ, ಕೊಪ್ಪಳದ ವೃದ್ಧೆಯೊಬ್ಬರಿಗೆ 1 ಲಕ್ಷ ರೂಪಾಯಿ ವಿದ್ಯುತ್‌ ಬಿಲ್ ಬಂದಿದ್ದು, ವೃದ್ಧೆ ತಬ್ಬಿಬ್ಬಾಗಿದ್ದಾರೆ.

- Advertisement -

ಕೊಪ್ಪಳದ ಭಾಗ್ಯ ನಗರದಲ್ಲಿ ಗಿರಿಜಮ್ಮ ಎಂಬುವವರಿಗೆ ಜೆಸ್ಕಾಂನಿಂದ ಒಂದು ಲಕ್ಷ ರೂಪಾಯಿ ಕರೆಂಟ್ ಬಿಲ್ ಬಂದಿದೆ. ಪ್ರತಿ ತಿಂಗಳು 70 ರಿಂದ 80 ರೂ. ಬರ್ತಿದ್ದ ಬಿಲ್ ಈಗ ದಿಢೀರನೆ 1 ಲಕ್ಷ ಬಂದಿದ್ದು, ವಿದ್ಯುತ್‌ ಬಿಲ್‌ ನೋಡಿ ಅಜ್ಜಿ ಮತ್ತು ಅವರ ಮಗ ಶಾಕ್ ಆಗಿದ್ದಾರೆ. ತುತ್ತು ಅನ್ನಕ್ಕೂ ಪರದಾಡುವ ನಮಗೆ ಇದೆಂತ ಶಿಕ್ಷೆ ಎಂದು ಅಜ್ಜಿ ಕಣ್ಣೀರಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

90 ವರ್ಷದ ಗಿರಿಜಮ್ಮ ಅವರು ಮಗನೊಂದಿಗೆ ವಾಸವಿದ್ದಾರೆ. ಮಗ ಕೂಲಿ ಕೆಲಸಕ್ಕೆ ಹೋಗುತ್ತಾನೆ. ಸಣ್ಣ ತಗಡಿನ ಶೆಡ್​ನಿಂದ ಮನೆ ಮಾಡಿಕೊಳ್ಳಲಾಗಿದ್ದು, ಎರಡೇ ಎರಡು ಬಲ್ಬ್‌ಗಳು ಇವೆ. ಆದರೆ, ಈ ಬಾರಿ ಜೆಸ್ಕಾಂ ಬರೋಬ್ಬರಿ 1,03,315 ರೂ. ಬಿಲ್ ನೀಡಿ ಶಾಕ್ ನೀಡಿದೆ. ಅಜ್ಜಿ ಮನೆಗೆ ಭಾಗ್ಯ ಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿತ್ತು.

ಹೊಸ ಮೀಟರ್ ಅಳವಡಿಸಿದ ಬಳಿಕ ಕರೆಂಟ್ ಬಿಲ್ ಲಕ್ಷಕ್ಕೆ ಏರಿದೆ. ಆರು ತಿಂಗಳ ಹಿಂದೆ ಜೆಸ್ಕಾಂ ಸಿಬ್ಬಂದಿ ವೃದ್ದೆಯ ಮನೆಗೆ ಮೀಟರ್ ಅಳವಡಿಸಿದ್ದರು. 6 ತಿಂಗಳಲ್ಲಿ ವಿದ್ಯುತ್ ಬಿಲ್ 1 ಲಕ್ಷ ದಾಟಿದೆ. ಒಂದೊತ್ತಿನ ಊಟಕ್ಕೆ ಪರದಾಡೋ ಅಜ್ಜಿಗೆ ಲಕ್ಷ ಬಿಲ್ ಬಂದಿರುವುದರಿಂದ ಅಜ್ಜಿ ಬಿಲ್ ಕಟ್ಟುವುದು ಹೇಗೆ ಎಂದು ಕಣ್ಣೀರು ಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಕ್ಕಿ ವಿತರಣೆಯಲ್ಲಿ ರಾಜಕೀಯ ಬೇಡ; ಕೇಂದ್ರ ಗೃಹ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ

ಅಜ್ಜಿ ಮನೆಗೆ ಜೆಸ್ಕಾಂ ಅಧಿಕಾರಿಗಳ ಭೇಟಿ; ಪರಿಶೀಲನೆ

ಕೊಪ್ಪಳದಲ್ಲಿ ವೃದ್ಧೆ ಮನೆಗೆ 1 ಲಕ್ಷ ರೂ. ವಿದ್ಯುತ್‌ ಬಿಲ್‌​ ಬಂದಿದ್ದು, ವೃದ್ಧೆ ಗಿರಿಜಮ್ಮ ನಿವಾಸಕ್ಕೆ ಜೆಸ್ಕಾಂ ಎಕ್ಸಿಕ್ಯೂಟಿವ್ ಎಂಜಿನಿಯರ್ ರಾಜೇಶ್​​ ಭೇಟಿ ಪರಿಶೀಲನೆ ನಡೆಸಿದರು.

“2021ರಿಂದ ಮೀಟರ್ ರೀಡಿಂಗ್ ತೊಂದರೆಯಿಂದ ಬಿಲ್ ಬಂದಿದೆ. ಅಜ್ಜಿ ಗಿರಿಜಮ್ಮ ವಿದ್ಯುತ್​​ ಬಿಲ್ ಪಾವತಿ ಮಾಡುವ ಅವಶ್ಯಕತೆ ಇಲ್ಲ. ನಮ್ಮ ಸಿಬ್ಬಂದಿ ಮತ್ತು ಬಿಲ್ ಕಲೆಕ್ಟರ್ ತಪ್ಪಿನಿಂದಾಗಿ ಹೀಗಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತೆ. ಇಂತಹ ಯಾವುದೇ ಪ್ರಕರಣಗಳಿದ್ದರೂ ನಮ್ಮ ಗಮನಕ್ಕೆ ತನ್ನಿ” ಎಂದು ರಾಜೇಶ್​​ ಸ್ಪಷ್ಟನೆ ನೀಡಿದ್ದಾರೆ.

ಕರೆಂಟ್​​​ ಬಿಲ್​ ಕಟ್ಟಬೇಕಿಲ್ಲ ಎಂದಿದ್ದಕ್ಕೆ ವೃದ್ಧೆ ಗಿರಿಜಮ್ಮ ಜೆಸ್ಕಾಂ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಅಜ್ಜಿ 1 ಲಕ್ಷ ರೂ. ವಿದ್ಯುತ್‌ ಬಿಲ್​ ಕಟ್ಟಬೇಕಿಲ್ಲ; ಇಂಧನ ಸಚಿವ ಕೆ ಜೆ ಜಾರ್ಜ್

ಈ ಕುರಿತು ಇಂಧನ ಸಚಿವ ಕೆ ಜೆ ಜಾರ್ಜ್ ಖಾಸಗಿ ಸುದ್ದಿವಾಹಿಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, “ರಾಜ್ಯದಲ್ಲಿ ವಿದ್ಯುತ್​ ದರ ಹೆಚ್ಚಳ ಆಗಿದ್ದಕ್ಕೆ ಕಾರಣ ನಾವಲ್ಲ. ಹಿಂದಿನ ಸರ್ಕಾರವಿದ್ದಾಗ ಕೆಇಆರ್‌ಸಿ ವಿದ್ಯುತ್​ ದರ ಏರಿಕೆ ಮಾಡಿದೆ. ಏಪ್ರಿಲ್, ಮೇ ತಿಂಗಳಿನ ಬಿಲ್​ ಸಂಗ್ರಹ ಮಾಡಲು ಹೇಳಿದ್ದಾರೆ. ಒಂದೇ ಬಾರಿ ಎರಡು ತಿಂಗಳ ವಿದ್ಯುತ್ ದರ​ ಏರಿಕೆಯ ಬಿಲ್​​ ಬಂದಿದೆ. ನಮ್ಮ ಸಾಫ್ಟ್​​ವೇರ್ ಹಳೆಯದು, ಹೊಸ ಸಾಫ್ಟ್​​ವೇರ್​​​ ಹಾಕಬೇಕು. ಕೆಲವೆಡೆ ಮೀಟರ್​ ಸಮಸ್ಯೆಯಿಂದ ವಿದ್ಯುತ್​ ದರ ಹೆಚ್ಚಳ ಆಗಿದೆ. ಕೊಪ್ಪಳದಲ್ಲೂ ಅಜ್ಜಿ ಮನೆಗೆ ಮೀಟರ್​ ಸಮಸ್ಯೆಯಿಂದ 1 ಲಕ್ಷ ರೂ. ಕರೆಂಟ್​ ಬಿಲ್​ ಬಂದಿದೆ. ಅಜ್ಜಿ‌ ಅಷ್ಟೊಂದು ಕರೆಂಟ್​​ ಬಿಲ್​​ ಕಟ್ಟಬೇಕಿಲ್ಲ” ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...

ಶಿವಮೊಗ್ಗ | KSRTC ಬಸ್‌ನ ಟಯರ್ ಸ್ಫೋಟ; ಅನಾಹುತ ತಪ್ಪಿಸಿದ ಚಾಲಕ

ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಬಳಿ KSRTC ಬಸ್‌ನ ಮುಂಭಾಗದ ಟಯರ್ ಬ್ಲಾಸ್ಟ್...

ಖಾಸಗಿ ಶಾಲೆಗಳಲ್ಲಿ ಕನ್ನಡವೇ ಕಾಣುತ್ತಿಲ್ಲ, ಸರ್ಕಾರಿ ಕಚೇರಿಗಳಲ್ಲೇ ಕನ್ನಡವಿಲ್ಲ! ಹೋರಾಟಗಾರರ ಆತಂಕ

ಪ್ರತಿ ವರ್ಷದಂತೆ ವರ್ಷವೂ ಕಲಾವಿದರನ್ನು ಕರೆಯಿಸಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದೆಂದು...

ಗದಗ | ಪಶ್ಚಿಮ ಪದವೀಧರರ ಚುನಾವಣೆ; ಜಿಲ್ಲೆಯಲ್ಲಿ ಶೇ 46.18ರಷ್ಟು ಮತದಾನ

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನದ ಪ್ರಕ್ರಿಯೇ ಬೆಳೆಗ್ಗೆ 8 ಗಂಟೆಯಿಂದ...