ತುಮಕೂರು | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 94.42 ಲಕ್ಷ ರೂ ವಶ

Date:

  • ಜಿಲ್ಲಾ ಪಂಚಾಯಿತಿ ಸಿಇಒ ಕೆ ವಿದ್ಯಾಕುಮಾರಿ ಮಾಹಿತಿ
  • ಮಧುಗಿರಿ – ಕೊರಟಗೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ತಪಾಸಣೆ

ಚುನಾವಣೆ ನೀತಿ ಸಂಹಿತೆ ಜಾರಿ ಇರುವ ತುಮಕೂರು ಜಿಲ್ಲೆಯ ಹಲವೆಡೆ ಚೆಕ್‌ ಪೋಸ್ಟ್‌ಗಳನ್ನು ನಿರ್ಮಿಸಿ ವಾಹನಗಳ ತಪಾಸಣೆ ನಡೆಸುತ್ತಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಟ್ಟು 94.42 ಲಕ್ಷ ರೂ. ನಗದನ್ನು ಪೊಲೀಸರು ಈವರೆಗೆ ವಶಪಡಿಸಿಕೊಂಡಿದ್ದಾರೆ.

ಈ ಕುರಿತು ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ವಿದ್ಯಾಕುಮಾರಿ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, “ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಕೊರಟಗೆರೆ ಮತ್ತು ಮಧುಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಡಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 94.42 ಲಕ್ಷ. ನಗದನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಎ-02-ಎಇ-150 ವಾಹನವನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ 1.9 ಲಕ್ಷ ರೂ. ನಗದು ದೊರೆತಿದ್ದು, ವಾಹನದಲ್ಲಿದ್ದ ಮರೇಗೌಡ ಬಿನ್ ರಾಮೇಗೌಡ ಅವರನ್ನು ವಿಚಾರಿಸಿದಾಗ ಸಮಂಜಸವಾದ ಉತ್ತರ ನೀಡದ ಕಾರಣ ಪೊಲೀಸ್ ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಜೋಶಿ ಹಣಿಯಲು ಖೆಡ್ಡಾ ತೋಡಿ ಅಖಾಡಕ್ಕಿಳಿದ ಶೆಟ್ಟರ್

“ಮತ್ತೊಂದು ಪ್ರಕರಣದಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಮುದ್ದೇನಹಳ್ಳಿ ಚೆಕ್‌ಪೋಸ್ಟ್ ಬಳಿ ಚಿತ್ತಗುಂಟ ವೇಣುಗೋಪಾಲ ರೆಡ್ಡಿ ಬಿನ್ ವೆಂಕಟರೆಡ್ಡಿ ಎಂಬುವವರ ವಾಹನವನ್ನು ತಪಾಸಣೆ ನಡೆಸಿದಾಗ 7.50 ರೂ ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದರಿಂದ ವಾಹನ ಮತ್ತು ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು....

ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ,...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...