ರಸ್ತೆಯಲ್ಲಿ ಬಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ನಗರದಲ್ಲಿ ನಡೆದಿದೆ.
ವಿನಾಯಕ ಶ್ರೀಶೈಲ (13) ಮೃತ ಬಾಲಕ ಎಂದು ಗುರುತಿಸಲಾಗಿದೆ.
ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ವಿದ್ಯುತ್ ತಂತಿ ನೆಲಕ್ಕೆ ಬಿದ್ದಿತ್ತು. ಬಾಲಕ ಬೆಳಿಗ್ಗೆ ಬಹಿರ್ದೆಸೆಗೆ ತೆರಳುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ ಹಿನ್ನೆಲೆ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಜೆಸ್ಕಾಂ ಇಲಾಖೆ ಅಧಿಕಾರಿಗಳು ಹಾಗೂ ಕನಕಗಿರಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
