ಬೀದರ್‌ | ಕವಿಗೋಷ್ಠಿಗೆ ಬಂದಿದ್ದ ಕೆನಡಾದ ಕವಿ ಹೃದಯಾಘಾತದಿಂದ ನಿಧನ

Date:

ಕೆನಡಾ ದೇಶದ ಪೌರತ್ವ ಹೊಂದಿರುವ ಉತ್ತರಪ್ರದೇಶದ ಅಲಿಗಢ ಮೂಲದ ಉರ್ದು ಕವಿ ತಾರೀಕ್‌ ಫಾರುಕ್‌ (78) ಎಂಬುವರು ಭಾನುವಾರ ಬಸವಕಲ್ಯಾಣದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

- Advertisement -

ಬಸವಕಲ್ಯಾಣ ನಗರದ ತೇರು ಮೈದಾನದ ಬಿಕೆಡಿಬಿ ಸಭಾ ಭವನದಲ್ಲಿ ಕರ್ನಾಟಕ ಟೆಕ್ನೋಕ್ರೇಟ್‌ ಅಸೋಸಿಯೇಶನ್‌ ವತಿಯಿಂದ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಟ್ಟದ ಮುಷಾಯಿರಾ ಹಾಗೂ ಕವಿ ಸಮ್ಮೇಳನದಲ್ಲಿ ಭಾಗವಹಿಸಲು ಅವರು ಬಸವಕಲ್ಯಾಣಕ್ಕೆ ಬಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೊದಲೇ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದ ಹಿನ್ನಲೆಯಲ್ಲಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.

ಉತ್ತರ ಪ್ರದೇಶದ ಅಲಿಗಢ ಮೂಲದವರಾದ ಕವಿ ತಾರೀಖ್‌ ಮೂರು ದಶಕಗಳಿಂದ ಕೆನಡಾದಲ್ಲಿ ನೆಲೆಸಿ ಅಲ್ಲಿನ ಪೌರತ್ವ ಪಡೆದಿದ್ದರು. ಉದ್ಯೋಗದ ಜೊತೆಗೆ ಮುಷಾಯಿರಾ ಹೇಳುವ ಪ್ರವೃತ್ತಿ ಹೊಂದಿದ್ದರು.

ಮೃತರಿಗೆ ಇಬ್ಬರು ಪುತ್ರರು ಅಲಿಗಢದಲ್ಲಿ ಇರುವುದರಿಂದ ಮೃತದೇಹವನ್ನು ರವಾನಿಸಲಾಗಿದೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...