ಕಲಬುರಗಿ | ಮತಾಂತರ ಆರೋಪ; ನರ್ಸ್‌ ಮನೆಗೆ ನುಗ್ಗಿ ದಾಂಧಲೆ ; 9 ಮಂದಿ ವಿರುದ್ಧ ಪ್ರಕರಣ ದಾಖಲು

Date:

ಬಲವಂತವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಾರೆಂದು ಆರೋಪಿಸಿ ಸರ್ಕಾರಿ ಆಸ್ಪತ್ರೆಯ ನರ್ಸ್‌ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಕಲಬುರಗಿ ಜಿಲ್ಲೆಯ  ಕಾಳಗಿ ತಾಲೂಕಿನ ರಟಕಲ್‌ನಲ್ಲಿ ನಡೆದಿದೆ. ಅನೈತಿಕ ಪೊಲೀಸ್‌ಗಿರಿ ನಡೆಸಿದ 9 ಜನರ ವಿರುದ್ಧ ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ​ ದಾಖಲಾಗಿದೆ.

- Advertisement -

ರಟಕಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹುಮನಾಬಾದ ತಾಲೂಕು ಮೂಲದ ಅಶ್ವಿನಿ ಎಂಬುವರು ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಗ್ರಾಮದ ಎ.ಎನ್.ಎಂ ಕ್ವಾರ್ಟಸ್‌ನಲ್ಲಿ ಆರೋಗ್ಯ ಇಲಾಖೆ ಮನೆ ನೀಡಿದೆ. ಆ ಮನೆಗೆ ನುಗ್ಗಿ ಕೆಲವರು ದಾಂಧಲೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಘಟನೆ ಬಗ್ಗೆ ದೂರು ನೀಡಿರುವ ಅಶ್ವಿನಿ, “ನಾನು ಮತ್ತು ನನ್ನ ಜೊತೆ ಇನ್ನೂ ಮೂವರು ಸೇರಿ ಮನೆ ಸ್ವಚ್ಛಗೊಳಿಸಿ ಪೂಜೆ ಮಾಡುತ್ತಿದ್ದೆವು. ಈ ವೇಳೆ ಏಕಾಏಕಿ ಮನೆಗೆ ನುಗ್ಗಿದ 10-15 ಜನರು ರಾತ್ರಿ 8 ಗಂಟೆಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿದ್ದಾರೆ. ಕ್ರಿಶ್ಚಿಯನ್ ಗೆ ಮತಾಂತರ ಮಾಡುತ್ತಿರುವುದಾಗಿ‌ ಆರೋಪಿಸಿ ವಿಡಿಯೋ ಮಾಡಿದ್ದಾರೆ” ವಿವರಿಸಿದ್ದಾರೆ.

“ಪೂಜಾ ಮನೆಗೆ ಬೂಟ್ಟು, ಚಪ್ಪಲಿಗಳು ಹಾಕಿಕೊಂಡು ನುಗ್ಗಿ ಕ್ರಿಶ್ಚಿಯನ್ ದೇವರನ್ನು ಪೂಜೆ ಮಾಡುತ್ತಿದ್ದೀರಿ, ಅಂಬಾಭವಾನಿ ಪೋಟೋ ಇಟ್ಟು ಪೂಜೆ ಮಾಡಬೇಕೆಂದು ಗದರಿಸಿ ಜಾತಿ ನಿಂದನೆ ಮಾಡಿ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿ ಮಾನಹಾನಿ ಮಾಡಿದ್ದಾರೆ” ಎಂದು ಅಶ್ವಿನಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕೆಇಎ ಪರೀಕ್ಷೆ ಅಕ್ರಮ ಪ್ರಕರಣ : ಹಾಸ್ಟೆಲ್‌ ವಾರ್ಡನ್‌ ಬಂಧನ

“ನಮ್ಮ ಮೇಲೆ ದೂರು ನೀಡಿದರೆ ನಿನಗೆ ಸೇವೆಯಿಂದ ತೆಗೆಯುತ್ತೇವೆ, ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ” ರಟಕಲ್‌ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...