- ಖರ್ಗೆ, ಹೆಂಡತಿ ಮಕ್ಕಳನ್ನು ಸಾಫ್ ಮಾಡ್ತಿನಿ ಎಂದಿದ್ದ ಆರೋಪಿ
- ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ
‘ಖರ್ಗೆ, ಹೆಂಡತಿ ಮಕ್ಕಳನ್ನು ಸಾಫ್ ಮಾಡ್ತೀನಿ’ ಎಂದಿರುವ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ವಿರುದ್ಧ ಪಟ್ನಾದಲ್ಲಿ ಪ್ರಕರಣ ದಾಖಲಾಗಿದೆ.
ಬಿಹಾರ ಕಾಂಗ್ರೆಸ್ ಘಟಕವು ಪೊಲೀಸರಿಗೆ ಈ ಸಂಬಂಧ ದೂರು ದಾಖಲಿಸಿದ್ದು, ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬವನ್ನು ಮುಗಿಸುವ ಉದ್ದೇಶವನ್ನು ವ್ಯಕ್ತಪಡಿಸಿರುವುದು ಖಂಡನೀಯ. ನಾವು ಈ ಬಗ್ಗೆ ಎಫ್‌ಐಆರ್ ದಾಖಲಿಸಿದ್ದೇವೆ ಎಂದು ಕಾಂಗ್ರೆಸ್ ನಾಯಕ ಅಜಿತ್ ಶರ್ಮಾ ಹೇಳಿದ್ದಾರೆ.
ಕಲಬುರಗಿ ಜಿಲ್ಲೆ ಚಿತ್ತಾಪುರ ವಿಧಾನಸಭಾ (ಎಸ್‌ಸಿ ಮೀಸಲು) ಕ್ಷೇತ್ರದಲ್ಲಿ ಕೆಪಿಸಿಸಿ ಸಾಮಾಜಿಕ ಜಾಲತಾಣದ ಉಸ್ತುವಾರಿ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಣಿಕಂಠ ರಾಠೋಡ, ವ್ಯಕ್ತಿಯೊಬ್ಬರ ಜೊತೆಗಿನ ಮೊಬೈಲ್ ಸಂಭಾಷಣೆ ವೇಳೆ ಹೇಳಿದ್ದಾರೆ ಎನ್ನಲಾದ ಮಾತು ದೇಶದಾದ್ಯಂತ ವಿವಾದ ಸೃಷ್ಟಿ ಮಾಡಿತ್ತು.
ಈ ಸುದ್ದಿ ಓದಿದ್ದೀರಾ? ಮೈಸೂರು | ಖರ್ಗೆ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದವರನ್ನು ಬಂಧಿಸಿ – ದೇವನೂರರ ನೇತೃತ್ವದಲ್ಲಿ ಪ್ರತಿಭಟನೆ
ಆದರೆ, ಕಾಂಗ್ರೆಸ್ ನಾಯಕರ ಆರೋಪವನ್ನು ಅಲ್ಲಗಳೆದಿದ್ದ ಮಣಿಕಂಠ ರಾಠೋಡ, ನನ್ನ ವಿರುದ್ಧ ಸುಳ್ಳು ಆರೋಪ ಮಾಡಲು ಯಾರೋ ಮಾತನಾಡಿರುವ ಆಡಿಯೋ ಬಹಿರಂಗಪಡಿಸಲಾಗಿದೆ. ನಾನು ಮಾತನಾಡಿದ ಆಡಿಯೋ ಇದ್ದರೆ ಹಾಕಿ ಎಂದು ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದ್ದರು.