ವಿಜಯಪುರ | ಯುವತಿಯ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ : ಐವರು ಮಂಗಳಮುಖಿಯರ ಬಂಧನ

Date:

Advertisements

ವಿಜಯಪುರ ನಗರದಲ್ಲಿ ಮಂಗಳಮುಖಿಯೊಬ್ಬರನ್ನು ಸಾರ್ವಜನಿಕರ ಎದುರಲ್ಲೇ ವಿವಸ್ತ್ರಗೊಳಿಸಿ, ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ, ಅಮಾನವೀಯವಾಗಿ ವಿಕೃತಿ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನ ಮಂಗಳಮುಖಿಯರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಸೋನಾವಾಣೆ ಸ್ಪಷ್ಟಪಡಿಸಿದ್ದಾರೆ.

ʼಹಲ್ಲೆಗೊಳಗಾಗಿರುವ ಸಂತ್ರಸ್ತೆಯು ಮಂಗಳಮುಖಿಯಲ್ಲ, ಯುವತಿಯಾಗಿದ್ದು, ಯುವತಿ ವಿಜಯಪುರ ಸಮೀಪದ ಅರಕೇರಿ ಗ್ರಾಮದ ನಿವಾಸಿ. ಮಹಾರಾಷ್ಟ್ರದ ಪುಣೆಯಲ್ಲಿ ತೃತೀಯ ಲಿಂಗಿಗಳ ಜೊತೆಗಿದ್ದರು. ಅವರ ನಡುವೆ ವೈಯಕ್ತಿಕ ಕಾರಣಕ್ಕೆ ಭಿನ್ನಾಭಿಪ್ರಾಯ ತಲೆದೋರಿ, ಮಂಗಳಮುಖಿಯರು ಹಲ್ಲೆ ನಡೆಸಿರುವುದು ತನಿಖೆಯ ವೇಳೆ ತಿಳಿದುಬಂದಿದೆʼ ಎಂದು ಹೇಳಿದರು.

ʼಹಲ್ಲೆ ಪ್ರಕರಣದ ಆರೋಪಿಗಳಾದ ಜಿ.ಹುಲಗೆಮ್ಮ, ಕವಿತಾ, ಮಹಾನಮ್ಮ, ಅಶ್ವಿನಿ ಹಾಗೂ ಬಸಮ್ಮ ಎಂಬ ಐದು ಜನ ಮಂಗಳಮುಖಿಯರನ್ನು ಬಂಧಿಸಲಾಗಿದೆ. ಓರ್ವ ಮಂಗಳಮುಖಿ ಪರಾರಿಯಾಗಿದ್ದಾರೆʼ ಎಂದು ಮಾಹಿತಿ ನೀಡಿದ್ದಾರೆ.

Advertisements
1001164473

ಬಂಧಿತ ಆರೋಪಿಗಳು ಸದ್ಯ ಮಹಾರಾಷ್ಟ್ರದ ಪುಣೆಯಲ್ಲಿ ನೆಲೆಸಿದ್ದು, ಅಲ್ಲಿಂದ ಬಂದು ಈ ಕೃತ್ಯ ಎಸಗಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ವಿಜಯಪುರ ನಗರದ ಲಲಿತ್‌ ಮಹಲ್‌ ಹೋಟೆಲ್‌ ಎದುರು ಜೂನ್‌ 21ರಂದು ಪ್ರಕರಣ ನಡೆದಿತ್ತು. ಆದರೆ, ಈ ಬಗ್ಗೆ ಯಾರೂ ದೂರು ನೀಡಿರಲಿಲ್ಲ. ಪೊಲೀಸರ ಗಮನಕ್ಕೂ ಬಂದಿರಲಿಲ್ಲ.

ʼಜುಲೈ 31ರಂದು ಹಲ್ಲೆ ಪ್ರಕರಣದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ‍ವಿಷಯ ಗಮನಕ್ಕೆ ಬರುತ್ತಿದ್ದಂತೆ ಗೋಳಗುಮ್ಮಟ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ತಂಡ ರಚಿಸಲಾಗಿತ್ತು. ಕೇವಲ 24 ತಾಸಿನೊಳಗೆ ಆರೋಪಿಗಳನ್ನು ಬಂಧಿಸಲಾಗಿದೆʼ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಾಣೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಲೈಂಗಿಕ ಅಲ್ಪಸಂಖ್ಯಾತರ ಭಿಕ್ಷಾಟನೆಗೆ ಅಧಿಕಾರಿಗಳು ಅಡ್ಡಿ; ಆರೋಪ

ʼಯುವತಿಯನ್ನು ಬೆತ್ತಲೆಗೊಳಿಸಿ, ಅಮಾನವೀಯವಾಗಿ ಹಲ್ಲೆ ನಡೆಸಿರುವ ದೃಶ್ಯವನ್ನು ಕಂಡು ಸಾರ್ವಜನಿಕರು, ವಿವಿಧ ಸಂಘ,ಸಂಸ್ಥೆಗಳು, ರಾಜಕೀಯ ಪಕ್ಷಗಳ ಮುಖಂಡರು ತೀವ್ರವಾಗಿ ಖಂಡಿಸಿ, ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕುʼ ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X