ಬೀದರ್ | ಬಿರುಗಾಳಿಗೆ ಛಾವಣಿ ಸಮೇತ ತೂರಿ ಹೋದ ಮಗು; ಅಪಾಯದಿಂದ ಪಾರು

Date:

ಬೀದರ್ ತಾಲೂಕಿನ ಬುಧೇರಾ ಗ್ರಾಮದಲ್ಲಿ ಧನರಾಜ್ ತಮ್ಮ ಮಗುವನ್ನು ಮಲಗಿಸಲು ಮನೆಯ (ತಗಡು) ಛಾವಣಿಗೆ ಕಟ್ಟಿದ್ದ ಜೋಕಾಲಿ, ರಭಸದಿಂದ ಬಂದ ಗಾಳಿಗೆ ತಗಡು ಮಗುವಿನ ಸಮೆತ ತೂರಿ ಹೊರಗಿರುವ ಘಟನೆ ನಡೆದಿದೆ.

ಮಗುವಿಗೆ ಗಂಭೀರ ಪೆಟ್ಟಾಗಿರುವ ಸುದ್ದಿ ತಿಳಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ತಕ್ಷಣ ಸ್ಪಂದಿಸಿ ಸಕಾಲಕ್ಕೆ ಅಂಬುಲೆನ್ಸ್ ಕಳಿಸಿ ಮಗುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದರು.

ಶಾಸಕರು ಬೆಂಗಳೂರಿನಲ್ಲಿ ಇರುವ ಕಾರಣ ಬೀದರ್ ತಹಶೀಲ್ದಾರ್ ದಿಲಶಾದ್ ಮಹತ್ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಘಟನೆ ನಡೆದಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಲು ತಿಳಿಸಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಹ ಪರಿಶೀಲನೆ ನಡೆಸಲು ಸೂಚಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆ ಎಲ್ಲ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಅಧಿಕಾರಿಗಳೆ ತಿಳಿಸಿದ್ದಾರೆ. ಜಿಲ್ಲಾ ಆಸ್ಪತ್ರೆಗೆ ಕರೆ ಮಾಡಿ ಗಾಯಾಳು ಮಗುವಿಗೆ ಉತ್ತಮ ಚಿಕಿತ್ಸೆ ನೀಡಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ವಿಪರೀತ ಗಾಳಿ ಮಳೆಯಿಂದ ಅನಾಹುತ ಸಂಭವಿಸುವ ಸಾಧ್ಯತೆ ಇದ್ದು, ಎಲ್ಲ ಗ್ರಾಮಗಳಲ್ಲಿ ಜನರು ಎಚ್ಚರ ವಹಿಸಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬೈಕ್‌ ಅಪಘಾತ; ಸಾಹಿತಿ ಸಾವು

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,...

ಬೆಂಗಳೂರು ಗ್ರಾಮಾಂತರ | ಕಾಂಗ್ರೆಸ್‌ನ ಡಿ.ಕೆ. ಸುರೇಶ್ ಪರ ನಟ ದರ್ಶನ್ ಪ್ರಚಾರ

ಲೋಕಸಭಾ ಚುನಾವಣೆಯ ಹಿನ್ನೆಲೆ, ರಾಜ್ಯದಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು ಪ್ರಚಾರ ಭರಾಟೆ...

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಿತಕ್ಕಾಗಿ ಸೌಮ್ಯ ರೆಡ್ಡಿಗೆ ಮತ ನೀಡಿ: ನಟ ಧ್ರುವ ಸರ್ಜಾ

ಲೋಕಸಭಾ ಚುನಾವಣೆ ಹಿನ್ನೆಲೆ, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಬೆಂಗಳೂರು ದಕ್ಷಿಣ...

ಕಲಬುರಗಿ | ನೇಹಾಳ ಭೀಕರ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಎಸ್ಎಫ್ಐ ಆಗ್ರಹ

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ,...