ಬೀದರ್‌ | ಸರ್ಕಾರಿ ಸೌಲಭ್ಯದಿಂದ ವಂಚಿತರಾಗಿರುವ ವೃದ್ಧ ಮಹಿಳೆ: ಕಣ್ಣು ಹಾಯಿಸುವರೇ ಅಧಿಕಾರಿಗಳು?

Date:

ಅಧಿಕಾರಿಗಳ ಎಡವಟ್ಟು, ನಿರ್ಲಕ್ಷ್ಯದಿಂದಾಗಿ ಅನ್ನಭಾಗ್ಯ, ಗೃಹಲಕ್ಷ್ಮಿ, ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳಿಂದ ವಂಚಿತವಾಗಿರುವ ನಿರ್ಗತಿಕ ವೃದ್ಧ ಮಹಿಳೆಯೊಬ್ಬರು ಸಂಕಷ್ಟದಲ್ಲಿ ಬದುಕು ದೂಡುತ್ತಿದ್ದಾರೆ.

- Advertisement -

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಮೋರಂಬಿ ಗ್ರಾ.ಪಂ.ವ್ಯಾಪ್ತಿಗೆ ಒಳಪಡುವ ರಾಚಪ್ಪ ಗೌಡಗಾಂವ್ ಗ್ರಾಮದಲ್ಲಿ ಜೀಜಾಬಾಯಿ ಮಾಧವರಾವ್ ಎನ್ನುವ ನಿರ್ಗತಿಕ ವಯೋವೃದ್ಧ ಮಹಿಳೆ ಸರ್ಕಾರದ ಸೌಲಭ್ಯ ಸಿಗದೇ ತುತ್ತು ಅನ್ನಕ್ಕಾಗಿ ಪರದಾಡುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜೀಜಾಬಾಯಿಗೆ ಓರ್ವ ಮಗನಿದ್ದ, ಆತ ಎಂಟತ್ತು ವರ್ಷದ ಹಿಂದೆ ಸಾವನಪ್ಪಿದ್ದಾನೆ, ಸೊಸೆ ಬೇರೆ ಕಡೆ ವಾಸವಾಗಿದ್ದಾರೆ. ಸಕ್ಕರೆ ಕಾರ್ಖಾನೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಗಂಡನನ್ನು ಕಳೆದುಕೊಂಡ ಜೀಜಾಬಾಯಿ, ಸದ್ಯ ತಗಡಿನ ಶೀಟ್ ಇರುವ ಮನೆಯಲ್ಲಿ ಒಂಟಿ ಜೀವನ ನಡೆಸುತ್ತಿದ್ದಾರೆ. ಅಜ್ಜಿಗೆ 64 ವರ್ಷದವಾದರೂ ʼಕಷ್ಟ ಎಲ್ಲರಿಗೂ ಬರುತ್ತದೆʼ ಎಂದು ಹೆದರದೇ ಕೂಲಿಗೆ ಹೋಗುವುದು ಅನಿವಾರ್ಯವಾಗಿದೆ.

ʼಈ ಅಜ್ಜಿಗೆ ಇಲ್ಲಿಯವರೆಗೆ ಯಾವುದೇ ಸರಕಾರಿ ಸೌಲಭ್ಯಗಳು ದೊರಕದೇ ಇರುವುದು ವಿಪರ್ಯಾಸ. ಇವರ ಬಳಿ ಚುನಾವಣೆ ಚೀಟಿ, ಆಧಾರ್‌ ಚೀಟಿ, ಬ್ಯಾಂಕ್‌ ಪಾಸ್‌ ಬುಕ್‌ ಇದೆ. ಈ ಹಿಂದೆ ಅಂತ್ಯೋದಯ ಪಡಿತರ ಚೀಟಿ ಸಹ ಇತ್ತು. ಆದರೆ ಕಂದಾಯ ಇಲಾಖೆ ಅಧಿಕಾರಿಗಳ ಎಡವಟ್ಟಿನಿಂದ ಅಂತ್ಯೋದಯ ಪಡಿತರ ಚೀಟಿ ರದ್ದಾಗಿದ್ದು, ಅಜ್ಜಿಯ ಹೆಸರು ಬಿಪಿಎಲ್ ಚೀಟಿ ಪಟ್ಟಿಗೆ ಸೇರ್ಪಡೆಯಾಗಿದೆ. ಇದರಿಂದಾಗಿ ಕಳೆದ 2 ವರ್ಷದಿಂದ ಅನ್ನಭಾಗ್ಯ ಯೋಜನೆಯ ಅಕ್ಕಿ ಕೂಡ ನೀಡುತ್ತಿಲ್ಲ. ಇನ್ನು ವೃದ್ಧಾಪ್ಯ ವೇತನ, ವಿಧವಾ ವೇತನ, ಗೃಹಲಕ್ಷ್ಮಿ ಯೋಜನೆಯಿಂದ ವಂಚಿತಗೊಂಡಿದ್ದಾರೆ.

ʼಗಂಡ, ಮಗನನ್ನು ಕಳೆದುಕೊಂಡು ಒಬ್ಬಂಟಿಯಾಗಿ ಬದುಕುತ್ತಿದ್ದೇನೆ. ನನಗೆ ಒಂದು ಗುಂಟೆ ಜಮೀನು ಕೂಡ ಇಲ್ಲ. ಆದರೆ ಕಳೆದ ಎರಡು ವರ್ಷದಿಂದ ಇರುವ ಉಚಿತ ರೇಷನ್‌ ಕಾರ್ಡ್‌ ಕಟ್‌ ಮಾಡ್ಯಾರ್. ಹಿಂಗಾಗಿ ತಿಂಗಳ ರೊಕ್ಕ, ಗೃಹಲಕ್ಷ್ಮಿ, ರೇಷನ್‌ ಏನೂ ಬರಲ್ಲ.ಮೊದಲೇ ಕೂಲಿ ಮಾಡೋಕೆ ಕೈಲಾಗಲ್ಲ, ಬದುಕೋದು ಭಾಳ್‌ ಕಷ್ಟ ಆಗ್ಯಾದ್. ಈಗಾದರೂ ಅಧಿಕಾರಿಗಳು‌ ಹೊಸ ರೇಷನ್‌ ಕಾರ್ಡ್‌ ಮಾಡ್ಸಿ, ತಿಂಗಳ ರೊಕ್ಕ ಕೊಡಲಿʼ ಎಂದು ವೃದ್ಧ ಮಹಿಳೆ ಜೀಜಾಬಾಯಿ ಈ ದಿನ.ಕಾಮ್‌ ಜೊತೆಗೆ ಮಾತನಾಡಿ ಅಳಲು ತೋಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಶಾಸಕ ಮುನಿರತ್ನ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸುವಂತೆ ಮುಖ್ಯಮಂತ್ರಿಗೆ ಮನವಿ

ಈ ಬಗ್ಗೆ ಭಾಲ್ಕಿ ತಹಶೀಲ್ದಾರ್‌ ಮಲ್ಲಿಕಾರ್ಜುನ್‌ ವಡ್ಡನಕೇರಿ ಅವರಿಗೆ ವಿಚಾರಿದಾಗ, ʼಜೀಜಾಬಾಯಿ ಅವರ ಪಡಿತರ ಚೀಟಿ ಬದಲಾವಣೆಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಿ ಹೊಸ ರೇಷನ್‌ ಕಾರ್ಡ್‌ ಬದಲಾವಣೆ ಮಾಡಿಕೊಡಲಾಗುವುದು. ರೇಷನ್‌ ಕಾರ್ಡ್‌ ಬಂದ ಬಳಿಕ ವೃದ್ಧಾಪ್ಯ ವೇತನ ಸಹ ಮಂಜೂರು ಮಾಡಲಾಗುವುದುʼ ಎಂದು ತಿಳಿಸಿದ್ದಾರೆ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...