ಬೀದರ್‌ | ನೆಲಕ್ಕುರುಳಿದ ಶಾಲಾ ಕೊಠಡಿ; ತಪ್ಪಿದ ಭಾರೀ ಅನಾಹುತ

Date:

Advertisements
ಹುಮನಾಬಾದ ತಾಲೂಕಿನ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ರವಿವಾರ ಸುರಿದ ಧಾರಾಕಾರ ಮಳೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಕೋಣೆ ಸಂಪೂರ್ಣ ನೆಲಕ್ಕುರುಳಿದ್ದು, ಅದೃಷ್ಟವಶಾತ್‌ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.

ಸೋಮವಾರ ಮುಂಜಾನೆ ಶಾಲಾ ಆವರಣದಲ್ಲಿ ಗಾಂಧೀಜಿ ಜಯಂತಿ ಆಚರಿಸುವ ವೇಳೆ ಈ ಅವಘಡ ಸಂಭವಿಸಿದ್ದು, ವಿದ್ಯಾರ್ಥಿ ಹಾಗೂ ಶಿಕ್ಷಕರು ಆವರಣದಲ್ಲಿ ಇರುವ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಹಳ್ಳಿಖೇಡ(ಬಿ) ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 112 ಮಕ್ಕಳು ವ್ಯಾಸಂಗ ಮಾಡುತ್ತಾರೆ. ಆದರೆ ವಿದ್ಯಾರ್ಥಿಗಳಿಗೆ ಅನುಗುಣವಾಗಿ ಕೋಣೆಗಳಿಲ್ಲ. ಕಳಪೆ ಕಾಮಗಾರಿ ನಡೆದ ಪರಿಣಾಮ ಸಂಪೂರ್ಣ ಒಂದು ಕೋಣೆ ನೆಲಕ್ಕುರುಳಿದೆ. ಶಿಥಿಲಗೊಂಡ ಕೋಣೆ ನೆಲಸಮಗೊಳಿಸಲು ಮುಖ್ಯ ಶಿಕ್ಷಕರು ಇಲಾಖೆಗೆ ಪತ್ರ ಬರೆದರೂ ಶಿಥಿಲಾವಸ್ಥೆಗೆ ತಲುಪಿದ ಕೊಠಡಿ ನೆಲಸಮಗೊಳಿಸದೆ ಇಲಾಖೆ ನಿರ್ಲಕ್ಷ್ಯ ವಹಿಸಿತ್ತು. ಪರಿಣಾಮ ಈ ಘಟನೆ ಜರುಗಿದೆ. ಮುಂದೆ ಇಂತಹ ಅನಾಹುತಗಳು ಮರುಕಳಿಸದಂತೆ ಇಲಾಖೆ ಎಚ್ಚರವಹಿಸಬೇಕೆಂದು ಆಪ್‌ ಮುಖಂಡ ಪವನ ಗೊಂಡಾ ಈದಿನ.ಕಾಮ್‌ ದೊಂದಿಗೆ ಮಾತನಾಡಿ ಆಗ್ರಹಿಸಿದರು.

ಈ ಬಗ್ಗೆ ಶಾಲೆಯ ಮುಖ್ಯಗುರು ಕುಪೇಂದ್ರ ಶಾಸ್ತ್ರಿ ಈದಿನ.ಕಾಮ್‌ ದೊಂದಿಗೆ ಮಾತನಾಡಿ, ನಿನ್ನೆ ಮುಂಜಾನೆ ಗಾಂಧೀಜಿ ಜಯಂತಿ ಆಚರಿಸುವ ಸಂದರ್ಭದಲ್ಲಿ ಶಾಲೆಯ ಒಂದು ಕೋಣೆ ಛಾವಣಿ ಕುಸಿದು ಬಿದ್ದಿದೆ. ಕೋಣೆಯ ಮೇಲ್ಭಾಗದಲ್ಲಿ ನಿರ್ಮಿಸಿದ ನಾಲ್ಕು ಶೌಚಾಲಯಗಳು ನೆಲಕ್ಕುರುಳಿವೆ. ಈ ಕೋಣೆ ಶಿಥಿಲಗೊಂಡ ಹಿನ್ನಲೆಯಲ್ಲಿ ಬೀಗ ಹಾಕಲಾಗಿತ್ತು. ಶಿಕ್ಷಣ ಇಲಾಖೆ ಅಧಿಕಾರಿಗಳಿಗೂ ಕೋಣೆ ಶಿಥಿಲಾವಸ್ಥೆ ಬಗ್ಗೆ ಮಾಹಿತಿ ನೀಡಲಾಗಿತ್ತು. ಯಾವುದೇ ಅಪಾಯ ನಡೆದಿಲ್ಲ. ಸದ್ಯ ಆವರಣದಲ್ಲೇ ಇರುವ ಉರ್ದು ಶಾಲೆಯ ಎರಡು ಕೋಣೆಯಲ್ಲಿ ಮಕ್ಕಳ ಬೋಧನೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

Advertisements

ಶಾಸಕರ ಭೇಟಿ; ಹೊಸ ಕೊಠಡಿ ಮಂಜೂರು:

ಘಟನಾ ಸ್ಥಳಕ್ಕೆ ಹುಮನಾಬಾದ್‌ ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್‌, ತಹಸೀಲ್ದಾರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು. ಶಾಸಕ ಡಾ. ಸಿದ್ದು ಪಾಟೀಲ್‌ ಮಾತನಾಡಿ, “ಇಂತಹ ಘಟನೆಗಳನ್ನು ಮರುಕಳಿಸದಂತೆ ಪರಿಶೀಲಿಸಿ ಕ್ಷೇತ್ರದಲ್ಲಿರುವ ಎಲ್ಲಾ ಶಾಲೆಗಳಿಗೆ ಕ್ಷೇತ್ರದ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಶಿಥಿಲಗೊಂಡಿರುವ ಶಾಲಾ ಕಟ್ಟಡಗಳ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕುಸಿದಿರುವ ಶಾಲಾ ಕಟ್ಟಡವನ್ನು ತಕ್ಷಣವೇ ನೆಲಸಮಗೊಳಿಸಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಯೋಜನೆಯಲ್ಲಿ 3 ಹೊಸ ಕೊಠಡಿಗಳನ್ನು ಮಂಜೂರಾತಿ ಮಾಡಲು ಅಧಿಕಾರಿಗಳಿಗೆ ಆದೇಶಿಸಿದರು.

hallikhed 1

ಈ ಸುದ್ದಿ ಓದಿದ್ದೀರಾ? ಬೀದರ್ | ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಸರ್ಕಾರದ ನಡೆಗೆ ಖಂಡನೆ

ಜಿಲ್ಲೆಯಾದ್ಯಂತ ಅನೇಕ ಶಾಲೆಗಳಲ್ಲಿ ಶಿಥಿಲಾವಸ್ಥೆಗೆ ತಲುಪಿದ ಕೋಣೆಗಳಿದ್ದು, ಕುಸಿತದ ಆತಂಕದಲ್ಲಿಯೇ ವಿದ್ಯಾರ್ಥಿಗಳಷ್ಟೇ ಅಲ್ಲ ಶಿಕ್ಷಕರೂ ದಿನಗಳನ್ನು ಕಳೆಯುತ್ತಿದ್ದಾರೆ. ಇನ್ನು ಹಲವೆಡೆ ವಿದ್ಯಾರ್ಥಿಗಳಿಗೆ ಅನುಗುಣವಾಗಿ ಕೋಣೆಗಳಿಲ್ಲ, ಕೆಲವು ಕಡೆ ಮಕ್ಕಳ ಸಂಖ್ಯೆಗಿಂತ ಕೋಣೆಗಳ ಸಂಖ್ಯೆಯೇ ಅಧಿಕವಾಗಿದೆ. ಕಳೆಪೆ ಕಾಮಗಾರಿ ನಡೆಸಿದರೂ ಇಲಾಖೆ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳದ ಪರಿಣಾಮ ಇಂತಹ ಅನಾಹುತಕ್ಕೆ ಕಾರಣವಾಗುತ್ತವೆ. ಮಕ್ಕಳು ಕಲಿಕೆಯ ವೇಳೆ ಈ ಘಟನೆ ಸಂಭವಿಸಿದರೆ ಮಕ್ಕಳ ಹಾಗೂ ಶಿಕ್ಷಕರ ಗತಿ ಏನಾಗುತ್ತಿತ್ತು ಎನ್ನುವುದು ಪ್ರಜ್ಞಾವಂತ ನಾಗರಿಕರ ಒಕ್ಕೊರಲ ಪ್ರಶ್ನೆಯಾಗಿದೆ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X