ದಕ್ಷಿಣ ಕನ್ನಡ | ಕೋಳಿ ಸಾಂಬರ್‌ಗಾಗಿ ಜಗಳ; ಮಗನನ್ನೇ ಹತ್ಯೆಗೈದ ತಂದೆ

Date:

  • ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ಘಟನೆ
  • ಆರೋಪಿ ತಂದೆಯನ್ನು ಬಂಧಿಸಿರುವ ಪೊಲೀಸರು

ಕೋಳಿ ಸಾಂಬರ್‌ ವಿಚಾರಕ್ಕೆ ಜಗಳ ನಡೆದು ತಂದೆಯೇ ಮಗನನ್ನು ಹೊಡೆದು ಹತ್ಯೆಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆದಿದೆ.

ಶಿವರಾಮ (32) ಮೃತ ವ್ಯಕ್ತಿ. ಆತನ ತಂದೆ ಶೀನ ಹತ್ಯೆ ಮಾಡಿದ ಆರೋಪಿಯಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಮನೆಯಲ್ಲಿ ಮಾಡಿದ್ದ ಕೋಳಿ ಸಾಂಬರನ್ನು ತಂದೆ ಶೀನ ತಿಂದು ಮುಗಿಸಿದ್ದ. ಶಿವರಾಮ ಮನೆಗೆ ಬರುವ ಹೊತ್ತಿಗೆ ಕೋಳಿ ಸಾಂಬರ್‌ ಖಾಲಿ ಆಗಿತ್ತು. ತನಗೆ ಸ್ವಲ್ಪವೂ ಉಳಿಸದೆ ತಿಂದು ಮುಗಿಸಲಾಗಿದೆ ಎಂದು ತಂದೆ-ಮಗನ ನಡುವೆ ಜಗಳ ಶುರುವಾಯಿತು. ವಾಗ್ವಾದ ಮುಂದುವರಿದು ಇನ್ನಷ್ಟು ಕೋಪಗೊಂಡ ಶೀನ ದೊಣ್ಣೆಯಿಂದ ಶಿವರಾಮನ ಮೇಲೆ ಹಲ್ಲೆ ಮಾಡಿದ್ದಾನೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ದಾಸ್ತಾನು ಆಗಿದ್ದ 18 ರಾಶಿ ಅದಿರಿಗೆ ಮುಕ್ತಿ

ಹೊಡೆದಾಟದಲ್ಲಿ ಗಂಭೀರ ಪೆಟ್ಟು ತಿಂದು ನೆಲಕ್ಕುರುಳಿದ ಶಿವರಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಘಟನೆ ಮಂಗಳವಾರ ನಡೆದಿದ್ದು, ಬುಧವಾರ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೃತ ಶಿವರಾಮಗೆ ಪತ್ನಿ ಮತ್ತು ಇಬ್ಬರು ಮಕ್ಕಳು ಇದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಇಂಗ್ಲಿಷ್‌ ಬ್ಯಾನರ್ ಹರಿದು ಕರವೇ ಕಾರ್ಯಕರ್ತರ ಆಕ್ರೋಶ; ವಶಕ್ಕೆ ಪಡೆದ ಪೊಲೀಸರು

ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 4ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮುನ್ನ...

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...

ಮಂಡ್ಯ | ರಸ್ತೆಯಲ್ಲಿ ಸಂಚರಿಸುವ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

ಬೈಕ್​​ನಲ್ಲಿ ಬಂದು ರಸ್ತೆಯಲ್ಲಿ ಓಡಾಡುವ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ...

ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ...