ಪ್ರತಿಯೊಂದು ಮಗುವಿನಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಪ್ರತಿಭೆ ಅನಾವರಣಕ್ಕೆ ವೇದಿಕೆ ಒದಗಿಸಿಕೊಡುವುದೇ ಪ್ರತಿಭಾ ಕಾರಂಜಿ ಆಗಿದೆ ಎಂದು ಶಿಕ್ಷಣ ಸಂಯೋಜಕ ಮಲ್ಲಿಕಾರ್ಜುನ ಕನ್ನಾಳೆ ಹೇಳಿದರು.
ಭಾಲ್ಕಿ ತಾಲೂಕಿನ ಡೋಣಗಾಪುರ ರಾಚೋಟೇಶ್ವರ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದ್ದ 2024-25ನೇ ಸಾಲಿನ ಡೋಣಗಾಪುರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ʼವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಲ್ಲಿಯೂ ತೊಡಗಿಸಿಕೊಳ್ಳಬೇಕು. ಒಂದೇ ಪ್ರಯತ್ನದಿಂದ ಗುರಿ ತಲುಪಲು ಸಾಧ್ಯವಿಲ್ಲ. ನಿರಂತರ ಪ್ರಯತ್ನ, ತಾಳ್ಮೆ ಮೈಗೂಡಿಸಿಕೊಂಡರೆ ಸಾಧನೆ ಶಿಖರ ಮುಟ್ಟಬಹುದುʼ ಎಂದು ಸಲಹೆ ನೀಡಿದರು.
ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದತ್ತಾತ್ರಿ ಕಾಟಕರ ಮಾತನಾಡಿ, ʼಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಹೆಚಿಸುತ್ತವೆ. ಹೆಚ್ಚಿನ ವಿದ್ಯಾರ್ಥಿಗಳು ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಶಿಕ್ಷಕರು ಪ್ರೇರಣೆ ನೀಡಬೇಕುʼ ಎಂದರು.

ಸಿಆರ್‌ಪಿ ಚಂದ್ರಕಾಂತ ತಳವಾಡೆ ಮಾತನಾಡಿ, ʼಸ್ಪರ್ಧೆಯಲ್ಲಿ ಗೆಲವು ಸಾಧಿಸಲೆಂದೇ ಸ್ಪರ್ಧಿಸಬಾರದು. ಸೋಲು-ಗೆಲುವು ಸರ್ವೇಸಾಮಾನ್ಯ. ಆದರೆ ಎಲ್ಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಅನಾವರಣಗೊಳಿಸುವುದು ಮುಖ್ಯವಾಗಿದೆʼ ಎಂದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಹಿಂದೂ-ಮುಸ್ಲಿಮರು ಶತ್ರುಗಳಲ್ಲ : ಅಕ್ಬರ್ ಅಲಿ
ಕಾರ್ಯಕ್ರಮದಲ್ಲಿ ಡೋಣೆಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೀರಶೆಟ್ಟಿ ಬಿರಾದಾರ, ಡೋಣಗಾಪುರ ಪಂಚಾಯತ್ ಅಧ್ಯಕ್ಷ ಸುರೇಶ ಮೋರೆ, ಪಿಕೆಪಿಎಸ್ ಅಧ್ಯಕ್ಷ ಶಾಂತವೀರ ಪಾಟೀಲ, ಶಿವರಾಜ ಪಾಟೀಲ, ಸಂಜಯ ಪುರಿ, ಶಿವರಾಜ ಘೋದೆ, ಕೃಷ್ಣ, ವಿಶ್ವನಾಥ, ಉತ್ತಮ ಸಿಂಧೆ, ಸತ್ಯವಾನ ಕಾಂಬಳೆ, ಜಗನಾಥ ನಾಟೆಕಾರ, ಸರಿತಕುಮಾರಿ, ಪದ್ಮಾವತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಚನ್ನಪ್ಪ ಚಿದ್ರೆ ನಿರೂಪಿಸಿದರು, ಗಂಗಾಧರ ವಂದಿಸಿದರು.