ಗುಬ್ಬಿಯಲ್ಲಿ ಜು.7 ರಂದು ಅದ್ದೂರಿ ದಿಂಡಿ ಉತ್ಸವ

Date:

ಆಷಾಢ ಮಾಸದ ಏಕಾದಶಿ ಹಿನ್ನಲೆ ಜುಲೈ 6 ಮತ್ತು 7 ರಂದು ಶ್ರೀ ರುಖ್ಖುಮಾಯಿ, ಶ್ರೀ ಪಾಂಡುರಂಗಸ್ವಾಮಿ ಅವರ 21 ನೇ ವರ್ಷದ ದಿಂಡಿ ಉತ್ಸವ ಕಾರ್ಯಕ್ರಮವನ್ನು ಪಟ್ಟಣದ ಭಾವಸಾರ ಕ್ಷತ್ರಿಯ ಸಮಾಜದಿಂದ ಆಯೋಜನೆ ಮಾಡಲಾಗಿದೆ. ಈ ಹಿನ್ನಲೆ ಸುಮಾರು 20 ಲಕ್ಷ ವೆಚ್ಚದ ಅದ್ದೂರಿ ದಿಂಡಿ ಉತ್ಸವ ವ್ಯವಸ್ಥೆ ಮಾಡಿದ ದಾನಿಗಳಾದ ನಾಗರತ್ನಬಾಯಿ ಜ್ಞಾನೇಶ್ವರರಾವ್ ಅವರು 21 ಅಡಿ ಎತ್ತರದ ಶ್ರೀ ಪಾಂಡುರಂಗ ಸ್ವಾಮಿ ಹಾಗೂ ರುಖ್ಖುಮಾಯಿ ಕಟೌಟ್ ಬಸ್ ಸ್ಟ್ಯಾಂಡ್ ಬಳಿ ನಿಲ್ಲಿಸಿ ಹಾಲಿನ ಅಭಿಷೇಕ ನಡೆಸಲಿದ್ದಾರೆ ಎಂದು ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷ ವಾಸುದೇವ ರಾವ್ ತಿಳಿಸಿದರು.

- Advertisement -

ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಎರಡು ದಿನಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಜುಲೈ.6 ರಂದು ಬೆಳಿಗ್ಗೆ 10 ಕ್ಕೆ ವಿಷ್ಣು ಸಹಸ್ರನಾಮ, ಕುಂಕುಮಾರ್ಚನೆ, ಅಷ್ಟೋತ್ತರ ಪೂಜೆ ನಡೆಸಲಾಗುವುದು. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಸಿ ದಾನಿಗಳಿಂದ ಪ್ರಸಾದ ವಿನಿಯೋಗ ಮಾಡಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರತಿ ವರ್ಷ ಮೆರವಣಿಗೆ ಸೇವೆ ನಡೆಸಿರುವ ದಾನಿಗಳಾದ ನಾಗರತ್ನ ಬಾಯಿ ಹಾಗೂ ಅವರ ಮಕ್ಕಳು ಲಕ್ಷಾಂತರ ಹಣ ದೇವರ ಕಾರ್ಯಕ್ಕೆ ಬಳಸಿದ್ದಾರೆ. ಅದ್ದೂರಿ ಮೆರವಣಿಗೆ ಪಟ್ಟಣದಲ್ಲಿ ಇತಿಹಾಸ ಸೃಷ್ಟಿಸಿದೆ. ಈ ಬಾರಿ 21 ಅಡಿಗಳ ಕಟೌಟ್ ಅತ್ಯಾಕರ್ಷಕವಾಗಲಿದೆ. ಈ ಜೊತೆಗೆ ಶ್ರೀ ಜ್ಞಾನೇಶ್ವರಿ ಪಾರಾಯಣ ಮತ್ತು ಭಜನೆ ಕೀರ್ತನೆ ನಡೆಸಲಾಗುವುದು. ಭಾವಸಾರ ಕ್ಷತ್ರಿಯ ಸಮಾಜದ ರಾಜ್ಯ ಘಟಕದ ಡಾ.ಸೂರ್ಯ ನಾರಾಯಣರಾವ್, ಗುರುಪ್ರಸಾದ್ ಪಿಸ್ಸೆ ಹಾಗೂ ಸತ್ಯನಾರಾಯಣ್ ಅವರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ ಎಂದರು.

ಜುಲೈ.7 ರಂದು ಬೆಳಿಗ್ಗೆ ಪೂಜಾ ಕೈಂಕರ್ಯ ನೆರವೇರಿಸಿ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಸಿ ದಾನಿಗಳಿಂದ ಪ್ರಸಾದ ವಿನಿಯೋಗ ನಡೆಯಲಿದೆ. ನಂತರ ಶ್ರೀ ಪಾಂಡುರಂಗಸ್ವಾಮಿ ಶ್ರೀ ರುಕ್ಮಿಣಿ ದೇವಿಯ ಅದ್ದೂರಿ ಮೆರವಣಿಗೆ ಊರಿನ ರಾಜ ಬೀದಿಗಳಲ್ಲಿ ಹೆಸರಾಂತ ಬೆಳ್ತಂಗಡಿ ಸಾಂಸ್ಕೃತಿಕ ಕಲಾ ಮೇಳದೊಂದಿಗೆ ಜರುಗಲಿದೆ. ಮುಖ್ಯ ಕೀರ್ತನಾಕಾರ ಧನಂಜಯ ಗುರೂಜಿ ಅವರು ಕೀರ್ತನೆ ಹಾಡಲಿದ್ದಾರೆ ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...