ಬೆಂಗಳೂರು | ವಿಶ್ವದಾಖಲೆ ಪ್ರಯತ್ನ: ಶಾಸಕರ ಭವನದ ಆವರಣದಲ್ಲಿ ಅಂಬೇಡ್ಕರ್‌ ಕುರಿತ ಬೃಹತ್ ಕ್ಯಾನ್ವಾಸ್ ಚಿತ್ರ ರಚನೆಗೆ ಸಿದ್ಧತೆ

Date:

Advertisements

ದೇಶದ ಸಂವಿಧಾನಕ್ಕೆ 75 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಸಂವಿಧಾನದ ಅಮೃತ ಮಹೋತ್ಸವ ಕಾರ್ಯಕ್ರಮದ ಭಾಗವಾಗಿ ಬೃಹತ್‌ ಕ್ಯಾನ್ವಾಸ್‌ ಮೇಲೆ ಸಂವಿಧಾನಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್ ಅವರ ಚಿತ್ರರಚನೆಯ ಲೈವ್ ಪೇಂಟಿಂಗ್ ಮಾಡುವ ಮೂಲಕ ವಿಶ್ವ ದಾಖಲೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಕಾರ್ಯಕ್ರಮದ ಆಯೋಜನೆ ಮಾಡಿರುವ ವಿಶ್ವ ಗುರು ಬುದ್ಧ ಪ್ರೊಡಕ್ಷನ್ಸ್ ಸಂಸ್ಥೆ ತಿಳಿಸಿದೆ. ವಿಧಾನಸೌಧದ ಶಾಸಕರ ಭವನದ ಆವರಣದಲ್ಲಿ ಈ ಕುರಿತಂತೆ ಭರದ ಸಿದ್ಧತೆ ನಡೆಯುತ್ತಿದೆ.

ನವೆಂಬರ್ 26ಕ್ಕೆ ಭಾರತದ ಸಂವಿಧಾನವು ಅಂಗೀಕಾರವಾಗಿ 75 ವರ್ಷಗಳು ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಸಂವಿಧಾನದ  ‘ಅಮೃತ ಮಹೋತ್ಸವ ಕಾರ್ಯಕ್ರಮ’ದ ಸವಿನೆನಪಿಗಾಗಿ ವಿಧಾನಸೌಧದ ಶಾಸಕರ ಭವನದ ಆವರಣದಲ್ಲಿ 30 ಅಡಿ ಉದ್ದ, 40 ಅಡಿ ಅಗಲದ ಒಟ್ಟು 1200 ಚದರ ಅಡಿಯ ಬೃಹತ್ ಕ್ಯಾನ್ವಾಸ್ ಮೇಲೆ ನವೆಂಬರ್ 18, 19  ಎರಡು ದಿನಗಳ ಕಾಲ ‘ಲೈವ್ ಪೇಂಟಿಂಗ್’ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಬೃಹತ್ ಚಿತ್ರಕಲೆಯನ್ನು 20-30 ಖ್ಯಾತ ಕಲಾವಿದರು ರಚಿಸಲಿದ್ದಾರೆ.

ಈ ಲೈವ್ ಪೇಂಟಿಂಗ್ ಕಾರ್ಯಕ್ರಮಕ್ಕೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಮತ್ತು ವಿಧಾನಪರಿಷತ್ತಿನ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರು ನವೆಂಬರ್‌ 18ರಂದು ಚಾಲನೆ ನೀಡಲಿದ್ದಾರೆ.‌ ಇದು ವಿಶ್ವದಾಖಲೆಯ ಪ್ರಯತ್ನವಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ದಾವಣಗೆರೆ | ರೈತರಿಗೆ ಹಣ ನೀಡದೆ ಕೋಟ್ಯಂತರ ರೂ. ವಂಚನೆ: ಕೊನೆಗೂ ಆರೋಪಿ ಶ್ರೀನಿವಾಸ್ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನವೆಂಬರ್ 26ರಂದು ಒಟ್ಟಾಗಿ ಪರದೆ ಎಳೆಯುವ ಮೂಲಕ ಈ ಬೃಹತ್‌ ಕಲಾಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.‌ ಸದ್ಯ ಬೃಹತ್ ಕ್ಯಾನ್ವಾಸ್ ಮೇಲೆ ಡಾ.ಬಿ. ಆರ್.ಅಂಬೇಡ್ಕರ್ ಅವರ ಚಿತ್ರ ರಚನೆಗೆ ಭರದ ಸಿದ್ಧತೆ ನಡೆಯುತ್ತಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X